ನಾರಿ ಶಕ್ತಿ; ಏನಿದು ಕೇಂದ್ರದ ಮಹಿಳಾ ಶಕ್ತಿ ಕೇಂದ್ರ ಯೋಜನೆ?

ಬೆಂಗಳೂರು, ಸೆಪ್ಟೆಂಬರ್ 01; ಕೇಂದ್ರ ಸರ್ಕಾರ ಮಹಿಳೆಯ ಜೀವನಮಟ್ಟ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿ, ಕಾರ್ಯರೂಪಕ್ಕೆ ತಂದಿದೆ. ಸಮುದಾಯದ ಸಹಭಾಗಿತ್ವದ ಮೂಲಕ ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಲು ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಘೋಷಣೆ ಮಾಡಲಾಯಿತು.

Mahila Shakti Kendra (MSK), ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನವೆಂಬರ್ 2017ರಲ್ಲಿ ಘೋಷಣೆ ಮಾಡಿತು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಕಾರ, ವೆಚ್ಚ ಹಂಚಿಕೆಯ ಆಧಾರದ ಮೇಲೆ ಯೋಜನೆ ಜಾರಿಗೊಳಿಸಲಾಗುತ್ತಿದೆ.

Empowering Rural Women By Mahila Shakti Kendra Scheme

ಈ ಯೋಜನೆಯ ಮುಖ್ಯ ಉದ್ದೇಶ ಗ್ರಾಮೀಣ ಮಹಿಳೆಯರು ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು. ಯೋಜನೆ ಸಮುದಾಯದ ಸಹಭಾಗಿತ್ವದ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿದೆ.

ಈ ಯೋಜನೆಯನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನಡುವೆ 60:40 ವೆಚ್ಚ ಹಂಚಿಕೆ ಅನುಪಾತದೊಂದಿಗೆ ಜಾರಿಗೊಳಿಸಲಾಗಿದೆ. ಈಶಾನ್ಯ ಮತ್ತು ವಿಶೇಷ ವರ್ಗದ ರಾಜ್ಯಗಳನ್ನು ಹೊರತುಪಡಿಸಿ 90:10 ನಿಧಿಯ ಅನುಪಾತವನ್ನು ಜಾರಿಗೊಳಿಸಲಾಗಿದೆ. ಕೇಂದ್ರಾಡಳಿತ ಪ್ರದೇಶಗಳಿಗೆ ಶೇ 100 ಕೇಂದ್ರದ ಧನಸಹಾಯವನ್ನು ನೀಡಲಾಗುತ್ತದೆ.

4 ಹಂತಗಳಾಗಿ ವಿಭಾಗ; ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಒಟ್ಟು 4 ಹಂತಗಳಾಗಿ ವಿಭಾಗ ಮಾಡಲಾಗಿದೆ. ರಾಷ್ಟ್ರೀಯ ಮಟ್ಟ, ರಾಜ್ಯ ಮಟ್ಟ, ಜಿಲ್ಲಾ ಮಟ್ಟ ಮತ್ತು ಬ್ಲಾಕ್ ಮಟ್ಟದಲ್ಲಿ ಯೋಜನೆ ಜಾರಿಯಾಗಿದೆ. ರಾಜ್ಯಮಟ್ಟದಲ್ಲಿ ಯೋಜನೆ ಅನ್ವಯ ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸರ್ಕಾರಗಳಿಗೆ ತಾಂತ್ರಿಕ ಬೆಂಬಲವನ್ನು ನೀಡಲು ರಾಜ್ಯ ಸಂಪನ್ಮೂಲ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ.

ಜಿಲ್ಲಾ ಮಟ್ಟದ ಮಹಿಳಾ ಕೇಂದ್ರಗಳಲ್ಲಿ ಮಹಿಳಾ ಕಲ್ಯಾಣ ಅಧಿಕಾರಿಗಳು ಮತ್ತು ಜಿಲ್ಲಾ ಸಂಯೋಜಕರನ್ನು ನೇಮಕ ಮಾಡಲಾಗುತ್ತದೆ. ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಅನುಷ್ಠಾನದ ಮಾರ್ಗಸೂಚಿಗಳ ಪ್ರಕಾರ ಈ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮಹಿಳೆಯರ ಪರವಾಗಿ ಇರುವ ಯೋಜನೆಗಳನ್ನು ತಳಮಟ್ಟಕ್ಕೆ ತಲುಪಿಸಲು ಇವರು ಕಾರ್ಯ ನಿರ್ವಹಣೆಯನ್ನು ಮಾಡುತ್ತಾರೆ.

ಯೋಜನೆಯ ಭಾಗವಾಗಿ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ಕಾರ್ಯಪಡೆಗಳಿಗೆ ಅವುಗಳ ಹಂತಗಳಲ್ಲಿ ಪರಿಶೀಲನೆ, ಮೇಲ್ವಿಚಾರಣೆ ಮತ್ತು ಸಮನ್ವಯವನ್ನು ಒದಗಿಸುವ ಕಾರ್ಯವೂ ನಡೆಯುತ್ತದೆ. ಯೋಜನೆಯ ಕಾರ್ಯಚಟುವಟಿಕೆಯನ್ನು ಅಭಿವೃದ್ಧಿ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಕಚೇರಿ ಮತ್ತು ನೀತಿ ಆಯೋಗವು ಸಹ ಉಸ್ತುವಾರಿ ಮಾಡುತ್ತವೆ.

ಬ್ಲಾಕ್ ಮಟ್ಟದಲ್ಲಿ ಈ ಯೋಜನೆಯ ಕಾರ್ಯ ಚಟುವಟಿಕೆಗಳು ಜಾರಿಗೆ ಬರಬೇಕಿದೆ. ವಿದ್ಯಾರ್ಥಿ ಸ್ವಯಂಸೇವಕರನ್ನು ಸಹ ಇದಕ್ಕಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳು/ ಯೋಜನೆಗಳು ಮಹಿಳೆಯರ ಜೀವನದ ಮೇಲೆ ಪರಿಣಾಮ ಬೀರುವ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

ಗ್ರಾಮೀಣ ಭಾಗದ ಮಹಿಳೆಯರನ್ನು ತಲುಪಿ ಪೋಷಣೆ, ಆರೋಗ್ಯ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ಸಾಕ್ಷರತೆ ಇತ್ಯಾದಿಗಳ ಬಗ್ಗೆ ಅವರಿಗೆ ಮಾಹಿತಿಯನ್ನು ನೀಡಿ ಸಬಲೀಕರಣಗೊಳಿಸಲಾಗುತ್ತದೆ. ಮೊದಲು ದೇಶದ ಅತ್ಯಂತ ಹಿಂದುಳಿದ ಎಂದು ಗುರುತಿಸಲಾದ 115 ಜಿಲ್ಲೆಗಳಲ್ಲಿ ಮಹಿಳಾ ಶಕ್ತಿ ಕೇಂದ್ರ ಯೋಜನೆ ಜಾರಿಗೊಳಿಸಲಾಯಿತು.

ಈ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆ, ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರು, ಸಾಮಾನ್ಯ ಸೇವಾ ಕೇಂದ್ರಗಳು, ಸಹಾಯಕ ಶುಶ್ರೂಷಕರು, ಶಿಕ್ಷಾ ಮಿತ್ರ ಮುಂತಾದ ಮುಂಚೂಣಿಯ ಕಾರ್ಯಕರ್ತರು ಸಹ ಕೆಲಸ ಮಾಡುತ್ತಾರೆ.

2018-19 ರಿಂದ 2020-21ರ ತನಕ ರಾಜ್ಯಗಳಿಗೆ ಮಹಿಳಾ ಶಕ್ತಿ ಕೇಂದ್ರ ಯೋಜನೆ ಅನ್ವಯ ಕೇಂದ್ರ ಸರ್ಕಾರ ಅನುದಾನವನ್ನು ನೀಡಿದೆ. ಕರ್ನಾಟಕ ರಾಜ್ಯಕ್ಕೆ 2018-19ರಲ್ಲಿ 169.83, 2019-20ರಲ್ಲಿ 122.43 ಮತ್ತು 2020-21ರಲ್ಲಿ 244.13 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಮಧ್ಯ ಪ್ರದೇಶ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲಾವಾರು ಅನುದಾನ ಹಂಚಿಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+