ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭಾ ಚುನಾವಣೆ ಸಿದ್ಧತೆ : ರಾಜ್ಯಗಳಿಗೆ ಆಯೋಗದ ಪತ್ರ

|
Google Oneindia Kannada News

ನವದೆಹಲಿ, ಜನವರಿ 28 : ಕೇಂದ್ರ ಚುನಾವನಾ ಆಯೋಗ 2019ರ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸರ್ಕಾರಿ ನೌಕರರ ವರ್ಗಾವಣೆ ಕುರಿತು ಪತ್ರವನ್ನು ಬರೆದಿದೆ.

ಎಲ್ಲಾ ರಾಜ್ಯದ ಮುಖ್ಯ ಕಾರ್ಯದರ್ಶಿಗಳು, ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕಾರಿಗಳ ವರ್ಗಾವಣೆ ಕುರಿತು ಪತ್ರ ಬರೆಯಲಾಗಿದೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯೂ ನಡೆಯಲಿದೆ.

ಮೈಸೂರು-ಕೊಡಗು ಟಿಕೆಟ್‌ಗೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ!ಮೈಸೂರು-ಕೊಡಗು ಟಿಕೆಟ್‌ಗೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ!

Election Commission writes to states in a light of Lok Sabha elections 2019

ಚುನಾವಣೆಗೆ ನೇರವಾಗಿ ಸಂಬಂಧ ಪಟ್ಟ ಯಾವುದೇ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಆಯೋಗ ಪತ್ರದಲ್ಲಿ ಹೇಳಿದೆ. ಅಧಿಕಾರಿಗಳು ತವರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರೆ ಅಂತಹವರನ್ನು ವರ್ಗಾವಣೆ ಮಾಡಬಹುದು ಎಂದು ಹೇಳಿದೆ.

ಸಿ ವೋಟರ್ಸ್-ಎಬಿಪಿ ಸಮೀಕ್ಷೆ: ಬಿಜೆಪಿಗೆ 233 ಸೀಟು, ಲೋಕಸಭೆ ಅತಂತ್ರಸಿ ವೋಟರ್ಸ್-ಎಬಿಪಿ ಸಮೀಕ್ಷೆ: ಬಿಜೆಪಿಗೆ 233 ಸೀಟು, ಲೋಕಸಭೆ ಅತಂತ್ರ

ಅಧಿಕಾರಿಗಳು ಒಂದು ಜಿಲ್ಲೆಯಲ್ಲಿ 3 ವರ್ಷಗಳನ್ನು ಪೂರೈಸಿದ್ದರೆ ಅಥವ 31 ಮೇ 2019ಕ್ಕೆ ಮೂರು ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದರೆ ಅಂತಹವರನ್ನು ವರ್ಗಾವಣೆ ಮಾಡಬಹುದು ಎಂದು ಚುನಾವಣಾ ಆಯೋಗ ಹೇಳಿದೆ.

ಜೆಡಿಎಸ್, ಕಾಂಗ್ರೆಸ್ ಮೈತ್ರಿಗೆ ಸೀಟು ಹಂಚಿಕೆಯ ಸಂಕಟ!ಜೆಡಿಎಸ್, ಕಾಂಗ್ರೆಸ್ ಮೈತ್ರಿಗೆ ಸೀಟು ಹಂಚಿಕೆಯ ಸಂಕಟ!

ಚುನಾವಣಾ ಆಯೋಗದ ಸೂಚನೆಯನ್ನು ಪಾಲಿಸಬೇಕು ಅಧಿಕಾರಿಗಳ ವರ್ಗಾವಣೆ ಸಂದರ್ಭದಲ್ಲಿ ಯಾವುದೇ ಜಿಲ್ಲೆಗೆ ಅದೇ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಬಾರದು ಎಂದು ಪತ್ರದಲ್ಲಿ ನಿರ್ದೇಶನ ನೀಡಲಾಗಿದೆ.

ಲೋಕಸಭಾ ಚುನಾವಣೆ ಜೊತೆಗೆ ನಾಲ್ಕು ರಾಜ್ಯದ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಓಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗೂ ಚುನಾವಣೆ ನಡೆಯಲಿದೆ.

English summary
Election Commission writes to Chief Secretary and Chief Electoral Officers of all states, Union territories regarding transfer and posting of officers in the light of Lok Sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X