ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು
ನವದೆಹಲಿ: ದೇಶದ ಐದು ಪ್ರಮುಖ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ 2026 ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು (ECI) ಇಂದು ಅಧಿಕೃತವಾಗಿ ಪ್ರಕಟಿಸಲಿದೆ. ಇಂದು (ಮಾರ್ಚ್ 15) ಸಂಜೆ 4.00 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಇತರ ಆಯುಕ್ತರೊಂದಿಗೆ ಚುನಾವಣಾ ದಿನಾಂಕಗಳನ್ನು ಘೋಷಿಸಲಿದ್ದಾರೆ.
ಈ ಐದೂ ರಾಜ್ಯಗಳ ಪ್ರಸ್ತುತ ವಿಧಾನಸಭೆಗಳ ಅಧಿಕಾರಾವಧಿಯು ಮುಂಬರುವ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮುಕ್ತಾಯಗೊಳ್ಳಲಿದ್ದು, ನಿಯಮಗಳ ಪ್ರಕಾರ ಅದಕ್ಕೂ ಮುನ್ನವೇ ಹೊಸ ಸರ್ಕಾರದ ರಚನೆಯಾಗಬೇಕಿದೆ. ಪಶ್ಚಿಮ ಬಂಗಾಳದ ಅವಧಿ ಮೇ 7ಕ್ಕೆ, ತಮಿಳುನಾಡು ಮೇ 10ಕ್ಕೆ, ಅಸ್ಸಾಂ ಮೇ 20, ಕೇರಳ ಮೇ 23 ಹಾಗೂ ಪುದುಚೇರಿ ವಿಧಾನಸಭೆಯ ಅವಧಿ ಜೂನ್ 15ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ, ಇಂದಿನ ಘೋಷಣೆಯು ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ
ಕಳೆದ 2021ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ ಎಂಟು ಹಂತಗಳಲ್ಲಿ ಹಾಗೂ ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಆದರೆ, ಈ ಬಾರಿ ಚುನಾವಣಾ ಹಂತಗಳನ್ನು ಕಡಿತಗೊಳಿಸುವ ಸಾಧ್ಯತೆ ಬಲವಾಗಿದೆ. ವಿರೋಧ ಪಕ್ಷಗಳ ಬೇಡಿಕೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಕೇವಲ ಎರಡು ಅಥವಾ ಅದಕ್ಕಿಂತ ಕಡಿಮೆ ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ಚಿಂತನೆ ನಡೆಸಿದೆ. ತಮಿಳುನಾಡು, ಕೇರಳ ಮತ್ತು ಪುದುಚೇರಿಗಳಲ್ಲಿ ಎಂದಿನಂತೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ.
ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಆಯೋಗವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಹಿಂಸಾಚಾರ ನಡೆಯದಂತೆ ತಡೆಯಲು ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಗಾಗಿ 1.4 ಲಕ್ಷಕ್ಕೂ ಅಧಿಕ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲಾ ರಾಜ್ಯಗಳ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಫೆಬ್ರವರಿ 28 ರಂದು ಪಶ್ಚಿಮ ಬಂಗಾಳದ 6.4 ಕೋಟಿಗೂ ಅಧಿಕ ಮತದಾರರಿರುವ ಅಂತಿಮ ಪಟ್ಟಿ ಪ್ರಕಟವಾಗಿದೆ. ಇತರ ರಾಜ್ಯಗಳಲ್ಲಿಯೂ ಅಂತಿಮ ಪಟ್ಟಿಯ ಮೇಲಿನ ಮೇಲ್ಮನವಿ ಸಲ್ಲಿಕೆ ಪ್ರಕ್ರಿಯೆಗಳು ಈಗಾಗಲೇ ಮುಕ್ತಾಯಗೊಂಡಿವೆ.
ರಾಜಕೀಯ ಪ್ರತಿಷ್ಠೆಯ ಕಣ
ಈ ಐದು ರಾಜ್ಯಗಳ ಚುನಾವಣೆಯು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿರೋಧ ಪಕ್ಷಗಳ 'ಇಂಡಿಯಾ' (INDIA) ಒಕ್ಕೂಟದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ ಅಸ್ಸಾಂ ಮತ್ತು ಪುದುಚೇರಿಯಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಆಡಳಿತವಿದೆ. ಕೇರಳದಲ್ಲಿ ಎಡಪಕ್ಷಗಳ (LDF) ಸರ್ಕಾರವಿದ್ದರೆ, ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೀಗಾಗಿ, ತಮ್ಮ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಮತ್ತು ಹೊಸದಾಗಿ ವಿಸ್ತರಿಸಲು ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿವೆ.
ಇಂದು ಸಂಜೆ 4 ಗಂಟೆಗೆ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ ತಕ್ಷಣವೇ, ಈ ಐದೂ ರಾಜ್ಯಗಳಲ್ಲಿ 'ಮಾದರಿ ಚುನಾವಣಾ ನೀತಿಸಂಹಿತೆ' (Model Code of Conduct) ತಕ್ಷಣದಿಂದಲೇ ಜಾರಿಗೆ ಬರಲಿದೆ. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಹಿಂಪಡೆಯಲು ಕಡೆಯ ದಿನಾಂಕ, ಮತದಾನದ ದಿನ ಹಾಗೂ ಮತ ಎಣಿಕೆಯ ಸಂಪೂರ್ಣ ಚಿತ್ರಣ ಇಂದಿನ ಸುದ್ದಿಗೋಷ್ಠಿಯ ಬಳಿಕ ಸ್ಪಷ್ಟವಾಗಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications