ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಗೆ ಚುನಾವಣೆಗೆ ದಿನಾಂಕ ನಿಗದಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 23 : ರಾಜ್ಯಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಕರ್ನಾಟಕದ 4 ಸ್ಥಾನಗಳು ಸೇರಿ 58 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಶುಕ್ರವಾರ ಸಂಜೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 23ರಂದು 16 ರಾಜ್ಯಗಳ 58 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

ವಿಧಾನಸಭೆ ಚುನಾವಣೆಗೆ ಮೊದಲು ರಾಜ್ಯಸಭೆ ಚುನಾವಣೆ?ವಿಧಾನಸಭೆ ಚುನಾವಣೆಗೆ ಮೊದಲು ರಾಜ್ಯಸಭೆ ಚುನಾವಣೆ?

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲೇ ರಾಜ್ಯಸಭೆ ಚುನಾವಣೆ ನಡೆಯಲಿದೆ. ರಾಜ್ಯಸಭೆ ಚುನಾವಣೆ ಬಳಿಕ ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

Election commission

2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೆ.ರೆಹಮಾನ್ ಖಾನ್ (ಕಾಂಗ್ರೆಸ್), ಎಂ.ರಾಜೀವ್ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ್ ಸೇಡಂ (ಬಿಜೆಪಿ), ಆರ್.ರಾಮಕೃಷ್ಣ (ಬಿಜೆಪಿ) ಅವರ ಅವಧಿ ಪೂರ್ಣಗೊಳ್ಳಲಿದೆ.

ಕರ್ನಾಟಕ ವಿಧಾನಸಭೆಯ ಶಾಸಕರು ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳುಹಿಸಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ತಮಗಿರುವ ಸದಸ್ಯ ಬಲದ ಆಧಾರದ ಮೇಲೆ ಇಬ್ಬರು ಸದಸ್ಯರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸಬಹುದಾಗಿದೆ.

ಚುನಾವಣಾ ವೇಳಾಪಟ್ಟಿ

* ಮಾರ್ಚ್ 12ರಿಂದ ನಾಮಪತ್ರ ಸಲ್ಲಿಕೆ
* ಮಾರ್ಚ್ 23ರಂದು ಮತದಾನ
* ಮಾರ್ಚ್ 23ರ ಸಂಜೆ ಮತ ಎಣಿಕೆ

English summary
Election commission of India on Friday, February 23, 2018 announced the schedule for Rajya Sabha election. Voting will be held on March 23 for 58 seats from 16 states including 4 seats of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X