Maharashtra assembly election: ಚುನಾವಣೆ ದಿನಾಂಕದ ಕುರಿತು ಸುಳಿವು ಕೊಟ್ಟ ಸಿಎಂ
ಮುಂಬೈ, ಸೆಪ್ಟೆಂಬರ್ 16: ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿರುವ ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆ ಯಾವಾಗ?. 288 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಹಲವು ರಾಜಕೀಯ ಬದಲಾವಣೆಗಳಿಗೆ ಕಾರಣವಾಗುವ ನಿರೀಕ್ಷೆ ಇದೆ. ಸದ್ಯ ರಾಜ್ಯದಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿ 'ಮಹಾಯುತಿ' ಮೈತ್ರಿಕೂಟದ ಸರ್ಕಾರ ಅಧಿಕಾರವನ್ನು ನಡೆಸುತ್ತಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಚುನಾವಣಾ ದಿನಾಂಕದ ಕುರಿತು ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ ನವೆಂಬರ್ 2ನೇ ವಾರದಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಎರಡು ಹಂತದಲ್ಲಿ ಚುನಾವಣೆ ನಡೆಸಿದರೆ ಉತ್ತಮ ಎಂದು ಅವರು ಹೇಳಿದ್ದಾರೆ.

ಏಕನಾಥ್ ಶಿಂಧೆ, "ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಮಾತುಕತೆ 8 ರಿಂದ 10 ದಿನದಲ್ಲಿ ಪೂರ್ಣಗೊಳ್ಳಲಿದೆ"ಎಂದು ತಿಳಿಸಿದ್ದಾರೆ.
ಕಾಂಗ್ರೆಸ್-ಬಿಜೆಪಿ ಎದುರಾಳಿಗಳು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ 2024ರಲ್ಲಿ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟ ವಿರೋಧ ಪಕ್ಷಗಳ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ (ಕಾಂಗ್ರೆಸ್, ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್))ದ ನಡುವೆ ನೇರ ಹಣಾಹಣಿ ನಡೆಯಲಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಸೀಟು ಹಂಚಿಕೆ ಮಾಡಿಕೊಂಡು ರಾಜ್ಯದಲ್ಲಿ ಚುನಾವಣೆ ಎದುರಿಸುತ್ತಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 48 ಕ್ಷೇತ್ರಗಳ ಪೈಕಿ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ 30 ಸೀಟುಗಳಲ್ಲಿ ಜಯಗಳಿಸಿದೆ. ಇದು ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದೆ? ಎಂದು ಕಾದು ನೋಡಬೇಕಿದೆ. ರಾಜ್ಯದಲ್ಲಿ ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 146.
'ಮಹಾವಿಕಾಸ್ ಅಘಾಡಿ' ಮೈತ್ರಿಕೂಟದಲ್ಲಿ ಕಾಂಗ್ರೆಸ್ 13 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಗೆಲುವು ಕಂಡಿದೆ. ಸೆಪ್ಟೆಂಬರ್ 12ರಂದು ಮೈತ್ರಿಕೂಟ 228 ಕ್ಷೇತ್ರಗಳ ಪೈಕಿ 125 ಸೀಟುಗಳ ಹಂಚಿಕೆ ಕುರಿತು ನಾವು ಅಂತಿಮ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಘೋಷಣೆ ಮಾಡಿದೆ.
2019ರ ಚುನಾವಣೆ ಮತಗಳಿಕೆಯನ್ನು ಈಗ ಲೆಕ್ಕಹಾಕುವಂತಿಲ್ಲ. ಏಕೆಂದರೆ ರಾಜ್ಯದ ಪ್ರಮುಖ ಪಕ್ಷವಾದ ಎನ್‌ಸಿಪಿ ಅಜಿತ್ ಪವಾರ್, ಶರದ್ ಪವಾರ್ ಎಂದು ಎರಡು ಭಾಗವಾಗಿದೆ. ಇದು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕುತೂಹಲಕ್ಕೆ, ಪ್ರಬಲ ಪೈಪೋಟಿಗೆ ಕಾರಣವಾಗಿದೆ. ಯಾರಿಗೆ ಹೆಚ್ಚು ಸ್ಥಾನ? ಎಂದು ಈಗಾಗಲೇ ಲೆಕ್ಕಾಚಾರ ನಡೆಯುತ್ತಿದೆ.
ಈ ಬಾರಿಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 'ಮಹಾವಿಕಾಸ್ ಅಘಾಡಿ' ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಅಂದಾಜಿಸಿವೆ. ಆದ್ದರಿಂದ ಮೈತ್ರಿ ಪಕ್ಷಗಳ ನಾಯಕರ ಉತ್ಸಾಹವೂ ಹೆಚ್ಚಿದೆ. ಸೀಟು ಹಂಚಿಕೆ ಪೂರ್ಣಗೊಳಿಸಿ ಚುನಾವಣಾ ಕಾರ್ಯದಲ್ಲಿ ತೊಡಗಿಕೊಳ್ಳಲು ಪಕ್ಷಗಳು ತಯಾರಿ ನಡೆಸಿವೆ.
ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ), ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿರುವ 'ಮಹಾಯುತಿ' ಮೈತ್ರಿಕೂಟದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿ, ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದಿರುವುದು ಕೇವಲ 9 ಸೀಟು. ಆದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನದಲ್ಲಿ ಜಯಗಳಿಸಬೇಕು ಎಂದು ಅವರು ತಂತ್ರವನ್ನು ರೂಪಿಸುತ್ತಿದ್ದಾರೆ. 120-125 ಸೀಟುಗಳಲ್ಲಿ ಸ್ಪರ್ಧಿಸಲು ಪಕ್ಷ ಬಯಸಿದೆ.












Click it and Unblock the Notifications