ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಆಯುಕ್ತ ಅಶೋಕ್ ಲಾವಸಾ ರಾಜೀನಾಮೆ: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸೇರಲು ಸಿದ್ಧತೆ

|
Google Oneindia Kannada News

ನವದೆಹಲಿ, ಆಗಸ್ಟ್ 18: ಚುನಾವಣಾ ಆಯುಕ್ತ ಅಶೋಕ್ ಲಾವಸಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ಫಿಲಿಪ್ಪೀನ್ಸ್ ಮೂಲದ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ನ (ಎಡಿಬಿ) ಉಪಾಧ್ಯಕ್ಷರಾಗಿ ಮುಂದಿನ ತಿಂಗಳು ಅಧಿಕಾರ ಸ್ವೀಕರಿಸಲಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ನಂತರದ ಸ್ಥಾನದಲ್ಲಿದ್ದ ಅಶೋಕ್ ಲಾವಸಾ, ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳು ಅವರನ್ನು ಎಡಿಬಿಯ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಚುನಾವಣಾ ಆಯೋಗದ ಹುದ್ದೆಗೆ ರಾಜೀನಾಮೆ ನೀಡಿ ನಿರ್ಗಮಿಸಿದ ಬಳಿಕವಷ್ಟೇ ಅವರು ಎಡಿಬಿಯ ಹುದ್ದೆಯನ್ನು ಸ್ವೀಕರಿಸಬಹುದಾಗಿದೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅಶೋಕ್, ಆಗಸ್ಟ್ 31ರಂದು ತಮ್ಮನ್ನು ಹುದ್ದೆಯಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಚುನಾವಣಾ ಆಯೋಗದ ಎರಡನೆಯ ಪ್ರಮುಖ ಹುದ್ದೆಯಲ್ಲಿದ್ದ ಅವರು, 2021ರ ಏಪ್ರಿಲ್‌ನಲ್ಲಿ ನಿವೃತ್ತರಾಗಲಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರ ಸ್ಥಾನಕ್ಕೆ ಏರಬೇಕಿತ್ತು.

 Election Commissioner Ashok Lavasa Resigns To Join ADB As Vice President

ಅಶೋಕ್ ಅವರನ್ನು ಉಪಾಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಿರುವ ಸಂಗತಿಯನ್ನು ಎಡಿಬಿ ಜುಲೈ 15ರಂದು ಪ್ರಕಟಿಸಿತ್ತು. ಎಡಿಬಿಯ ಆರು ಉಪಾಧ್ಯಕ್ಷರಲ್ಲಿ ಒಬ್ಬರಾದ ದಿವಾಕರ್ ಗುಪ್ತಾ ಅವರ ಅವಧಿ ಆಗಸ್ಟ್ 31ರಂದು ಮುಕ್ತಾಯಗೊಳ್ಳಲಿದೆ. ಇದು ಮೂರು ವರ್ಷಗಳ ಅವಧಿಯದ್ದಾಗಿದ್ದು, ಮತ್ತೆ ಎರಡು ವರ್ಷಗಳವರೆಗೆ ವಿಸ್ತರಿಸಲು ಅವಕಾಶವಿದೆ.

ಅಶೋಕ್ ಲಾವಸಾ ಅವರು ಹರಿಯಾಣ ಕೇಡರ್‌ನ 1980ರ ಐಎಎಸ್ ಅಧಿಕಾರಿಯಾಗಿದ್ದಾರೆ. 2018ರ ಜನವರಿಯಲ್ಲಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. 2016ರ ಜೂನ್‌ನಿಂದ 2017ರ ಅಕ್ಟೋಬರ್‌ವರೆಗೆ ಅವರು ಹಣಕಾಸು ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಗಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿದ್ದ ಸಂದರ್ಭದಲ್ಲಿ ಅಶೋಕ್ ಲಾವಸಾ ಸುದ್ದಿಯಾಗಿದ್ದರು.

English summary
Election Commissioner Ashok Lavasa has resigned from his post and all set to join Asian Development Bank (ADB) as new vice president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X