ಎಥನಾಲ್ ಬಳಕೆ ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘದಿಂದ ಹೊಸ ಡಿಮ್ಯಾಂಡ್, ಕೇಂದ್ರ ಸರ್ಕಾರಕ್ಕೆ ಶಾಕ್!‌

Ethanol: ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಎಥನಾಲ್ ವಿಷಯವಾಗಿ ಹೆಚ್ಚು ಚರ್ಚೆ ನಡೆಯುತ್ತಿದೆ. ಪೆಟ್ರೋಲ್‌ನಲ್ಲಿ ಎಥನಾಲ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಕೆಲವು ವಾಹನ ಸವಾರರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಪೆಟ್ರೋಲ್‌ನೊಂದಿಗೆ ಇದೀಗ ದೇಶದಾದ್ಯಂತ ಶೇ 20 ಪ್ರತಿಶತ ಎಥನಾಲ್ ಬಳಕೆ ಮಾಡಲಾಗುತ್ತಿದೆ. ಆದರೆ ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣ ಮಾಡುತ್ತಿರುವುದರಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ವಿಷಯವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘವು ಕೇಂದ್ರ ಸರ್ಕಾರಕ್ಕೆ ಎಥನಾಲ್ ವಿಚಾರದಲ್ಲಿ ಮಹತ್ವದ ಮನವಿಯನ್ನು ಮಾಡಿದೆ.

ಕಬ್ಬು ಭತ್ತ ಹಾಗೂ ಮೆಕ್ಕೆಜೋಳ ಸೇರಿದಂತೆ ವಿವಿಧ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದು ಸ್ವಾಗತ. ಆದರೆ, ಕೆಲವೊಂದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಎಥನಾಲ್ ಬಳಕೆ ಹಾನಿಕಾರಕ. ವಾಹನಗಳ ಯಂತ್ರಗಳಿಗೆ ದುಷ್ಪರಿಣಾಮ ಬೀರುತ್ತದೆ ಹಾಗೂ ಮೈಲೇಜ್ ಕಡಿಮೆಯಾಗುತ್ತದೆ ಎಂದು ತಪ್ಪಾಗಿ ಬಿಂಬಿಸುತ್ತಿವೆ. ವಿದೇಶದಲ್ಲಿ ಪೆಟ್ರೋಲಿಯಂ ಉತ್ಪಾದಿಸುವ ಕಂಪನಿಗಳ ಲಾಭಿಯ ಒತ್ತಡಕ್ಕೆ ಮಣಿದು ಈ ರೀತಿ ಪ್ರಚಾರ ಮಾಡಲಾಗುತ್ತಿದೆ ಎಂದು ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘವು ದೂರಿದೆ.

Ethanol

ಅಲ್ಲದೆ ದೇಶಿಯ ಉತ್ಪನ್ನವಾದ ಎಥನಾಲ್ ಹೆಚ್ಚು ಉತ್ಪಾದಿಸಿ ಬಳಸುವುದರಿಂದ ರೈತರಿಗೆ ಹೆಚ್ಚು ಆದಾಯ ಬರುತ್ತದೆ ಹಾಗೂ ಪರಿಸರ ಸ್ನೇಹಿಯಾಗಿರುವ ಎಥನಾಲ್ ನಿಂದ ದೇಶದ ತಲಾ ವರಮಾನ ಜಾಸ್ತಿಯಾಗುವುದರ ಜೊತೆಗೆ ದೇಶ ಆರ್ಥಿಕವಾಗಿ ಸ್ವಾವಲಂಬಿಯಾಗಲು ಸಾಧ್ಯವಾಗುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಚ್ಚಾತೈಲದ ಅವಲಂಬನೆ ಕಡಿಮೆಯಾಗುತ್ತದೆ ಹಾಗೂ ಆಮದು ಕಡಿಮೆಯಾಗಿ ದೇಶಕ್ಕೆ 4 ಲಕ್ಷ ಕೋಟಿ ವಿದೇಶಿ ವಿನಿಮಯ ಹಣ ಉಳಿತಾಯವಾಗುತ್ತದೆ.

ಇದರಿಂದ ದೇಶದ ಆರ್ಥಿಕತೆ ಸದೃಢವಾಗುತ್ತದೆ. ಈ ಹಣದಿಂದ ಇನ್ನಿತರ ಮೂಲ ಸೌಕರ್ಯಗಳಿಗೆ ಹೆಚ್ಚು ಹೊತ್ತು ನೀಡಲು ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘವು ಅಭಿಪ್ರಾಯಪಟ್ಟಿದೆ. ದೇಶದಾದ್ಯಂತ ಎಥನಾಲ್‌ಗೆ ಸಂಬಂಧಿಸಿದಂತೆ ಪರ - ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘವು ಈ ಮಾದರಿಯ ಮನವಿಯನ್ನು ಮಾಡಿದೆ.

ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯಬಾರದು ರೈತರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಎಥನಾಲ್ ವಿಚಾರದಲ್ಲಿ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+