Actor Vijay: ನಟ ವಿಜಯ್ ಹೊಸ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ಕೊಟ್ಟ ಚುನಾವಣಾ ಆಯೋಗ

ತಮಿಳುನಾಡು ರಾಜಕೀಯದಲ್ಲಿ ಹೊಸ ಕ್ರಾಂತಿ ತರಲಿದೆ ಎಂದು ನಿರೀಕ್ಷೆ ಮಾಡಿರುವ ನಟ ವಿಜಯ್ ಸಾರಥ್ಯದ ಹೊಸ ಪಕ್ಷಕ್ಕೆ ಇದೀಗ ಚುನಾವಣಾ ಆಯೋಗದ ಅಧಿಕೃತ ಮುದ್ರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ರಾಜಕೀಯದಲ್ಲಿ ಭಾಗವಹಿಸಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಕೃತವಾಗಿ ಅನುಮತಿ ನೀಡಿದೆ ಎಂದು ಪಕ್ಷದ ಮುಖ್ಯಸ್ಥ ನಟ ವಿಜಯ್ ಭಾನುವಾರ ಘೋಷಣೆ ಮಾಡಿದ್ದಾರೆ.

ತಮಿಳಗ ವೆಟ್ರಿ ಕಳಗಂ ಅನ್ನು ರಾಜಕೀಯ ಪಕ್ಷವಾಗಿ ನೋಂದಾಯಿಸಲು ಫೆಬ್ರವರಿ 2 ರಂದು ಭಾರತೀಯ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಲಾಗಿದೆ. ನೋಂದಣಿಯನ್ನು ನೀಡಲಾಗಿದೆ ಎಂದು ವಿಜಯ್ ತಮ್ಮ ಎಕ್ಸ್ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ.

Election commission recognizes actor vijays tamilaga vettri kazhagam

ತಮಿಳುನಾಡಿನಲ್ಲಿ ಅತ್ಯಂತ ಜನಪ್ರಿಯ ನಟರಲ್ಲಿ ವಿಜಯ್ ಕೂಡ ಒಬ್ಬರು. ಅವರ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ. ವಿಜಯ್ ಕೂಡ ರಾಜಕೀಯಕ್ಕೆ ಬರಲು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದರು. ಸಿನಿಮಾ ರಂಗಕ್ಕೆ ಗುಡ್‌ ಬೈ ಹೇಳಿ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಸೆಪ್ಟೆಂಬರ್ ಬಿಡುಗಡೆಯಾಗಿರುವ ಗ್ರೇಟೆಸ್ಟ್ ಆಫ್ ಆಲ್ ಟೈಮ್ (GOAT) ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದ್ದರೂ, ಗಳಿಕೆ ವಿಚಾರದಲ್ಲಿ ದಾಖಲೆ ಬರೆಯುತ್ತಿದೆ. ಮೊದಲ ನಾಲ್ಕು ದಿನಗಳಲ್ಲೇ ಸಿನಿಮಾ 100 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ.

ಅಪಾರ ಅಭಿಮಾನಿ ಬಳಗ

ದಳಪತಿ ವಿಜಯ್ ಎಂದೇ ಖ್ಯಾತಿ ಪಡೆದಿರುವ ನಟ ವಿಜಯ್‌ಗೆ ತಮಿಳುನಾಡು, ಕೇರಳ ಮತ್ತು ಇತರ ದಕ್ಷಿಣ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಫೆಬ್ರವರಿಯಲ್ಲಿ ರಾಜಕೀಯ ಪಕ್ಷ ಸ್ಥಾಪನೆ ಬಗ್ಗೆ ಘೋಷಿಸಿದ್ದ ಅವರು, ಸಾಮಾಜಿಕ ನ್ಯಾಯದ ಮಾರ್ಗದಲ್ಲಿ ನಡೆಯುವುದಾಗಿ ತಿಳಿಸಿದ್ದರು. ಪಾರದರ್ಶಕ, ಜಾತಿ ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಮತ್ತು ಮೂಲಭೂತ ರಾಜಕೀಯ ಬದಲಾವಣೆಗಾಗಿ ಶ್ರಮಿಸಲು ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದರು.

ಎರಡು ವಾರಗಳ ಹಿಂದೆ ಅವರು ತಮ್ಮ ಟಿವಿಕೆ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ್ದರು. ಕೆಂಪು, ಹಳದಿ ಭಾಗದ ಧ್ವಜದಲ್ಲಿ ಎರಡು ಆನೆಗಳು ಮತ್ತು ವಾಗೈ ಹೂವಿನ ಚಿನ್ಹೆಗಳಿವೆ. ಟಿವಿಕೆ ಪಕ್ಷದ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಲ್ಲಿ ತನ್ನ ಧ್ವಜ ಗೀತೆಯನ್ನು ಪೋಸ್ಟ್ ಮಾಡಿದೆ.

ಪಕ್ಷದ ಸಿದ್ದಾಂತವನ್ನು ಜನರಿಗೆ ತಲುಪಿಸಲು ರಾಜ್ಯ ಮಟ್ಟದ ಸಭೆಗಾಗಿ ಕಾಯಬೇಕು ಎಂದು ತಮ್ಮ ಪಕ್ಷದ ಸದಸ್ಯರಿಗೆ ತಿಳಿಸಿದರು. ಚುನಾವಣಾ ಆಯೋಗ ಸ್ಪರ್ಧೆಗೆ ಅನುಮತಿ ನೀಡಿದ ಬಳಿಕ, ಪಕ್ಷದ ಸಂಘಟನೆ ಕೆಲಸ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.

2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಪಕ್ಷದ ಗುರಿಯಾಗಿದೆ ಎಂದು ವಿಜಯ್ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನವೇ ಟಿವಿಕೆ ಘೋಷಣೆ ಮಾಡಿದ್ದರೂ ಪಕ್ಷ ಚುನಾವಣೆಗೆ ಸ್ಪರ್ಧಿಸಿರಲಿಲ್ಲ ಹಾಗೂ ಯಾವ ಪಕ್ಷಕ್ಕೂ, ಅಭ್ಯರ್ಥಿಗೂ ಬೆಂಬಲ ನೀಡರಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+