ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಮುಹೂರ್ತ

|
Google Oneindia Kannada News

ನವದೆಹಲಿ, ಸೆ. 25: ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ಮಧ್ಯಾಹ್ನ ಬಿಹಾರ ವಿಧಾನಸಭೆ ಚುನಾವಣೆ ಹಾಗೂ ಹಲವು ರಾಜ್ಯಗಳಲ್ಲಿ ನಡೆಯಬೇಕಿರುವ ಉಪ ಚುನಾವಣೆ ದಿನಾಂಕ ಪ್ರಕಟಿಸಲಿದ್ದಾರೆ.

ಶುಕ್ರವಾರ ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಕರ್ನಾಟಕದ ಶಿರಾ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆಯಿದೆ.

ಬಹುತೇಕ ಅಕ್ಟೋಬರ್ ಎರಡನೇ ವಾರದಿಂದ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಲಿದ್ದು, ಕೊರೊನಾವೈರಸ್ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ತೆಗೆದುಕೊಳ್ಳಲಾಗುತ್ತಿದೆ.

Election commission to announce Bihar Assembly Election and by polls date, schedule

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದ್ದು, ವಿವಿಧ ಹಂತಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆಯಿದೆ.

Recommended Video

MamataBanerjee ಕೊಟ್ರು ಭರ್ಜರಿ ಉಡುಗೊರೆ | Oneindia Kannada

ಇದಲ್ಲದೆ, 15 ರಾಜ್ಯಗಳಲ್ಲಿ ತೆರವಾಗಿರುವ 65 ವಿಧಾನಸಭೆ ಸ್ಥಾನಗಳು ಮತ್ತು ಲೋಕಸಭೆ ಸ್ಥಾನಗಳಿಗೂ ಉಪ ಚುನಾವಣಾ ದಿನಾಂಕ, ವೇಳಾಪಟ್ಟಿಯನ್ನು ಘೋಷಿಸುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಅತ್ಯಧಿಕ 27 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

English summary
The Election Commission will announce the schedule for Bihar assembly polls today at 12:30 PM. This is will be the first state election to be held in India since the beginning of the novel coronavirus pandemic.EC likely to announce by polls for Madhyapradesh, Uttar Pradesh, Karnataka to fill 65 vacant seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X