ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

6 ಕೋಟಿ ಮಂದಿಗೆ ಆಘಾತಕಾರಿ ಸುದ್ದಿ ಕೊಟ್ಟ ಮೋದಿ ಸರ್ಕಾರ

|
Google Oneindia Kannada News

ನವದೆಹಲಿ, ಮಾರ್ಚ್ 5: ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ತಗ್ಗಿಸಲಾಗಿದೆ. ಈ ಮೂಲಕ ಸುಮಾರು 6 ಕೋಟಿ ನೌಕರರಿಗೆ ಆಘಾತ ಉಂಟಾಗುವ ಸುದ್ದಿ ನೀಡಲಾಗಿದೆ.

ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿದ್ದ ಕೇಂದ್ರ ಸರ್ಕಾರ, ಈ ಬಾರಿ ಯಾವುದೇ ಬದಲಾವಣೆ ತರದಿರಲು ನಿರ್ಧರಿಸಿದ್ದು, ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ ಎಂಬ ಭರವಸೆ ಹುಸಿಯಾಗಿದೆ.

Interest rate on employee provident fund reduced to 8.5% for FY20

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿತ್ತು. ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಿತ್ತು. 2018-19ನೇ ಸಾಲಿನಿಂದ ಬಡ್ಡಿ ದರ ಜಾರಿಗೊಳಿಸಿ ವಿತ್ತ ಸಚಿವಾಲಯ ಪ್ರಕಟಣೆ ಹೊರಡಿಸಿತ್ತು. ಈಗ ಪ್ರಸಕ್ತ ಸಾಲಿನಿಂದ ಶೇ 8.65ರಿಂದ ಶೇ 8.5ಕ್ಕೆ ಇಳಿಕೆ ಮಾಡಿ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಂಗ್ವಾರ್ ಘೋಷಿಸಿದ್ದಾರೆ.

EPS ಯೋಜನೆಯಡಿ ಯಾರಿಗೆ ಹೆಚ್ಚಿನ ಪಿಂಚಣಿ ಸಿಗಲಿದೆ?EPS ಯೋಜನೆಯಡಿ ಯಾರಿಗೆ ಹೆಚ್ಚಿನ ಪಿಂಚಣಿ ಸಿಗಲಿದೆ?

ಬಡ್ಡಿದರ ಹೆಚ್ಚಳವಾದರೆ ಕೇಂದ್ರ ಸರ್ಕಾರಕ್ಕೆ ಸುಮಾರು 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ. ಬಡ್ಡಿದರ ಬದಲಾವಣೆ ಕುರಿತಂತೆ ಇಪಿಎಫ್ಒ ಟ್ರಸ್ಟಿಗಳ ಕೇಂದ್ರ ಸಮಿತಿಯು ಮಾರ್ಚ್ 05ರಂದು ಸಭೆ ನಡೆಸಿ, ಬಡ್ಡಿದರ ತಗ್ಗಿಸಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.

ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರತಿ ಹಣಕಾಸು ವರ್ಷದ ಇಪಿಎಫ್‌ ಬಡ್ಡಿದರದ ನಿರ್ಧಾರ ತೆಗೆದುಕೊಳ್ಳುತ್ತದೆ. ನಂತರ ಈ ನಿರ್ಧಾರವನ್ನು ವಿತ್ತ ಸಚಿವಾಲಯ ಪರಿಶೀಲಿಸಿ ಒಪ್ಪಿಗೆ ಸೂಚಿಸಲಿದೆ.

ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ)

ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ)

ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.

ಶೇ. 75 ಹಣವನ್ನು ಪಡೆದುಕೊಳ್ಳುವ ಅವಕಾಶ

ಶೇ. 75 ಹಣವನ್ನು ಪಡೆದುಕೊಳ್ಳುವ ಅವಕಾಶ

ಪಿಎಫ್ ನ ಶೇಕಡಾ 100ರಷ್ಟು ಹಣವನ್ನು ನೌಕರ ಪಡೆಯಬಹುದಾಗಿತ್ತು. ಭವಿಷ್ಯ ನಿಧಿ ಖಾತೆ (ಪಿಎಫ್)ಯಿಂದ ಶೇ. 75 ಹಣವನ್ನು ಪಡೆದುಕೊಳ್ಳುವ ಅವಕಾಶ ಕಲ್ಪಿಸಲು ಕಾರ್ವಿುಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್​ಒ) ನಿರ್ಧರಿಸಿದೆ. ಇಪಿಎಫ್ಒ ಎಲ್ಲ ನೌಕರರ ಪಿಎಫ್ ನಿಧಿಯನ್ನು ನೋಡಿಕೊಳ್ಳುತ್ತದೆ. ಇದ್ರಲ್ಲಿ 60 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಉದ್ಯೋಗಿಗಳು ತಮ್ಮ ಖಾತೆಯಲ್ಲಿನ ಬಾಕಿ ಶೇ. 25 ಹಣವನ್ನು ಎರಡು ತಿಂಗಳ ನಿರುದ್ಯೋಗದ ನಂತರ ಪಡೆಯಬಹುದಾಗಿದೆ ಅಥವಾ ಸಂಪೂರ್ಣ ಹಣವನ್ನು ಪಡೆದು ಖಾತೆ ಮುಚ್ಚಲು ಕೂಡ ಅವಕಾಶ ನೀಡಲು ಇಪಿಎಫ್​ಒ ಮುಂದಾಗಿದೆ.

ಇಪಿಎಫ್ ಬಡ್ಡಿದರ ಇತಿಹಾಸ

ಇಪಿಎಫ್ ಬಡ್ಡಿದರ ಇತಿಹಾಸ

2012-13ರಲ್ಲಿ ಶೇ 8.5, 2013-14ರಲ್ಲಿ ಶೇ 8.75, 2015-16ರಲ್ಲಿ ಶೇ 8.8, 2016-17ರಲ್ಲಿ ಶೇ 8.65, 2017-18ರಲ್ಲಿ ಶೇ 8.55ರಷ್ಟಿತ್ತು. ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವನ್ನು 2018-2019ರಲ್ಲಿ ಶೇ 8.65ಕ್ಕೆ ಹೆಚ್ಚಳ ಮಾಡಲಾಗಿತ್ತು. ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ

ಉದ್ಯೋಗಿಗಳ ಭವಿಷ್ಯ ನಿಧಿ ಬದಲಾವಣೆ

ಉದ್ಯೋಗಿಗಳ ಭವಿಷ್ಯ ನಿಧಿ ಬದಲಾವಣೆ

ಉದ್ಯೋಗಿಗಳ ಭವಿಷ್ಯ ನಿಧಿ(ಇಪಿಎಫ್ಒ) ತನ್ನ ನಿಯಮಗಳನ್ನು ಬದಲಾಯಿಸಿದ್ದು, ಇದರಿಂದ ಉದ್ಯೋಗ ಕಳೆದುಕೊಂಡವರಿಗೆ ಕೊಂಚ ನೆಮ್ಮದಿ ತಂದಿದೆ. ಒಂದು ತಿಂಗಳ ನಿರುದ್ಯೋಗದ ಬಳಿಕ ಬೇರೆ ಕಡೆ ಕೆಲಸ ಸಿಕ್ಕಲ್ಲಿ ಸದಸ್ಯರು ತಮ್ಮ ಹಳೆಯ ಪಿಎಫ್ ಖಾತೆಯನ್ನು ಹೊಸ ಕಂಪನಿಗೆ ನೀಡಬಹುದಾಗಿದೆ. ಮಾಸಿಕ ಪಿಎಫ್ ಅದರಲ್ಲಿಯೇ ಜಮೆಯಾಗಲಿದೆ. ಸದ್ಯದ ನಿಯಮದಂತೆ ಎರಡು ತಿಂಗಳ ನಿರುದ್ಯೋಗದ ಬಳಿಕ ಮಾತ್ರ ಸದಸ್ಯರಿಗೆ ತಮ್ಮ ಪಿಎಫ್ ಖಾತೆಯಲ್ಲಿನ ಹಣ ಪಡೆಯಲು ಅವಕಾಶವಿದೆ.

English summary
The rate of interest on the employees' provident fund (EPF) has been lowered to 8.5% for the current financial year, announced Labour Minister Santosh Gangwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X