ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಕೆಟಿಗರಿಗೆ ಸಮಾನ ವೇತನ: ಬಿಸಿಸಿಐ ನಿರ್ಧಾರ ಸ್ವಾಗತಿಸಿದ ಸೆಲೆಬ್ರಿಟಿಗಳು

|
Google Oneindia Kannada News

ನವದೆಹಲಿ, ಅ.28: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರದಂದು ಐತಿಹಾಸಿಕ ನಿರ್ಧಾರ ಘೋಷಿಸಿದ್ದು, ಪುರುಷ ಮತ್ತು ಮಹಿಳಾ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಮಾನ ವೇತನವನ್ನು ಘೋಷಿಸಿದೆ.

ಬಿಸಿಸಿಐ ನಿರ್ಧಾರಕ್ಕೆ ಎಲ್ಲಾ ರಂಗಗಳಿಂದಲೂ ಪ್ರಶಂಸೆ ವ್ಯಕ್ತವಾಗಿದೆ. ಸ್ಯಾಂಡಲ್‌ವುಡ್, ಬಾಲಿವುಡ್ ಸೇರಿದಂತೆ ಅನೇಕ ಚಿತ್ರರಂಗದ ಕಲಾವಿದರು ಕ್ರಿಕೆಟ್ ಮಂಡಳಿಯ ಘೋಷಣೆ ಬೆನ್ನಲ್ಲೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ನಿರ್ಧಾರವನ್ನು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದ್ದಾರೆ.

ಟ್ವಿಟ್ಟರ್‌ನಲ್ಲಿ ಶುಭ ಹಾರೈಸಿರುವ ಬಾಲಿವುಡ್ ನಟ ಶಾರುಖ್ ಖಾನ್, ಇದೊಂದು ಉತ್ತಮ ಹೆಜ್ಜೆ. ಕ್ರೀಡೆಯ ಇಂತಹ ನಿರ್ಧಾರಗಳು ಇತರರು ಅನುಸರಿಸಲು ದಾರಿ ಮಾಡಿಕೊಡುತ್ತದೆ ಎಂದಿದ್ದಾರೆ. ಶಾರುಖ್ ಖಾನ್ ಉತ್ತಮ ಕ್ರಿಕೆಟ್ ಅಭಿಮಾನಿಯಾಗಿದ್ದು, ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ ಹಲವಾರು ತಂಡಗಳನ್ನು ಹೊಂದಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಡಿಯೊವನ್ನು ಹಂಚಿಕೊಂಡು, "ಸಮಾನತೆ ಮತ್ತು ವೇತನ ಸಮಾನತೆಯನ್ನು ಖಾತ್ರಿಪಡಿಸುವಲ್ಲಿ ಒಂದು ಐತಿಹಾಸಿಕ ನಿರ್ಧಾರ" ಎಂದಿದ್ದಾರೆ.

Equal pay for Cricketers; Celebrities React To BCCI Announcement

ನಟಿ ಅನುಷ್ಕಾ ಶರ್ಮಾ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸುದ್ದಿಯನ್ನು ಹಂಚಿಕೊಂಡು ಚಪ್ಪಾಳೆ ತಟ್ಟುವ ಎಮೋಜಿಗಳನ್ನು ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ನಟ ಸುನೀಲ್ ಶೆಟ್ಟಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. "ಈ ಸಬಲೀಕರಣ ಮತ್ತು ಐತಿಹಾಸಿಕ ನಿರ್ಧಾರದಲ್ಲಿ ಭಾಗಿಯಾಗಿರುವ ಬಿಸಿಸಿಐ ಮತ್ತು ಪ್ರತಿಯೊಬ್ಬರಿಗೂ ಅಭಿನಂದನೆಗಳು. ಇದು ನವ ಭಾರತದ ಉದಯ" ಎಂದು ಶೀರ್ಷಿಕೆ ನೀಡಿದ್ದಾರೆ.

ನಟಿ ತಾಪ್ಸಿ ಪನ್ನು, ನಟ ಅಕ್ಷಯ್ ಕುಮಾರ್ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.

Equal pay for Cricketers; Celebrities React To BCCI Announcement

ಸ್ಯಾಂಡಲ್‌ವುಡ್ ನಟಿ ರಮ್ಯಾ ಕೂಡ ಟ್ವೀಟ್ ಮಾಡಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. "ತುಂಬಾ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾರವಾಗಿದೆ. ಚಿತ್ರೋದ್ಯಮ ಸಹ ಇದನ್ನು ಅನುಸರಿಸಬೇಕು" ಎಂದು ನಟಿ ರಮ್ಯಾ ಟ್ವೀಟ್ ಮಾಡಿದ್ದಾರೆ.

''ಮ್ಯಾಚ್ ಫೀ ವಿಷಯದಲ್ಲಿ ಮಹಿಳಾ ಕ್ರಿಕೆಟಿಗರನ್ನು ಪುರುಷರ ಕ್ರಿಕೆಟಿಗರಿಗೆ ಸರಿಸಮನಾಗಿ ತರುವ ನಿರ್ಧಾರವು ಹಲವು ರೀತಿಯಲ್ಲಿ ಕ್ರಾಂತಿಕಾರಿ ನಿರ್ಧಾರವಾಗಿದೆ. ಒಪ್ಪಂದ ಮಾಡಿಕೊಂಡಿರುವ ಹಿರಿಯ ಮಹಿಳಾ ಕ್ರಿಕೆಟಿಗರು, ಪುರುಷ ಕ್ರಿಕೆಟಿಗರಿಗೆ ಸಮಾನವಾದ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ'' ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.

"ತಾರತಮ್ಯವನ್ನು ನಿವಾರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನಾವು ನಮ್ಮ ಒಪ್ಪಂದದ ಮಹಿಳಾ ಕ್ರಿಕೆಟಿಗರಿಗೆ ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ಭಾರತೀಯ ಕ್ರಿಕೆಟ್‌ ಲಿಂಗ ಸಮಾನತೆಯ ಹೊಸ ಯುಗಕ್ಕೆ ತೆರೆದುಕೊಳ್ಳುತ್ತಿರುವಾಗ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ" ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

English summary
Equal pay for men and women cricketers: Celebrities Shah Rukh Khan, Akshay Kumar, Anushka Sharma, ramya react to BCCI announcement. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X