ದೇವರಿಂದಲೂ ಅತ್ಯಾಚಾರ ತಡೆಯಲು ಸಾಧ್ಯವಿಲ್ಲ
ಲಕ್ನೋ, ಜು.21: ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ದೇವರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ರಾಜ್ಯಪಾಲ ಅಜೀಜ್ ಖುರೇಷಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಜೊತೆ ಸಭೆ ನಡೆಸಿ ಬಳಿಕ ಮಾಧ್ಯಮಗಳಿಗೆ ಅಜೀಜ್ ಖುರೇಷಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಉತ್ತರ ಪ್ರದೇಶದ ನಡೆಯುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿ ವರದಿ ಮಾಡುತ್ತಿವೆ. ರಾಜ್ಯ ಸರ್ಕಾರ ಬಿಡಿ, ದೇವರಿಂದಲೂ ರಾಜ್ಯದಲ್ಲಿ ನಡೆಯುತ್ತಿರುವ ಕ್ರೈಂ ಮತ್ತು ಅತ್ಯಾಚಾರವನ್ನು ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸ್ ಇಲಾಖೆ ರಾಜ್ಯದ ಮಹಿಳೆಯರ ಸುರಕ್ಷತೆ ವಿಚಾರದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅಜೀಜ್ ಖುರೇಷಿ ಒಪ್ಪಿಕೊಂಡಿದ್ದಾರೆ.
ರೇಪ್ ವಿಷಯ ಬಿಡಿ ಕಬಾಬ್ ತಿನ್ನಿ: ಶನಿವಾರ ಇಫ್ತಾರ್ ಪಾರ್ಟಿಯಲ್ಲಿ ಅಜೀಜ್ ಖುರೇಷಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಜಯ್‌ಗಾಂಧಿ ಇನ್ಸ್‌ಟಿಟ್ಯೂಟ್‌ನ ಲ್ಯಾಬ್ ಟೆಕ್ನೀಷಿಯನ್ ಮೇಲಿನ ಅತ್ಯಾಚಾರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ಖುರೇಷಿ, "ರೇಪ್ ವಿಷಯ ಬಿಟ್ಟುಬಿಡಿ. ಆ ಬಗ್ಗೆ ಆಮೇಲೆ ಮಾತಾಡೋಣ. ಇಲ್ಲಿ ಬಿರಿಯಾನಿ, ಕಬಾಬ್ ಸಖತ್ತಾಗಿ ಮಾಡಿದ್ದಾರೆ. ತಿಂದು ನೋಡಿ' ಎಂದು ಉಡಾಫೆಯ ಉತ್ತರ ನೀಡಿದ್ದರು.












Click it and Unblock the Notifications