ಇಂದು ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ
ನವದೆಹಲಿ, ಅಕ್ಟೋಬರ್ 12 : ಕೇಂದ್ರ ಚುನಾವಣಾ ಆಯೋಗ ಇಂದು (ಅಕ್ಟೋಬರ್ 12) ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಲಿದೆ.
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಲಿದೆ. ಈ ಬಗ್ಗೆ ಸಂಜೆ ನಾಲ್ಕು ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

ಇದೇ ಡಿಸೆಂಬರ್ ನಲ್ಲಿ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹಿನ್ನಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಒಂದು ಸುತ್ತಿನ ಗುಜರಾತ್ ಪ್ರವಾಸ ಮಾಡಿದ್ದಾರೆ.
ಗುಜರಾತ್ 182 ಅಸೆಂಬ್ಲಿ ಕ್ಷೇತ್ರಗಳನ್ನು ಹೊಂದಿದ್ದು, ಹಿಮಾಚಲ ಪ್ರದೇಶ 68 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿದೆ.












Click it and Unblock the Notifications