Waqf Bill: ವಕ್ಫ್ ಮಸೂದೆ ವಿರುದ್ಧ ಮತ ಹಾಕಲು ಇಂಡಿಯಾ ಒಕ್ಕೂಟ ನಿರ್ಧಾರ
ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಪೂರ್ಣ ಚರ್ಚೆ ನಡೆಸಲು ವಿರೋಧ ಪಕ್ಷಗಳು ಸರ್ವಾನುಮತದಿಂದ ನಿರ್ಧರಿಸಿವೆ. ಸಂಸತ್ತಿನಲ್ಲಿ ವಕ್ಫ್ ಮಸೂದೆ ವಿರುದ್ಧ ಮತ ಚಲಾಯಿಸಲು ಇಂಡಿಯಾ ಒಕ್ಕೂಟದ ಸಂಸದರು ನಿರ್ಧರಿಸಿದ್ದಾರೆ. ಮಂಗಳವಾರ ಸಂಜೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ಇದರಲ್ಲಿ ಎಲ್ಲಾ ವಿರೋಧ ಪಕ್ಷಗಳು ಭಾಗಿಯಾಗಿದ್ದವು.
ಸಭೆಯಲ್ಲಿ ಭಾಗವಹಿಸಿದ್ದ ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ "ಮಸೂದೆಯ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ನಿರ್ಧರಿಸಿಲಾಗಿದೆ ಮತ್ತು ಬೂಧವಾರ ಮಸೂದೆಯನ್ನು ಅಂಗೀಕರಿಸಲು ಬಲವಾಗಿ ವಿರೋಧ ಮಾಡುತ್ತೇವೆ" ಎಂದು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. ವಿರೋಧ ಪಕ್ಷಗಳು ಪ್ರತಿ ಹಂತದಲ್ಲೂ ಮಸೂದೆಯನ್ನು ವಿರೋಧ ಮಾಡುತ್ತಲೇ ಬಂದಿವೆ ಎಂದಿದ್ದಾರೆ.

ಮಸೂದೆಯನ್ನು ವಿರೋಧಿಸಲು ಸಭಾತ್ಯಾಗ ಅಥವಾ ಪ್ರತಿಭಟನೆ, ಅಡ್ಡಿ ಮಾಡುವುದಿಲ್ಲ ಎಂದಿರುವ ಅವರು, ಮಸೂದೆಯ ನ್ಯೂನತೆಗಳನ್ನು ಎತ್ತಿ ತೋರಿಸುತ್ತೇವೆ. ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಹೇಳಿದರು.
ಇಂಡಿಯಾ ಮೈತ್ರಿಕೂಟದ ಜೊತೆಗೆ, ಸಮಾನ ಮನಸ್ಕ ಪಕ್ಷಗಳಿಗೂ ಮವಿ ಮಾಡಿದ್ದೇಬೆ. ವಕ್ಫ್ ಮಸೂದೆ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಎಐಎಡಿಎಂಕೆ ಈಗಾಗಲೇ ಮಸೂದೆಯ ವಿರುದ್ಧ ಮತ ಚಲಾಯಿಸುವುದಾಗಿ ಸ್ಪಷ್ಟನೆ ನೀಡಿದೆ.
ನವೀನ್ ಪಟ್ನಾಯಕ್ ಅವರ ಬಿಜು ಜನತಾದಳ ಮತ್ತು ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿ ವಕ್ಫ್ ಮಸೂದೆ ಬಗ್ಗೆ ತಮ್ಮ ನಿಲುವು ಏನು ಎನ್ನುವುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ.
ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಆಡಳಿತವನ್ನು ಸುಧಾರಿಸುವ ವಿವಾದಾತ್ಮಕ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ತೆಗೆದುಕೊಳ್ಳಲಾಗುವುದು. ಚರ್ಚೆಗೆ ಸುಮಾರು ಎಂಟು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ, ಆದರೆ ಪ್ರತಿಪಕ್ಷಗಳು 10 ಗಂಟೆಗಳ ಕಾಲಾವಕಾಶ ಕೇಳಿವೆ. ವಕ್ಫ್ ಮಸೂದೆಯನ್ನು ಸಂವಿಧಾನಬಾಹಿರ ಎಂದು ಪ್ರತಿಪಕ್ಷಗಳು ಖಂಡಿಸಿವೆ.
ಕಳೆದ ವರ್ಷ ಮಸೂದೆಯನ್ನು ಪರಿಚಯಿಸುವಾಗ, ಸರ್ಕಾರವು ಅದನ್ನು ಎರಡು ಸದನಗಳ ಜಂಟಿ ಸಮಿತಿಗೆ ಉಲ್ಲೇಖಿಸಲು ಪ್ರಸ್ತಾಪಿಸಿತ್ತು. ವರದಿ ಬಂದ ನಂತರ, ಸಮಿತಿಯ ಶಿಫಾರಸಿನ ಆಧಾರದ ಮೇಲೆ ಸಚಿವ ಸಂಪುಟ ಕೆಲವು ಬದಲಾವಣೆಗಳಿಗೆ ಒಪ್ಪಿಗೆ ನೀಡಲಾಗಿತ್ತು. ಕಾಂಗ್ರೆಸ್ ಮತ್ತು ಲಾಲು ಯಾದವ್ ಅವರ ರಾಷ್ಟ್ರೀಯ ಜನತಾದಳವು ತಮ್ಮ ಎಲ್ಲಾ ಲೋಕಸಭಾ ಸಂಸದರಿಗೆ ವಿಪ್ ಜಾರಿ ಮಾಡಿದ್ದು, ಮುಂದಿನ ಮೂರು ದಿನಗಳವರೆಗೆ ಸದನದಲ್ಲಿ ಉಪಸ್ಥಿತರಿರಬೇಕು ಎಂದು ಹೇಳಿದೆ.
ವಿರೋಧ ಪಕ್ಷಕ್ಕೆ ತಮಿಳುನಾಡಿನ ವಿರೋಧ ಪಕ್ಷವಾದ ಎಐಎಡಿಎಂಕೆ, ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ ಮತ್ತು ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿಯಂತಹ ಅಲಿಪ್ತ ಪಕ್ಷಗಳು ಬೆಂಬಲ ಸೂಚಿಸಿವೆ.












Click it and Unblock the Notifications