ವೈರಿಗಳು ತಡೆಯಲು ಯತ್ನಿಸುತ್ತಿದ್ದಾರೆ ಆದರೆ ನಾವು ಹೋರಾಡುತ್ತೇವೆ: ಮೋದಿ

ನವದೆಹಲಿ, ಫೆಬ್ರವರಿ 28: ವೈರಿಗಳು ನಮ್ಮನ್ನು ತಡೆಯುವ ಯತ್ನ ಮಾಡುತ್ತಿದ್ದಾರೆ. ಆದರೆ ನಾವು ನಿಲ್ಲುವುದಿಲ್ಲ, ಹೋರಾಡುತ್ತೇವೆ, ಭಾರತವು ಒಂದಾಗಿ ಗೆಲ್ಲುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ಅವರು ಇಂದು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶೀಸಿ ಆನ್‌ಲೈನ್ ಮೂಲಕ ಮಾತನಾಡಿದರು. ದೇಶದ ಗಡಿಯಲ್ಲಿ ಗಂಭೀರ ಪರಿಸ್ಥಿತಿ ಇದ್ದರೂ ಮೋದಿ ಅವರು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸಿತ್ತು. ಅದರ ನಡುವೆಯೂ ಮೋದಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದರು.

'ಮೇರಾ ಬೂತ್ ಸಬ್‌ಸೇ ಮಜಬೂತ್‌' ಎಂಬ ಆನ್‌ಲೈನ್ ಕಾನ್ಫರೆನ್ಸ್‌ನಲ್ಲಿ ಮೋದಿ ಅವರು ಕೋಟ್ಯಂತರ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿದರು. ಇದು ವಿಶ್ವದಲ್ಲಿ ಅತಿ ಹೆಚ್ಚು ಮಂದಿ ಭಾಗಿಯಾದ ವಿಡಿಯೋ ಕಾನ್ಫರೆನ್ಸ್‌ಗಳಲ್ಲಿ ಒಂದು ಎಂದು ಹೇಳಲಾಗುತ್ತಿದೆ.

Enemy trying to stop us, but we will fight as one: Narendra Modi

ವೈರಿಯು ಭಯೋತ್ಪಾದನೆಗೆ ಬೆಂಬಲ ನೀಡಿ, ಭಾರತವನ್ನು ನಿಲ್ಲಿಸಲು ಪ್ರಯತ್ನಿಸಿದಾಗ ಭಾರತವು ಒಗ್ಗಟ್ಟಿನಿಂದ ಅದರ ವಿರುದ್ಧ ಹೋರಾಡಬೇಕು. ಇಲ್ಲದಿದ್ದರೆ ನಾವು ಅಭಿವೃದ್ಧಿ ಪಥದಲ್ಲಿ ಹಿಂದೆ ಉಳಿಯುತ್ತೇವೆ ಎಂದು ಮೋದಿ ಹೇಳಿದರು.

ನಮ್ಮ ಒಗ್ಗಟ್ಟಿನ ಹೋರಾಟವನ್ನು ವಿಶ್ವವೇ ನೋಡುತ್ತಿದೆ. ನಮ್ಮ ಸೈನಿಕರ ಶಕ್ತಿಯ ಮೇಲೆ ನಮಗೆ ವಿಶ್ವಾಸವಿದೆ. ನಮ್ಮ ವೈರಿಗಳು ನಮ್ಮ ಮೇಲೆ ಬೆರಳು ತೋರಿಸುವಂತಹಾ ಹಾಗೂ ಸೈನಿಕರ ಆತ್ಮವಿಶ್ವಾಸ ಕುಸಿಯುವಂತಹಾ ಯಾವುದೇ ಘಟನೆಗಳು ಆಗಬಾರದು ಎಂದು ಮೋದಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+