ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಹುಟ್ಟುಹಬ್ಬದ ದಿನ 6 ಕೋಟಿ ನೌಕರರಿಗೆ ಕೇಂದ್ರದಿಂದ ಶುಭ ಸುದ್ದಿ

|
Google Oneindia Kannada News

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನದಂದು ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಏರಿಕೆ ಮಾಡಲಾಗಿದೆ. ಇಪಿಎಫ್ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿರುವುದನ್ನು ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಾಂಗ್ವರ್ ಖಚಿತ ಪಡಿಸಿದ್ದಾರೆ.

ಎಸ್ಎಂಎಸ್ ಮೂಲಕ ಇಪಿಎಫ್ ಚೆಕ್ ಮಾಡುವುದು ಹೇಗೆ?ಎಸ್ಎಂಎಸ್ ಮೂಲಕ ಇಪಿಎಫ್ ಚೆಕ್ ಮಾಡುವುದು ಹೇಗೆ?

2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದ್ದು, 2018-19ನೇ ಸಾಲಿನಿಂದಲೇ ಜಾರಿಯಾಗಲಿದೆ ಎಂದು ವಿತ್ತ ಸಚಿವಾಲಯ ಪ್ರಕಟವಾಗಿದೆ.

ಭವಿಷ್ಯ ನಿಧಿ ವಿಥ್ ಡ್ರಾ ನಿಯಮದಲ್ಲಿ ಏನಿದು ಹೊಸ ಬದಲಾವಣೆಭವಿಷ್ಯ ನಿಧಿ ವಿಥ್ ಡ್ರಾ ನಿಯಮದಲ್ಲಿ ಏನಿದು ಹೊಸ ಬದಲಾವಣೆ

ಬಡ್ಡಿದರದಲ್ಲಿ 10 ಮೂಲಾಂಶ ಏರಿಕೆ ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ.

EPFO interest rates hiked, good news for 6 crore members

ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್‌ ಬಡ್ಡಿದರದ ನಿರ್ಧಾರ ತೆಗೆದುಕೊಂಡು ವಿತ್ತ ಸಚಿವಾಲಯಕ್ಕೆ ಕಳಿಸಿದ್ದರು. ಆದರೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರಲಿಲ್ಲ

ಪಿಂಚಣಿದಾರರಿಗೆ ಶುಭ ಸುದ್ದಿ ನೀಡುವ ಸುಳಿವು ಕೊಟ್ಟ ನಿರ್ಮಲಾಪಿಂಚಣಿದಾರರಿಗೆ ಶುಭ ಸುದ್ದಿ ನೀಡುವ ಸುಳಿವು ಕೊಟ್ಟ ನಿರ್ಮಲಾ

ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.

English summary
The EPFO Interest rates have been hiked. This comes as good news for 6 crore EPFO members. Union labour minister, Santosh Gangwar confirms this news on PM Narendra Modi's Birthday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X