ಸ್ಟಿಂಗ್ ಆಪರೇಶನ್: ವರದಿ ಕೇಳಿದ ಕೇಂದ್ರ ಚುನಾವಣಾ ಆಯೋಗ
ನವದೆಹಲಿ, ಜೂನ್, 03: ಸ್ಟಿಂಗ್ ಆಪರೇಶನ್ ಬಿಸಿ ಕೇಂದ್ರ ಚುನಾವಣಾ ಆಯೋಗದವರೆಗೂ ತಲುಪಿದೆ. ಶಾಸಕರು ಹಣದ ಬೇಡಿಕೆ ಇಟ್ಟಿರುವ ವಿಷಯದ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ನವದೆಹಲಿಯಲ್ಲಿ ಶುಕ್ರವಾರ ಮುಖ್ಯ ಚುನಾವಣಾ ಆಯುಕ್ತ ಡಾ.ನಸಿಮ್ ಜೈದಿ ನೇತೃತ್ವದಲ್ಲಿ ಸಭೆ ನಡೆಯಿತು. ಕುಟುಕು ಕಾರ್ಯಾಚರಣೆ ಬಗ್ಗೆ ವರದಿ ನೀಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಅನಿಲ್ಕುಮಾರ್ ಕುಮಾರ್ ಝಾ ಅವರಿಗೆ ಸಭೆ ನಂತರ ಸೂಚನೆ ನೀಡಲಾಗಿದೆ.[ವೋಟಿಗಾಗಿ ನೋಟು: ಯಾರು, ಏನು ಹೇಳಿದರು?]

ರಾಜ್ಯಕ್ಕೆ ಸಂಬಂಧಿಸಿದ ರಾಜ್ಯಸಭಾ ಚುನಾವಣೆಯನ್ನು ಮುಂದೂಡಬೇಕೋ? ಬೇಡವೋ? ಎಂಬ ವಿಚಾರದ ಮೇಲೆ ಚರ್ಚೆ ನಡೆಯಿತು. ಅಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ಸ್ಪಷ್ಟನೆ ಇಲ್ಲದ ಕಾರಣ ವರದಿ ನೀಡುವಂತೆ ತಿಳಿಸಲಾಯಿತು.
ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 11ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್, ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿವೆ.[ಮೂರು ಕಾಸಿಗೆ ಹರಾಜಾದ ರಾಜ್ಯ ಶಾಸಕರ ಮರ್ಯಾದೆ!]
ಕರ್ನಾಟಕದ ಶಾಸಕರಾದ ಜಿ ಟಿ ದೇವೇಗೌಡ, ಮಲ್ಲಿಕಾರ್ಜುನ ಖೂಬಾ, ವರ್ತೂರು ಪ್ರಕಾಶ್ ಮತ್ತು ಬಿ ಆರ್ ಪಾಟೀಲ್ ರಾಜ್ಯಸಭೆ ಮತ ನೀಡಲು ಐದರಿಂದ ಹತ್ತು ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎಂದು ಕುಟುಕು ಕಾರ್ಯಾಚರಣೆಯಲ್ಲಿ ಹೇಳಲಾಗಿದ್ದು ವಾಹಿನಿಗಳು ನಿರಂತರವಾಗಿ ಸುದ್ದಿ ಬಿತ್ತರಿಸಿದ್ದವು.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications