'ನಾಲ್ಕು ವರ್ಷದ ಅಘೋಷಿತ ತುರ್ತು ಪರಿಸ್ಥಿತಿಗೆ ಕ್ಷಮೆ ಕೋರುತ್ತೀರಾ?'
ನವದೆಹಲಿ, ಜೂನ್ 26: 1975ರ ತುರ್ತು ಪರಿಸ್ಥಿತಿಯ ಅವಧಿಯ ಕುರಿತು ಹೇಳಿಕೆ ನೀಡುತ್ತಿರುವ ಬಿಜೆಪಿಯನ್ನು ಟೀಕಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಅಹ್ಮದ್ ಪಟೇಲ್, ಕಳೆದ ನಾಲ್ಕು ವರ್ಷಗಳಿಂದ ಹೇರಿರುವ 'ಅಘೋಷಿತ ತುರ್ತುಪರಿಸ್ಥಿತಿ'ಗೆ ಆ ಪಕ್ಷವು ಕ್ಷಮೆ ಕೋರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಟ್ವಿಟ್ಟರ್ನಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಅಹ್ಮದ್ ಪಟೇಲ್, ಸರಣಿ ಟ್ವೀಟ್ಗಳಲ್ಲಿ ಕೇಂದ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತರಾಗಿರುವ ಪಟೇಲ್, ಆಗ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
2019ರ ಚುನಾವಣೆಯಲ್ಲಿ ಸೋಲುವ ಭೀತಿ ಅನುಭವಿಸುತ್ತಿರುವ ಬಿಜೆಪಿಯು ತುರ್ತುಪರಿಸ್ಥಿತಿ ಆಧಾರದ ಸಂಗತಿಗಳನ್ನು ಕೆದಕುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
...Will they apologise for the undeclared emergency for last 4 years?
— Ahmed Patel (@ahmedpatel) 26 June 2018
People are being lynched & threatened, agencies are being misused, economic and civil liberties are being curtailed
(2/2)
ಕಳೆದ ನಾಲ್ಕು ವರ್ಷಗಳಲ್ಲಿನ ಅಘೋಷಿತ ತುರ್ತುಪರಿಸ್ಥಿತಿಯ ಕುರಿತು ಅವರು ಕ್ಷಮೆ ಕೋರುತ್ತಾರೆಯೇ? ಜನರನ್ನು ಕೊಂದು ಹಾಕಲಾಗುತ್ತಿದೆ ಮತ್ತು ಬೆದರಿಸಲಾಗುತ್ತಿದೆ. ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆರ್ಥಿಕ ಮತ್ತು ನಾಗರಿಕ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
After 4 years,fear of losing 2019 elections is haunting the government & hence they are trying to take refuge in the events of 1975 Emergency
— Ahmed Patel (@ahmedpatel) 26 June 2018
But the fact is after 1977, Indira ji apologised,corrected her mistakes & people of India voted her back....
(1/2)
ನಾಲ್ಕು ವರ್ಷದ ಬಳಿಕ 2019ರ ಚುನಾವಣೆಯಲ್ಲಿ ಸೋಲುವ ಭೀತಿ ಸರ್ಕಾರವನ್ನು ಕಾಡುತ್ತಿದೆ. ಈ ಕಾರಣದಿಂದ ಅವರು 1975ರ ತುರ್ತು ಪರಿಸ್ಥಿತಿಯ ಘಟನಾವಳಿಗಳ ಅಡಿಯಲ್ಲಿ ಆಶ್ರಯ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಆದರೆ ವಾಸ್ತವವೆಂದರೆ 1977ರ ಬಳಿಕ ಇಂದಿರಾಜಿ ಅವರು ಕ್ಷಮೆ ಕೋರಿದರು, ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡರು ಮತ್ತು ಭಾರತದ ಜನರು ಅವರಿಗೆ ಮತ್ತೆ ಮತ ಹಾಕಿದರು ಎಂದು ಅಹ್ಮದ್ ಪಟೇಲ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications