ಚುಟುಕು ಸುದ್ದಿ: ಮೋದಿ ಬಾಯಿಂದ ಇಂಥ ಮಾತೇ?!
ಬೆಂಗಳೂರು, ಮೇ.6: ದೇಶದೆಲ್ಲೆಡೆಯ ಈ ದಿನದ ಚುನಾವಣಾ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ.ದೇಶದ ಒಟ್ಟಾರೆ ರಾಜಕೀಯ ರಂಗು ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
18.15: ಸ್ನೂಪ್ ಗೇಟ್ ಪ್ರಕರಣ: ಗುಜರಾತ್ ಸರ್ಕಾರಕ್ಕೆ ಸುಪ್ರೀಂಕೋರ್ಟಿನಿಂದ ನೋಟಿಸ್.
17.45: 18000ಕ್ಕೂ ಅಧಿಕ ಕಾಶ್ಮೀರಿ ಪಂಡಿತರು ಬುಧವಾರ ನಡೆಯಲಿರುವ ಮತದಾನದಲ್ಲಿ ಪಾಲ್ಗೊಳ್ಳಲಿದ್ದು ಬಾರಮುಲ್ಲಾ ಜಿಲ್ಲೆಯಲ್ಲಿ ಹಕ್ಕು ಚಲಾಯಿಸಲಿದ್ದಾರೆ.
16.30: ಬಿಹಾರದ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಗೆ ದ್ವೇಷ ಭಾಷಣ ಪ್ರಕರಣದಲ್ಲಿ ಪಾಟ್ನ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.
15.30: ಆಮ್ ಆದ್ಮಿ ಪಕ್ಷದ ಮುಖಂಡ ಸೋಮನಾಥ್ ಭಾರ್ತಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನೀತಿ ಸಂಹಿತೆ ಧಿಕ್ಕರಿಸಿ ಅಮೇಥಿಯಲ್ಲಿ ಭಾರ್ತಿ ನೆಲೆಸಿದ್ದಾರೆ.

13.35: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಜಾತಿ ಬಗ್ಗೆ ಮಾತನಾಡಿದ್ದಾರೆ. ನಾನು ಹಿಂದುಳಿದ ಜಾತಿಯಿಂದ ಬಂದವನು ಎಂಬ ಕಾರಣಕ್ಕೆ ವಿಪಕ್ಷಗಳು ನನ್ನನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಭಾಷಣದ ವೇಳೆ ಮೋದಿ ಹೇಳಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಮೋದಿ ಅವರು ಜಾತಿವಾದ ಕಾರ್ಡ್ ಹೊರಗೆಳೆದಿದ್ದಾರೆ.
13.00: ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮಹರಾಜ್ ಗಂಜ್ ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.
12.30: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಧಿಕ್ಕರಿಸಿ ಅಮೇಥಿಯಲ್ಲೇ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಉಳಿದಿದ್ದಾರೆ.
11.15: ಮಾಧ್ಯಮ ವರದಿಗಳನ್ನು ಅಲ್ಲಗೆಳೆದಿರುವ ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಅಜಯ್ ರಾಯ್ ಪರ ಪ್ರಚಾರ ನಡೆಸುತ್ತಿಲ್ಲ ಎಂದಿದ್ದಾರೆ.
11.00: ಮೋದಿ ಅವರು ನನ್ನ ತಂದೆಗೆ ಅವಮಾನ ಮಾಡಿದ್ದಾರೆ ಎಂದಿರುವ ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

10.45: ಆಮ್ ಆದ್ಮಿ ಪಕ್ಷದ ಕುಮಾರ್ ವಿಶ್ವಾಸ್ ಹಾಗೂ ದೆಹಲಿ ಮಾಜಿ ಸಚಿವ ಸೋಮನಾಥ್ ಭಾರ್ತಿ ಸೇರಿಕೊಂಡು ವಾರಣಾಸಿ ಪೊಲೀಸರೊಡನೆ ವಾಕ್ಸಮರ ನಡೆಸಿದ್ದಾರೆ ಎನ್ನಲಾಗಿದೆ. ಚುನಾವಣಾ ಪ್ರಚಾರ ಮುಗಿದಿರುವುದರಿಂದ ಪೊಲೀಸರು ಕ್ಷೇತ್ರಕ್ಕೆ ಸಂಬಂಧಪಡದ ವ್ಯಕ್ತಿಗಳನ್ನು ಹೊರಕಳಿಸುತ್ತಿದ್ದಾರೆ.












Click it and Unblock the Notifications