Maharashtra Election 2024: ಡಿಸಿಎಂ ಆಗಲು ಒಪ್ಪಿದ ಶಿಂಧೆ, ಬಿಜೆಪಿ ಸಿಎಂ ಅಭ್ಯರ್ಥಿ ಇಂದು ಘೋಷಣೆ
ಮುಂಬೈ, ಡಿಸೆಂಬರ್ 04: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭ ಗುರುವಾರ ನಡೆಯಲಿದೆ. ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಜೊತೆ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ನಡೆಸಿದ ಮಾತುಕತೆ ಫಲ ನೀಡಿದೆ. 'ಮಹಾಯತಿ' ಮೈತ್ರಿಕೂಟದ ಹೊಸ ಸರ್ಕಾರ ರಚನೆಗೆ ಇದ್ದ ಎಲ್ಲಾ ವಿಘ್ನಗಳು ನಿವಾರಣೆಯಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬುಧವಾರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.
ಮಂಗಳವಾರ ಸಂಜೆ ಏಕನಾಥ್ ಶಿಂಧೆ ನಿವಾಸಕ್ಕೆ ದೇವೇಂದ್ರ ಫಡ್ನವೀಸ್ ಭೇಟಿ ನೀಡಿದ್ದರು. ಸರ್ಕಾರ ರಚನೆಯ ಪ್ರಕ್ರಿಯೆ ಆರಂಭಗೊಂಡ ಬಳಿಕ ಮೊದಲ ಬಾರಿಗೆ ಉಭಯ ನಾಯಕರು ಭೇಟಿಯಾಗಿದ್ದು, ಕುತೂಹಲಕ್ಕೆ ಕಾರಣವಾಗಿತ್ತು. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಗ್ಗೆ ಶಿಂಧೆಗೆ ಫಡ್ನವೀಸ್ ಮಾಹಿತಿ ನೀಡಿದರು.

ದೇವೇಂದ್ರ ಫಡ್ನವೀಸ್ ಏಕನಾಥ್ ಶಿಂಧೆ ಜೊತೆ ಮಹಾಯತಿ ಮೈತ್ರಿಕೂಟದ ಸರ್ಕಾರ ರಚನೆ ಕುರಿತು ಚರ್ಚಿಸಿದರು. 2+1 (ಇಬ್ಬರು ಡಿಸಿಎಂ + ಒಬ್ಬರು ಸಿಎಂ) ಪ್ರಮಾಣ ವಚನದ ಕುರಿತು ಮಾತುಕತೆ ನಡೆಸಿದರು. ಫಡ್ನವೀಸ್ ಶಿಂಧೆ ಮನವೊಲಿಸಲು ಸಫಲರಾಗಿದ್ದು, ಅವರು ನೂತನ ಮಹಾಯತಿ ಮೈತ್ರಿಕೂಟದಲ್ಲಿ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಮತ್ತೊಂದು ಡಿಸಿಎಂ ಹುದ್ದೆ ಅಜಿತ್ ಪವಾರ್ ಪಾಲಾಗಲಿದೆ.
ನೂತನ ಮಹಾಯತಿ ಸರ್ಕಾರ: ನವೆಂಬರ್ 20ರಂದು ಮಹಾರಾಷ್ಟ್ರದ 288 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 23ರಂದು ಫಲಿತಾಂಶ ಘೋಷಣೆ ಮಾಡಲಾಗಿತ್ತು. ಬಿಜೆಪಿ ಚುನಾವಣೆಯಲ್ಲಿ 132 ಸೀಟುಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ 145.
ಚುನಾವಣಾ ಪೂರ್ವ ಮೈತ್ರಿಯಂತೆ 'ಮಹಾಯತಿ' ಮೈತ್ರಿಕೂಟದ ನೆರವಿನಿಂದ ಬಿಜೆಪಿ ಸರ್ಕಾರ ರಚಿಸಲಿದೆ. ಮೈತ್ರಿಕೂಟದ ಒಟ್ಟು ಸದಸ್ಯ ಬಲ 230. ಮೈತ್ರಿಕೂಟದಲ್ಲಿ ಶಿವಸೇನೆ (ಏಕನಾಥ್ ಶಿಂಧೆ ಬಣ) 57, ಎನ್‌ಸಿಪಿ (ಅಜಿತ್ ಪವಾರ್ ಬಣ) 41 ಸೀಟು ಹೊಂದಿವೆ. ಅತಿ ದೊಡ್ಡ ಪಕ್ಷವಾದ ಕಾರಣ ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ ಸಿಗಲಿದೆ.
ಡಿಸೆಂಬರ್ 5ರ ಗುರುವಾರ ಮುಂಬೈ ನಗರದ ಆಜಾದ್ ಮೈದಾನದಲ್ಲಿ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಈಗಾಗಲೇ ಸಮಾರಂಭದ ತಯಾರಿ ಜೋರಾಗಿ ಸಾಗಿದೆ. ಏಕನಾಥ್ ಶಿಂಧೆ, ಅಜಿತ್ ಪವಾರ್ ಮತ್ತು ನೂತನ ಮುಖ್ಯಮಂತ್ರಿಗಳು ಮಾತ್ರ ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ರಾಜ್ಯ ಬಿಜೆಪಿ ಘಟಕ ಬುಧವಾರ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಿದೆ. ಈ ಸಭೆಗೆ ಕೇಂದ್ರ ಬಿಜೆಪಿ ಘಟಕ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನೇಮಕ ಮಾಡಿದೆ. ಉಸ್ತುವಾರಿಗಳ ಸಮ್ಮುಖದಲ್ಲಿಯೇ ನೂತನ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ.
ಏಕನಾಥ್ ಶಿಂಧೆ ತಾವು ಹೊಸ ಸರ್ಕಾರದಲ್ಲಿ ಡಿಸಿಎಂ ಆಗುವುದಿಲ್ಲ. ತಮಗೆ ಗೃಹ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಗೃಹ ಖಾತೆ ಬಿಟ್ಟುಕೊಡಲು ಒಪ್ಪಿಗೆ ನೀಡಿರಲಿಲ್ಲ. ಆದ್ದರಿಂದ ಮಹಾಯತಿ ನೂತನ ಸರ್ಕಾರ ರಚನೆ ಕಗ್ಗಂಟಾಗಿತ್ತು. ಆದರೂ ಸಹ ಡಿಸೆಂಬರ್ 5ರಂದು ಪ್ರಮಾಣ ವಚನ ಸಮಾರಂಭ ಎಂದು ಬಿಜೆಪಿ ನಾಯಕರು ಘೋಷಣೆ ಮಾಡಿದ್ದರು.
2022ರಲ್ಲಿ ಮಹಾಯತಿ ಸರ್ಕಾರ ರಚನೆಯಾದಾಗ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರು. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾದರು. 2024ರ ಮಹಾಯತಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಡಿಸಿಎಂ ಆಗಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಬಿಜೆಪಿ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿ ಮಾಡಲಿದೆ ಎಂಬ ಸುದ್ದಿಗಳು ಹಬ್ಬಿವೆ. ಬೇರೆ ಯಾವ ನಾಯಕರ ಹೆಸರುಗಳು ಸಹ ಕೇಳಿ ಬರುತ್ತಿಲ್ಲ. ಆದ್ದರಿಂದ ಈ ಕುರಿತು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಫಡ್ನವೀಸ್ ಸಿಎಂ ಆಗಲು ಆರ್‌ಎಸ್‌ಎಸ್ ಸಹ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications