ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಬಲಿಪಡೆದ ಭಾರತೀಯ ಸೇನೆ
ಶೋಪಿಯಾನ್, ಜುಲೈ 10: ಜಮ್ಮು ಕಾಶ್ಮೀರದ ಶೋಪಿಯಾನ್ ದ ಕುಂಡಲನ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಇಂದು ಬೆಳಗ್ಗಿನ ಜಾವ ಸಿಆರ್ ಪಿಎಫ್ ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ಮುಂದುವರಿದಿದ್ದು, ಉಗ್ರರು ಇಲ್ಲಿನ ಮನೆಯೊಂದರಲ್ಲಿ ಅಡಗಿ ಕುಳಿತಿದ್ದರು ಎನ್ನಲಾಗಿತ್ತು.
ನಾಲ್ವರು ಭಯೋತ್ಪಾದಕರು ಇಲ್ಲಿರಬಹುದೆಂದು ಶಂಕಿಸಲಾಗಿತ್ತು. ಅವರಲ್ಲಿ ಇಬ್ಬರನ್ನು ಈಗ ಸದೆಬಡಿಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

ಇತ್ತೀಚೆಗಷ್ಟೇ ಕಾಶ್ಮೀರದ ಕುಲ್ಗಾಮ್ ನ ಪರಿವಾನ್ ಎಂಬಲ್ಲಿ ಪೊಲೀಸ್ ಪೇದೆಯೊಬ್ಬನನ್ನು ಅಪಹರಿಸಿ ಕೊಲ್ಲಲಾಗಿತ್ತು. ಅದಕ್ಕೂ ಮುನ್ನ ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದರು.












Click it and Unblock the Notifications