ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಪ್ರತಿನಿತ್ಯ 60 ರಿಂದ 70 ಲಕ್ಷ ಮಂದಿಗೆ ಕೊರೊನಾ ಲಸಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕಾಗಿ ಮೇ 1ರಿಂದ ಪ್ರತಿನಿತ್ಯ 60 ರಿಂದ 70 ಲಕ್ಷ ಫಲಾನುಭವಿಗಳು ಲಸಿಕೆ ಪಡೆದುಕೊಳ್ಳಲಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿರೀಕ್ಷಿಸಿದೆ.

ಮೇ 1ನೇ ತಾರೀಖಿನಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಅಡಿಯಲ್ಲಿ 2004ರ ಡಿಸೆಂಬರ್ 31ಕ್ಕೂ ಮೊದಲು ಜನಿಸಿದ ಎಲ್ಲರೂ ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಗೆ ಹೆಸರು ನೋಂದಣಿ ಮಾಡುವುದು ಹೇಗೆ?18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಗೆ ಹೆಸರು ನೋಂದಣಿ ಮಾಡುವುದು ಹೇಗೆ?

"ಕಳೆದ ಎರಡು ಹಂತಗಳ ಕೊರೊನಾವೈರಸ್ ಅಭಿಯಾನದಿಂದ ದೇಶದಲ್ಲಿ ಕೆಲವೊಮ್ಮೆ 45 ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆದುಕೊಂಡಿರುವುದನ್ನು ನಾವು ನೋಡಿದ್ದೇವೆ. ಮೇ 1 ರಿಂದ ಪ್ರತಿನಿತ್ಯ 60 ರಿಂದ 70 ಲಕ್ಷ ಜನರು ಲಸಿಕೆ ಪಡೆದುಕೊಳ್ಳಲಿದ್ದಾರೆ. ಲಸಿಕೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುವುದರಿಂದ ಅದಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್ ಎಸ್ ಶರ್ಮಾ ತಿಳಿಸಿದ್ದಾರೆ.

 Everyday 60-70 Lakh People Takes Corona Vaccine From May 1st, Says CoWin Panel Head

48 ಗಂಟೆಗೂ ಮೊದಲು ಹೆಸರು ನೋಂದಣಿ:

ಭಾರತದಲ್ಲಿ ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ ನೀಡುವ ಅಭಿಯಾನ ಆರಂಭವಾಗಲಿದೆ. ಇದಕ್ಕೂ 48 ಗಂಟೆಗೂ ಮೊದಲು ಅಂದರೆ ಏಪ್ರಿಲ್ 28ರಿಂದ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದಕ್ಕೆ ಹೆಸರು ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.ಗುರುವಾರ ರಾತ್ರಿ 8 ಗಂಟೆವರೆಗೆ 30,16,085 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 18,33,828 ಮಂದಿಗೆ ಮೊದಲ ಡೋಸ್ ಹಾಗೂ 11,82,257 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 13,23,30,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Everyday 60-70 Lakh People Takes Corona Vaccine From May 1st, Says CoWin Panel Head.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X