5 States Election Dates: ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗದಿ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ಮುಹೂರ್ತ ನಿಗದಿಯಾಗಿದೆ. ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸ್‌ಗಡ ಮತ್ತು ಮಿಜೋರಾಮ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಐದು ರಾಜ್ಯಗಳ ಚುನಾವಣೆ ದಿನಾಂಕವನ್ನು ಪ್ರಕಟಿಸಿದರು.

ಮಿಜೋರಾಂನಲ್ಲಿ ನವೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಛತ್ತಿಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು ನವೆಂಬರ್ 7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತದಾನ ನಡೆಯಲಿದೆ. ತೆಲಂಗಾಣದ 119 ಕ್ಷೇತ್ರಗಳಲ್ಲಿ ನವೆಂಬರ್ 30 ರಂದು ಮತದಾನ ನಡೆಯಲಿದೆ.

ಐದು ರಾಜ್ಯಗಳ ಮತ ಎಣಿಕೆ ಒಂದೇ ದಿನ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದ್ದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.

polling-dates-for-5-states-assembly-election

2023ರ ಡಿಸೆಂಬರ್ 17ಕ್ಕೆ ಮಿಜೋರಾಂನ ಶಾಸಕಾಂಗ ಸಭೆಯ ಅವಧಿ ಮುಕ್ತಾಯವಾಗಲಿದೆ. 2024ರ ಜನವರಿಯಲ್ಲಿ ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳ ಶಾಸಕಾಂಗ ಸಭೆಯ ಅವಧಿ ಮುಗಿಯಲಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೆ, ಛತ್ತಿಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ. ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಮಿಜೋರಾಮ್‌ನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಸರ್ಕಾರ ಆಡಳಿತ ನಡೆಸುತ್ತಿದೆ.

5 ರಾಜ್ಯಗಳಲ್ಲಿ ಒಟ್ಟು 16 ಕೋಟಿ ಮತದಾರರು

ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಸಂಸದ, ತೆಲಂಗಾಣದಲ್ಲಿ ನಡೆಯುವ ಚುನಾವಣೆಯಲ್ಲಿ 8.2 ಕೋಟಿ ಪುರುಷ ಮತ್ತು 7.8 ಕೋಟಿ ಮಹಿಳಾ ಮತದಾರರು ಇರಲಿದ್ದಾರೆ. ಈ ಪೈಕಿ 60.2 ಲಕ್ಷ ಮಂದಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.ರಾಜ್ಯವಾರು

ವಿಧಾನಸಭಾ ಕ್ಷೇತ್ರಗಳು

ಮಧ್ಯಪ್ರದೇಶ - 230 ಸ್ಥಾನಗಳು
ಛತ್ತೀಸ್‌ಗಢ - 90 ಸ್ಥಾನಗಳು
ರಾಜಸ್ಥಾನ - 200 ಸ್ಥಾನಗಳು
ತೆಲಂಗಾಣ - 119 ಸ್ಥಾನಗಳು
ಮಿಜೋರಾಂ - 40 ಸ್ಥಾನಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+