ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮನಿ ಲಾಂಡ್ರಿಂಗ್ ಕೇಸ್: ಅನಿಲ್ ದೇಶ್‌ಮುಖ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ED

|
Google Oneindia Kannada News

ಮುಂಬೈ, ಅ.11: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖಂಡ ಅನಿಲ್ ದೇಶ್‌ಮುಖ್‌ಗೆ ಬಾಂಬೆ ಹೈಕೋರ್ಟ್ ಕಳೆದ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಅಕ್ಟೋಬರ್ 13ರಿಂದ ಜಾಮೀನು ಪಡೆದುಕೊಳ್ಳಬಹುದಾಗಿದೆ. ಈ ನಡುವೆ ಅನಿಲ್ ದೇಶ್‌ಮುಖ್‌ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಈ ನಡುವೆ ಅನಿಲ್ ಆರೋಗ್ಯ ಕೂಡಾ ಹದಗೆಟ್ಟಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ ಡಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

Enforcement Directorate moves Supreme Court against granting bail to Anil Deshmukh

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮೇಲ್ಮನವಿಯನ್ನು ಪ್ರಸ್ತಾಪಿಸಿದ ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರಿದ್ದ ಪೀಠ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲು ಸಮ್ಮತಿಸಿದೆ.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಜಾರಿ ನಿರ್ದೇಶನಾಲಯಕ್ಕೆ ಅನುವು ಮಾಡಿಕೊಡುವ ಸಲುವಾಗಿ ಹೈಕೋರ್ಟ್ ಅಕ್ಟೋಬರ್ 13ರಿಂದ ಅನ್ವಯವಾಗುವಂತೆ ದೇಶಮುಖ್‌ಗೆ ಹೈಕೋರ್ಟ್‌ ಜಾಮೀನು ನೀಡಿತ್ತು.

 ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್‌ ದೇಶ್‌ಮುಖ್‌ ಬಂಧನ

ದೇಶಮುಖ್ ಮತ್ತು ಅವರ ಸಹಚರರ ವಿರುದ್ಧ 2019 ಮತ್ತು 2021 ರ ನಡುವಿನ ಭ್ರಷ್ಟಾಚಾರದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಮುಂಬೈ ಪೋಲಿಸ್‌ನ ಮಾಜಿ ಕಮಿಷನರ್ ಪರಮ್ ಬೀರ್ ಸಿಂಗ್ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಬಾಂಬೆ ಹೈಕೋರ್ಟ್ ಏಪ್ರಿಲ್ 5, 2021 ರಂದು ನಿರ್ದೇಶನದಂತೆ ವಿಚಾರಣೆಯನ್ನು ಪ್ರಾರಂಭಿಸಲಾಯಿತು. ಸಿಬಿಐ ದೇಶಮುಖ್ ಮತ್ತು ಅಪರಿಚಿತ ಇತರರನ್ನು ವಿಚಾರಣೆಗೆ ಒಳಪಡಿಸಿದೆ.

ಆಸ್ಪತ್ರೆಗೆ ದೇಶ್ ಮುಖ್
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮುಂಬೈ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈನ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಿಶೇಷ ನ್ಯಾಯಾಲಯವು ಪುರಸ್ಕರಿಸಿದೆ.

ದೇಶ್‌ಮುಖ್ ಆರಂಭಿಕ ಪರಿಧಮನಿ(coronary)ಯ ಆಂಜಿಯೋಗ್ರಫಿ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಮತ್ತು ಅಗತ್ಯವಿದ್ದರೆ ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ವಿಶೇಷ ನ್ಯಾಯಾಧೀಶ ಆರ್‌ಎನ್ ರೋಕ್ಡೆ ಅವರಿಗೆ ದೇಶ್‌ಮುಖ್ ಪರ ವಕೀಲರಾದ ಅನಿಕೇತ್ ನಿಕಮ್ ಮತ್ತು ಇಂದರ್‌ಪಾಲ್ ಸಿಂಗ್ ಅವರು ಮನವಿ ಮಾಡಿಕೊಂಡರು. ಸದ್ಯ ಆರ್ಥರ್ ರೋಡ್ ಜೈಲಿನಲ್ಲಿ ಅನಿಲ್ ಇದ್ದಾರೆ. ಜೈಲಿನಿಂದ ಪೊಲೀಸ್ ಬೆಂಗಾವಲು ಮೂಲಕ ಆಸ್ಪತ್ರೆಗೆ ತೆರಳಲು ತಗುಲುವ ಖರ್ಚು ವೆಚ್ಚ, ಅಲ್ಲಿನ ಚಿಕಿತ್ಸಾ ವೆಚ್ಚ ಎಲ್ಲವನ್ನು ಅನಿಲ್ ಭರಿಸಬೇಕು ಎಂದು ಕೋರ್ಟ್ ತಿಳಿಸಿದೆ.

Anil Deshmukh

ಪ್ರಕರಣದ ಹಿನ್ನೆಲೆ: ಪ್ರತಿ ತಿಂಗಳು 100 ಕೋಟಿ ವಸೂಲಿ ಮಾಡಿ ನೀಡುವಂತೆ ಕೆಲವು ಪೊಲೀಸ್ ಅಧಿಕಾರಿಗಳಿಗೆ ಅನಿಲ್ ದೇಶ್‌ಮುಖ್ ಆದೇಶಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ತನಿಖೆ ನಡೆಸುವಂತೆ ಪರಮ್ ಬೀರ್ ಸೇರಿದಂತೆ ಅನೇಕರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಜಯಶ್ರೀ ಪಾಟೀಲ್ ಎಂಬುವವರ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದ ನ್ಯಾಯಾಲಯ, ಪರಮ್ ಬೀರ್ ಸಿಂಗ್, ವಕೀಲರಾದ ಘನಶ್ಯಾಮ್ ಉಪಾಧ್ಯಾಯ್ ಮತ್ತು ಮೋಹನ್ ಭಿಡೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತ್ತು.

ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಪೋಟಕ ವಾಹನ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರ ನಗರ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಪರಮ್‌ ಬೀರ್‌ ಸಿಂಗ್‌ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಬರೆದಿದ್ದಾರೆನ್ನಲಾದ ಪತ್ರದಲ್ಲಿ ಲಂಚದ ಬಗ್ಗೆ ಪ್ರಸ್ತಾಪಿಸಿ ಅನಿಲ್ ವಿರುದ್ಧ ಆರೋಪ ಮಾಡಲಾಗಿದೆ. ಈ ಬಗ್ಗೆ ಅನಿಲ್ ದೇಶ್ ಮುಖ್ ಸ್ಪಷ್ಟನೆ ನೀಡಿ, ಆರೋಪಗಳನ್ನು ತಳ್ಳಿ ಹಾಕಿದ್ದರು.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರು ಪತ್ರ ಬರೆದಿದ್ದು, 100 ಕೋಟಿ ಹಫ್ತಾ ವಸೂಲಿ ಮಾಡಲು ಇಲಾಖೆಗೆ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಂದ ಸೂಚನೆ ಬಂದಿತ್ತು ಎಂದು ಗಂಭೀರ ಆರೋಪ ಮಾಡಿದ್ದರು.

ಮುಂಬೈ ಹುಕ್ಕಾ ಪಾರ್ಲರ್‌ ಸಭೆ ಮುಂಬೈ ಹುಕ್ಕಾ ಪಾರ್ಲರ್‌ಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಸಭೆಯ ನಂತರ ಗೃಹ ಸಚಿವರ ವೈಯಕ್ತಿಕ ಕಾರ್ಯದರ್ಶಿ ಪಲಾಂಡೆ ಅವರು ಎಸಿಪಿ ಪಾಟೀಲ್‌ ಅವರನ್ನುದ್ದೇಶಿಸಿ ʼಗೃಹಸಚಿವರು ಮುಂಬೈನಲ್ಲಿರುವ ಅಂದಾಜು 1750 ಬಾರ್‌, ರೆಸ್ಟೋರೆಂಟ್‌ಗಳು ಮತ್ತಿತರ ವ್ಯಾಪಾರಿಗಳಿಂದ ಸುಮಾರು 40ರಿಂದ 50 ಕೋಟಿ ರೂಪಾಯಿ ಸಂಗ್ರಹದ ಗುರಿಹೊಂದಿದ್ದಾರೆ ಎಂದು ತಿಳಿಸಿದ್ದರು.

English summary
The Enforcement Directorate (ED) on Monday moved the Supreme Court in appeal against a Bombay High Court order granting bail to former Maharashtra Home Minister Anil Deshmukh in a money laundering case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X