ಇಂದು ನಾಲ್ಕು ರಾಜ್ಯಗಳ ಚುನಾವಣೆ ದಿನಾಂಕ ಘೋಷಿಸಲಿರುವ ಆಯೋಗ
ನವದೆಹಲಿ, ಅಕ್ಟೋಬರ್ 06: ಈ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳಿಗೆ ಇಂದು(ಅ.06) ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭೆಯ ಕಾಲಾವಧಿ ಡಿಸೆಂಬರ್ -ಜನವರಿಯಲ್ಲಿ ಅಂತ್ಯವಾಗಲಿದ್ದು, ಅದಕ್ಕೂ ಮುನ್ನ ಈ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.
ಡಿಸೆಂಬರ್ ಮಧ್ಯದಲ್ಲಿ ಚುನಾವಣೆ ನಡೆಯುವ ಸಂಭವವಿದ್ದು, ಇತ್ತೀಚೆಗಷ್ಟೇ ವಿಸರ್ಜನೆಯಾದ ತೆಲಂಗಾಣ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಇಂದೇ ಚುನಾವಣಾ ಆಯೋಗ ಘೋಷಿಸುವ ಸಾಧ್ಯತೆ ಇದೆ.

ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಲಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಚುನಾವಣೆಯ ದಿನಾಂಕವನ್ನು ಘೋಷಿಸಲಿದ್ದಾರೆ.












Click it and Unblock the Notifications