ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೊದಲ ಹಂತ: ಬಂಗಾಳ ಶೇ.79, ಅಸ್ಸಾಂ ಶೇ.72ರಷ್ಟು ಮತದಾನ

|
Google Oneindia Kannada News

ನವದೆಹಲಿ, ಮಾರ್ಚ್ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ಭೀತಿ ನಡುವೆಯೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಮೊದಲ ಹಂತದ ವಿಧಾನಸಭೆ ಚುನಾವಣೆಯಲ್ಲಿ ದಾಖಲೆ ಮಟ್ಟದಲ್ಲಿ ಮತದಾನ ನಡೆದಿದೆ.
ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶೇ.79.79ರಷ್ಟು ಮತದಾನ ನಡೆದಿದೆ.Assembly Elections

2021 Live: ಅಸ್ಸಾಂ, ಬಂಗಾಳದಲ್ಲಿ ಮೊದಲ ಹಂತದ ಮತದಾನ2021 Live: ಅಸ್ಸಾಂ, ಬಂಗಾಳದಲ್ಲಿ ಮೊದಲ ಹಂತದ ಮತದಾನ

ಅಸ್ಸಾಂನಲ್ಲಿ ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಶನಿವಾರ 47 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಿತು. ಈ ರಾಜ್ಯದಲ್ಲಿ ಶೇ.72.14ರಷ್ಟು ಮತದಾನ ನಡೆದಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Election Commission Clarifies On Bengal And Assam Election First Phase Voting Percentage

ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ:
ಭಾರತದಲ್ಲಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಆಯೋಗ ದಿನಾಂಕ ನಿಗದಿಪಡಿಸಿದೆ. ಪಶ್ಚಿಮ ಬಂಗಾಳದ 294, ತಮಿಳುನಾಡಿನ 234, ಕೇರಳದ 140, ಅಸ್ಸಾಂನ 126 ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶದ 30 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮಾರ್ಚ್ 27ರಿಂದ ವಿವಿಧ ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 2ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ.

English summary
Here Read West Bengal And Assam Assembly First Phase Voting Percentage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X