ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳವಾರದ ಪ್ರಮುಖ ವಿದ್ಯಮಾನಗಳ ಮುನ್ನೋಟ

|
Google Oneindia Kannada News

ಬೆಂಗಳೂರು, ಜನವರಿ 07 : ಕರ್ನಾಟಕ ಮತ್ತು ಭಾರತದ ಮಂಗಳವಾರ ಪ್ರಮುಖ ವಿದ್ಯಮಾನಗಳ ಮುನ್ನೋಟ ಇಲ್ಲಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರು ಪ್ರವಾಸದಲ್ಲಿದ್ದು ಇಂದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಗಳಾಗಿರುವ ಬೆನ್ನಿಗಾನಹಳ್ಳಿ ಅಕ್ರಮ ಡಿನೋಟಿಫಿಕೇಶನ್ ಕುರಿತು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರ ನಡೆಸಲಿದೆ.

'ಅದಮ್ಯ ಚೇತನ'ದ ಅಡುಗೆ ಮನೆ ನೋಡಲು ಬಂದ ಉಪರಾಷ್ಟ್ರಪತಿ'ಅದಮ್ಯ ಚೇತನ'ದ ಅಡುಗೆ ಮನೆ ನೋಡಲು ಬಂದ ಉಪರಾಷ್ಟ್ರಪತಿ

* ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಂಜೆ 5. 30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ.

 Venkaiah Naidu

* ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬೆಂಗಳೂರಿನ ಶಿಕ್ಷಕರ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಕರೆದಿದ್ದಾರೆ.

* ಬೆಂಗಳೂರು ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ವಿಶ್ವೇಶ್ವರ ತೀರ್ಥ ಸ್ವಾಮೀಜಿ ಬೃಂದಾವನಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠದ ಆವರಣದಲ್ಲಿ ಬೃಂದಾವನವಿದೆ.

* ದಿ. ಅನಂತ ಕುಮಾರ್ ಪತ್ನಿ ತೇಜಸ್ವಿನಿ ಅವರು ನಡೆಸುತ್ತಿರುವ ಅದಮ್ಯ ಚೇತನ ಗ್ರೀನ್ ಕಿಚನ್‌ಗೆ ವೆಂಕಯ್ಯ ನಾಯ್ಡು ಭೇಟಿ ನೀಡಲಿದ್ದಾರೆ. ಅದಮ್ಯ ಚೇತನ ಕಿಚನ್ ಬೆಂಗಳೂರಿನ ಗವಿಪುರಂನಲ್ಲಿದೆ.

* ದೆಹಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಆರಂಭಿಸಲಿವೆ. ಸರಣಿ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.

English summary
Here are the list of events in Karnataka and India for January 7, 2020. Vice president of India M. Venkaiah Naidu in Bengaluru tour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X