ಲೋಕಸಭೆ ಚುನಾವಣೆ 6ನೇ ಹಂತ: ಪ್ರಚಾರ ಅಂತ್ಯ, ಶನಿವಾರ ಮತದಾನ
ನವದೆಹಲಿ, ಮೇ 23: ಲೋಕಸಭೆ ಚುನಾವಣೆಯ 6ನೇ ಹಂತದ ಮತದಾನಕ್ಕೆ ಬಹಿರಂಗ ಚುನಾವಣಾ ಪ್ರಚಾರ ಗುರುವಾರ ಮುಕ್ತಾಯಗೊಂಡಿತು. ಶನಿವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಬಹಿರಂಗ ಪ್ರಚಾರದ ಕೊನೆಯ ದಿನವಾದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಹರ್ಯಾಣದಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯ ದ್ವಾರಕಾದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಪ್ರಚಾರವನ್ನು ನಡೆಸಿ, ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಕೇಳಿದರು.

ಶನಿವಾರ ಮತದಾನ: ದೇಶದಲ್ಲಿ ಒಟ್ಟು 7 ಹಂತದಲ್ಲಿ ಲೋಕಸಭೆ ಚುನಾವಣೆ 2024 ನಡೆಯುತ್ತಿದೆ. 6ನೇ ಹಂತದ ಚುನಾವಣೆಗೆ ಗುರುವಾರ ಬಹಿರಂಗ ಪ್ರಚಾರ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಬಹುದು. ಶನಿವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ.
8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 58 ಲೋಕಸಭಾ ಕ್ಷೇತ್ರಗಳಲ್ಲಿ 6ನೇ ಹಂತದಲ್ಲಿ ಮೇ 25ರ ಶನಿವಾರ ಮತದಾನ ನಡೆಯಲಿದೆ. ಇವುಗಳಲ್ಲಿ ಉತ್ತರ ಪ್ರದೇಶ 14, ಹರ್ಯಾಣ 10, ಬಿಹಾರದ ಮತ್ತು ಪಶ್ಚಿಮ ಬಂಗಾಳದ 8, ದೆಹಲಿಯ 7, ಒಡಿಶಾದ 6, ಜಾರ್ಖಂಡ್‌ನ 4 ಮತ್ತು ಜಮ್ಮು & ಕಾಶ್ಮೀರದ 1 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.
889 ಅಭ್ಯರ್ಥಿಗಳು 58 ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಣದಲ್ಲಿದ್ದಾರೆ. ಮೇ 25ರಂದು ಮತದಾನ ನಡೆದರೆ ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ದೇಶದಲ್ಲಿ ಜೂನ್ 1ರಂದು 7ನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತದೆ.
6ನೇ ಹಂತದಲ್ಲಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಹರ್ಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಮನೋಜ್ ತಿವಾರಿ, ಬನ್ಸೂರಿ ಸ್ವರಾಜ್, ದಿಪೇಂದ್ರಸಿಂಗ್ ಹೂಡಾ, ಜೆಪಿ ಅಗರ್‌ವಾಲ್, ಕನ್ಹಯ್ಯ ಕುಮಾರ್ ಪ್ರಮುಖರು.
ದೇಶದಲ್ಲಿ ಏಪ್ರಿಲ್ 19 ರಿಂದ ಜೂನ್ 1ರ ತನಕ ಒಟ್ಟು 7 ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, 7ಮೇ 3ನೇ ಹಂತ, ಮೇ 13 4ನೇ ಹಂತ, ಮೇ 20ರಂದು 5ನೇ ಹಂತದ ಮತದಾನ ಮುಕ್ತಾಯಗೊಂಡಿದೆ.
ಮೊದಲ ಹಂತದಲ್ಲಿ ಶೇ 66.14, 2ನೇ ಹಂತದಲ್ಲಿ ಶೇ 66.71, 3ನೇ ಹಂತದಲ್ಲಿ ಶೇ 65.68, 4ನೇ ಹಂತದಲ್ಲಿ ಶೇ 69.16 ಮತ್ತು 5ನೇ ಹಂತದಲ್ಲಿ ಶೇ 62.2ರಷ್ಟು ಮತದಾನವಾಗಿದೆ.
ಜೂನ್ 1ರ 7ನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಜೂನ್ 1ರ ಶನಿವಾರ ಸಂಜೆ ಎಕ್ಸಿಟ್ ಫೋಲ್ ಫಲಿತಾಂಶ ಸಹ ಪ್ರಕಟವಾಗಲಿದ್ದು, ಜೂನ್ 4ರ ಮಂಗಳವಾರ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿ, ಅಕ್ಕಪಕ್ಕದ ರಾಜ್ಯಗಳಲ್ಲಿ ಮತದಾನ ಬಾಕಿ ಇದೆ. ದಕ್ಷಿಣದ ರಾಜ್ಯದಲ್ಲಿ ಆಂಧ್ರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಜೊತೆಗೆ ವಿಧಾನಸಭೆ ಚುನಾವಣೆಯ ಮತದಾನವೂ ನಡೆದಿದ್ದು, ಜೂನ್ 4ರಂದು ಘೋಷಣೆಯಾಗುವ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಫಲಿತಾಂಶ ಜೂನ್ 4ರಂದು ಪ್ರಕಟವಾಗಲಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications