ಚುನಾವಣಾ ಆಯುಕ್ತ ಅಶೋಕ್ ಲಾವಸಾ ರಾಜೀನಾಮೆ: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಲು ಸಿದ್ಧತೆ
ನವದೆಹಲಿ, ಆಗಸ್ಟ್ 18: ಚುನಾವಣಾ ಆಯುಕ್ತ ಅಶೋಕ್ ಲಾವಸಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಫಿಲಿಪ್ಪೀನ್ಸ್ ಮೂಲದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ (ಎಡಿಬಿ) ಉಪಾಧ್ಯಕ್ಷರಾಗಿ ಮುಂದಿನ ತಿಂಗಳು ಅಧಿಕಾರ ಸ್ವೀಕರಿಸಲಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರ ನಂತರದ ಸ್ಥಾನದಲ್ಲಿದ್ದ ಅಶೋಕ್ ಲಾವಸಾ, ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳು ಅವರನ್ನು ಎಡಿಬಿಯ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಚುನಾವಣಾ ಆಯೋಗದ ಹುದ್ದೆಗೆ ರಾಜೀನಾಮೆ ನೀಡಿ ನಿರ್ಗಮಿಸಿದ ಬಳಿಕವಷ್ಟೇ ಅವರು ಎಡಿಬಿಯ ಹುದ್ದೆಯನ್ನು ಸ್ವೀಕರಿಸಬಹುದಾಗಿದೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅಶೋಕ್, ಆಗಸ್ಟ್ 31ರಂದು ತಮ್ಮನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಚುನಾವಣಾ ಆಯೋಗದ ಎರಡನೆಯ ಪ್ರಮುಖ ಹುದ್ದೆಯಲ್ಲಿದ್ದ ಅವರು, 2021ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ಸ್ಥಾನಕ್ಕೆ ಏರಬೇಕಿತ್ತು.

ಅಶೋಕ್ ಅವರನ್ನು ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಿರುವ ಸಂಗತಿಯನ್ನು ಎಡಿಬಿ ಜುಲೈ 15ರಂದು ಪ್ರಕಟಿಸಿತ್ತು. ಎಡಿಬಿಯ ಆರು ಉಪಾಧ್ಯಕ್ಷರಲ್ಲಿ ಒಬ್ಬರಾದ ದಿವಾಕರ್ ಗುಪ್ತಾ ಅವರ ಅವಧಿ ಆಗಸ್ಟ್ 31ರಂದು ಮುಕ್ತಾಯಗೊಳ್ಳಲಿದೆ. ಇದು ಮೂರು ವರ್ಷಗಳ ಅವಧಿಯದ್ದಾಗಿದ್ದು, ಮತ್ತೆ ಎರಡು ವರ್ಷಗಳವರೆಗೆ ವಿಸ್ತರಿಸಲು ಅವಕಾಶವಿದೆ.
ಅಶೋಕ್ ಲಾವಸಾ ಅವರು ಹರಿಯಾಣ ಕೇಡರ್‌ನ 1980ರ ಐಎಎಸ್ ಅಧಿಕಾರಿಯಾಗಿದ್ದಾರೆ. 2018ರ ಜನವರಿಯಲ್ಲಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. 2016ರ ಜೂನ್‌ನಿಂದ 2017ರ ಅಕ್ಟೋಬರ್‌ವರೆಗೆ ಅವರು ಹಣಕಾಸು ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಗಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಂದರ್ಭದಲ್ಲಿ ಅಶೋಕ್ ಲಾವಸಾ ಸುದ್ದಿಯಾಗಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications