Jharkhand Election 2024: ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ 1.5 ಉದ್ಯೋಗ ಸೃಷ್ಟಿ: ಹಿಮಂತ ಬಿಸ್ವಾ ಶರ್ಮಾ ಭರವಸೆ
Jharkhand Assembly Election 2024: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನು ಬಿಜೆಪಿ ಅಧಿಕಾರಕ್ಕೆ ಬಂದರೆ, ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹಿಮಂತ ಬಿಸ್ವಾ ಅವರು ಭರವಸೆ ನೀಡಿದ್ದಾರೆ.
ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, 1.5 ಉದ್ಯೋಗ ಸೃಷ್ಟಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭರವಸೆ ನೀಡಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರಾಜ್ಯದಲ್ಲಿ ಇಂದು (ಅಕ್ಟೋಬರ್ 24) ಪ್ರಚಾರ ನಡೆಸಿದ ಅವರು, ರಾಜ್ಯದಲ್ಲಿ 1.5 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು. ಹರಿಯಾಣ, ಅಸ್ಸಾಂ ಹಾಗೂ ಮಧ್ಯಪ್ರದೇಶದಲ್ಲಿ ಇದನ್ನು ಬಿಜೆಪಿ ಜಾರಿಗೆ ತಂದಿದೆ. ಕೊಟ್ಟ ಭರವಸೆಯನ್ನು ಈಡೇರಿಸಲು ನರೇಂದ್ರ ಮೋದಿ ನಾಯಕತ್ವ ಸದಾ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಇನ್ನು ಹೇಮಂತ್ ಸೊರೇನ್ ನೇತೃತ್ವದ ಸಮ್ಮಿಶ್ರ ಸರ್ಕಾರವು ರಾಜ್ಯದಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಸಿದೆ. ಜನತೆ ಖನಿಜ ಸಂಪತ್ತಿನ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪ ಮಾಡಿದರು.
ಚತ್ತೀಸ್‌ಗಡ್‌ಗೆ ದ್ರೌಪದಿ ಮುರ್ಮು ಭೇಟಿ: ಮತ್ತೊಂದೆಡೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರದಿಂದ ಎರಡು ದಿನ ಚತ್ತೀಸ್‌ಗಡ್‌ಗೆ ಭೇಟಿ ನೀಡಲಿದ್ದು, ನಾಲ್ಕು ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ರಾಷ್ಟ್ರಪತಿ ಭೇಟಿ ಹಿನ್ನೆಲೆ ರಾಯಪುರ ಹಾಗೂ ದುರ್ಗ್ ಜಿಲ್ಲೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಶುಕ್ರವಾರ ಹಾಗೂ ಶನಿವಾರ ವಾಹನಗಳ ಸಂಚಾರ ಪಥ ಬದಲಾಯಿಸಲಾಗಿದೆ.
ದ್ರೌಪದಿ ಮುರ್ಮು ಅವರು ಶುಕ್ರವಾರ (ಅಕ್ಟೋಬರ್ 25) ಬೆಳಗ್ಗೆ ರಾಯಪುರದಲ್ಲಿರುವ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದ್ದಾರೆ. ಬಳಿಕ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ತೆರಳಲಿದ್ದಾರೆ. ಅಲ್ಲಿ ಅದರ 2ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆಂದು ಸರ್ಕಾರದ ಮೂಲಗಳಿಂದ ತಿಳಿಸಿದೆ.
ನಂತರ ಅವರು ರಾಜ ಭವನಕ್ಕೆ ತೆರಳಿದ್ದಾರೆ. ಬಳಿಕ ರಾಯ್‌ಪುರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ 14ನೇ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ದ್ರೌಪದಿ ಮುರ್ಮು ಅವರು ನವ ರಾಯಪುರದಲ್ಲಿರುವ ಪುರ್ಖೌಟಿ ಮುಖ್ಟ್ಟಾಂಗನ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಸ್ಥಳೀಯ ಬುಡಕಟ್ಟು ಜನರೊಂದಿಗೆ ಸಂವಹನ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಶನಿವಾರ ಬೆಳಗ್ಗೆ ಇಲ್ಲಿನ ಗಾಯತ್ರಿ ನಗರದಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದು, ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ಬಿಲಾಯಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ನಾಲ್ಕನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.












Click it and Unblock the Notifications