HD Kumaraswamy: ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ, ಜುಲೈ 26: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Even Name Of Rama Cannot Be Removed It Will Come Back As Ramanagara By 2028 HD Kumaraswamy

ಯಾವುದೇ ಕಾರಣಕ್ಕೂ ರಾಮನಗರದಿಂದ ರಾಮನ ಹೆಸರನ್ನು ಬೇರ್ಪಡಿಸಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರು ತೆಗೆಯಲು ಸಾಧ್ಯ ಆಗುವುದಿಲ್ಲ. ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಕುಮಾರಸ್ವಾಮಿ ಆರೋಪಿಸಿದರು.

ಈ ಸರಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಮ್ ಎಲ್ ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ ಎಂದು ಕುಮಾರಸ್ವಾಮಿ ಅವರು ಹೇಳಿದರು. 2028 ಅಥವಾ ಅದರೊಳಗೆಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ರಾಜ್ಯದ ಮುಂದಿನ ರಾಜಕೀಯ ಭವಿಷ್ಯವನ್ನು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ವಾಲ್ಮಿಕಿ ಹಗರಣ ಸಿದ್ದರಾಮಯ್ಯ ಸರಕಾರದ ಮಾನವನ್ನು ಬೀದಿಯಲ್ಲಿ ಹರಾಜು ಹಾಕಿದೆ. ಹಗರಣ ನಡೆದಿರುವ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಹಾಗಾದರೆ ಹಗರಣದ ಜವಾಬ್ದಾರಿ ಯಾರು ಹೊರಬೇಕು? ಈ ಹಗರಣವನ್ನು ಮಾಡಿರುವವರು ಅಯೋಗ್ಯ ಅಧಿಕಾರಿಗಳು ಎಂದು ಹೇಳಿಕೆ ನೀಡಿದ್ದಾರೆ. ಅಂತಹ ಅಯೋಗ್ಯ ಅಧಿಕಾರಿಗಳನ್ನು ಇಟ್ಟುಕೊಂಡವರನ್ನು ಏನೆಂದು ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಡಿಸಿಎಂ ಡಿಕೆಶಿ ಮೇಲೆ ಚಾಟಿ ಬೀಸಿದರು.

ಅಧಿಕಾರಿ ಕಲ್ಲೇಶರನ್ನು ಅಮಾನತು ಮಾಡಿದ್ದೀರಿ. ಅವರ ಕೈಯಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ಪೋಲಿಸರಿಗೆ ದೂರು ಕೊಡಿಸಿ ಎಫ್‌ ಐಆರ್‌ ಮಾಡಿಸಿದ್ದೀರಿ. ಅದಕ್ಕೆ ಹೈಕೋರ್ಟ್‌ ತಡೆ ನೀಡಿದೆ. ನಿಮಗೆ ಯಾರು ಈ ಐಡಿಯಾ ಕೊಟ್ಟರೋ ಗೊತ್ತಿಲ್ಲ, ಆದರೆ, ಅವರು ಸರಿಯಾದ ಐಡಿಯಾನಾದರೂ ನಿಮಗೆ ಕೊಡಬೇಕಿತ್ತು ಎಂದು ಸಿಎಂಗೆ ಕುಟುಕಿದರು ಕೇಂದ್ರ ಸಚಿವರು.

ಎಂಟು ಬಾರಿ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇನೆ. ತೆರಿಗೆ ಪಾಲು, ರಾಜ್ಯದ ಹಣ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ಈ ಬಗ್ಗೆ ಕೇಂದ್ರ ಸರಕಾರ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದೀರಲ್ಲ ಸಿದ್ದರಾಮಯ್ಯನವರೇ.. ನಾನು ಪ್ರಾಮಾಣಿಕ ಎಂದು ಎಷ್ಟು ದಿನ ಹೇಳಿಕೊಳ್ಳುತ್ತೀರಿ. ಇದು ಮುಗಿದ ಆಟ ಸಿದ್ದರಾಮಯ್ಯನವರೇ.. ಕಾಂಗ್ರೆಸ್ ನವರು ಮೈಸೂರಿಂದ ಬೆಂಗಳೂರಿಗಲ್ಲ, ದೆಹಲಿಗೆ ಪಾದಯಾತ್ರೆ ಬರಲಿ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಮೂಡಾ ಹಗರಣದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಜಂಟಿಯಾಗಿ ಹೋರಾಟ ನಡೆಸಲಿವೆ. ಈ ಬಗ್ಗೆ ರೂಪುರೇಶೆ ಸಿದ್ಧ ಮಾಡಲು ಎನ್ ಡಿಎ ಸಭೆ ಕರೆದಿದ್ದೇವೆ. ಆ ಸಭೆಯಲ್ಲಿ ಮುಂದಿನ ಹೋರಾಟ ಮತ್ತು ಪಾದಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೆವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+