Breaking: 'ಟಿವಿ, ಸಾಮಾಜಿಕ ಮಾಧ್ಯಮಗಳು ಪ್ರಜಾಪ್ರಭುತ್ವಕ್ಕೆ ಹಾನಿಕರ'
ರಾಂಚಿ, ಜುಲೈ 23: 'ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕರ ಎಂದು ಶನಿವಾರ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ತೀವ್ರ ಟೀಕೆ ಮಾಡಿದರು.
ಪ್ರವಾದಿ ಮೊಹಮ್ಮದ್ ಕುರಿತು ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯ ತೀರ್ಪಿಗೆ ಹಿನ್ನಡೆಯಾದ ನಂತರ ಹೆಚ್ಚಿನ ಟೀಕೆಗಳು ಬಂದ ಬಳಿಕ ನ್ಯಾಯಮೂರ್ತಿ ರಮಣರಿಂದ ಈ ಹೇಳಿಕೆಗಳು ಬಂದಿವೆ.
ರಾಂಚಿಯಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಮಾತನಾಡಿದ ಭಾರತದ ಮುಖ್ಯ ನ್ಯಾಯಾಧೀಶರು "ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತ ಪ್ರಚಾರಗಳು ನಡೆಯುತ್ತಿವೆ. ನ್ಯಾಯಾಧೀಶರು ತಕ್ಷಣವೇ ಪ್ರತಿಕ್ರಿಯಿಸುವುದಿಲ್ಲ, ದಯವಿಟ್ಟು ಅದನ್ನು ತಪ್ಪಾಗಿ ದೌರ್ಬಲ್ಯ ಅಥವಾ ಅಸಹಾಯಕತೆ ಎ ಎಂದು ಗ್ರಹಿಸಬೇಡಿ" ಎಂದು ಎಚ್ಚರಿಕೆ ನೀಡಿದರು.

"ಹೊಸ ಮಾಧ್ಯಮಗಳು ಅಗಾಧವಾಗಿ ತಲುಪುವ ಸಾಮರ್ಥ್ಯವನ್ನು ಹೊಂದಿವೆ. ಆದರೆ ಸರಿ ಮತ್ತು ತಪ್ಪು, ಒಳ್ಳೆಯದು ಮತ್ತು ಕೆಟ್ಟದು ಮತ್ತು ನೈಜ ಮತ್ತು ನಕಲಿಗಳ ನಡುವೆ ವ್ಯತ್ಯಾಸವನ್ನು ಗುರುತಿಸಲು ಅಸಮರ್ಥವಾಗಿವೆ" ಎಂದರು.
"ಮಿಡಿಯಾ ಟ್ರಯಲ್ಸ್‌ಗಳು ಪ್ರಕರಣಗಳನ್ನು ನಿರ್ಧರಿಸುವಲ್ಲಿ ಮಾರ್ಗದರ್ಶಿ ಅಂಶವಾಗುವುದಿಲ್ಲ. ಮಾಧ್ಯಮಗಳು 'ಕಾಂಗರೂ ನ್ಯಾಯಾಲಯ'ಗಳನ್ನು ನಡೆಸುವುದನ್ನು ನಾವು ನೋಡುತ್ತಿದ್ದೇವೆ, ಕೆಲವೊಮ್ಮೆ ಅನುಭವಿ ನ್ಯಾಯಾಧೀಶರು ಸಹ ಸಮಸ್ಯೆಗಳ ಬಗ್ಗೆ ನಿರ್ಧರಿಸಲು ಕಷ್ಟಪಡುವಂತಾಗಿದೆ" ಎಂದರು.
Of late, we see media running kangaroo courts, at times on issues even experienced judges find difficult to decide. Ill-informed & agenda driven debates on issues involving justice delivery are proving to be detrimental to health of democracy: CJI NV Ramana in Ranchi, Jharkhand pic.twitter.com/rjxlSqlH4D
— ANI (@ANI) July 23, 2022
ಮಾಧ್ಯಮಗಳು ಹರಡುತ್ತಿರುವ ಪಕ್ಷಪಾತದ ಅಭಿಪ್ರಾಯಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿವೆ ಮತ್ತು ವ್ಯವಸ್ಥೆಗೆ ಹಾನಿಯನ್ನುಂಟುಮಾಡುತ್ತಿವೆ ಎಂದಿರುವ ಅವರು, "ನ್ಯಾಯ ವಿಚಾರಣೆ ನೆಯುತ್ತಿರುವ ವಿಷಯಗಳ ಬಗ್ಗೆ ಅನಪೇಕ್ಷಿತ ಮತ್ತು ಅಜೆಂಡಾ ರೀತಿಯ ಚರ್ಚೆಗಳು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಹಾನಿಕಾರಕವೆಂದು ಸಾಬೀತಾಗಿದೆ. ಈ ಪ್ರಕ್ರಿಯೆಯಲ್ಲಿ, ನ್ಯಾಯ ನೀಡುವಲ್ಲಿ ಪ್ರತಿಕೂಲ ಪರಿಣಾಮ ಬೀರುತ್ತದೆ" ಎಂದರು.

ಮುದ್ರಣ ಮಾಧ್ಯಮವು ಇನ್ನೂ ಒಂದು ನಿರ್ದಿಷ್ಟ ಮಟ್ಟದ ಹೊಣೆಗಾರಿಕೆಯನ್ನು ಹೊಂದಿದೆ. ಆದರೆ ವಿದ್ಯುನ್ಮಾನ ಮಾಧ್ಯಮವು ಶೂನ್ಯ ಹೊಣೆಗಾರಿಕೆಯನ್ನು ಹೊಂದಿದೆ. ಸಾಮಾಜಿಕ ಮಾಧ್ಯಮ ಇನ್ನೂ ಕೆಟ್ಟದಾಗಿದೆ ಎಂದು ವಿಷಾಧ ವ್ಯಕ್ತಪಡಿಸಿರುವ ಅವರು, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸುವಂತೆ ಒತ್ತಾಯಿಸಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications