ಇವಿಎಂ ತಿರುಚುವ 'ಆರೋಪ'ಕ್ಕೆ EC ಮಸಿ

By: ಅನುಶಾ ರವಿ
Subscribe to Oneindia Kannada

ನವದೆಹಲಿ, ಮಾರ್ಚ್ 16: ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ (ಇವಿಎಂ) ಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಎಸ್ಪಿ ನಾಯಕಿ ಮಾಯಾವತಿ ಮಾಡಿದ್ದ ಆರೋಪಕ್ಕೆ ಕೇಂದ್ರ ಚುನಾವಣಾ ಆಯೋಗ (EC) ಮಸಿ ಬಳಿದಿದೆ.

ಇವಿಎಂಗಳನ್ನು ಟ್ಯಾಂಪರ್ ಮಾಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. "ದಕ್ಷ ತಾಂತ್ರಿಕ ಮತ್ತು ಆಡಳಿತಾತ್ಮಕ ರಕ್ಷಣೆ ಇರುವುದರಿಂದ ಇವಿಎಂಗಳನ್ನು ಟ್ಯಾಂಪರ್ ಮಾಡಲು ಸಾಧ್ಯವಿಲ್ಲ. ಮತದಾನ ಪ್ರಕ್ರಿಯೆಯ ಮೇಲಿನ ಭರವಸೆಯನ್ನು ಕಾಪಾಡಲಾಗುವುದು ," ಎಂದು ಚುನಾವಣಾ ಆಯೋಗ ಹೇಳಿಕೆ ನೀಡಿದೆ.[ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಲ್ಲ : ಹೆಚ್.ಡಿ.ದೇವೇಗೌಡ ಸ್ಪಷ್ಟನೆ]

EVMs can't be tampered with, says ECI

ಇನ್ನು ಆರೋಪಗಳನ್ನು ತನಿಖೆ ನಡೆಸಲಾಗುವುದು ಎಂದೂ ಚುನಾವಣಾ ಆಯೋಗ ಹೇಳಿದೆ. "ಆರೋಪಗಳ ಜತೆಗೆ ಸರಿಯಾದ ಮಾಹಿತಿಗಳನ್ನು ನೀಡಿದಲ್ಲಿ ತನಿಖೆಗೆ ಒಳಪಡಿಸಲಾಗುವುದು," ಎಂದು ಆಯೋಗ ಹೇಳಿದೆ.[ಉಪ್ರ ಸಿಎಂ ರೇಸ್ ನಲ್ಲಿರುವ ಕೇಶವ್ ಪ್ರಸಾದ್ ಮೌರ್ಯಗೆ ಐಸಿಯುನಲ್ಲಿ ಚಿಕಿತ್ಸೆ]

ಈ ಹಿಂದೆ ಅರವಿಂದ್ ಕೇಜ್ರಿವಾಲ್ ಮತ್ತು ಮಾಯಾವತಿ ಕ್ರಮವಾಗಿ ಪಂಜಾಬ್ ಹಾಗೂ ಉತ್ತರ ಪ್ರದೇಶದಲ್ಲಿ ಫಲಿತಾಂಶದ ಮೇಲೆ ಪರಿಣಾಮ ಬೀರಲು ಇವಿಎಂಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಕುರಿತು ತನಿಖೆ ನಡೆಯಬೇಕು ಎಂದೂ ಉಭಯ ನಾಯಕರು ಒತ್ತಾಯಿಸಿದ್ದರು. (ಒನ್ ಇಂಡಿಯಾ ಸುದ್ದಿ)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In the backdrop of allegations of EVM tampering, the Election Commission of India on Thursday reiterated that EVMs cannot be tampered with. "Given the effective technical and administrative safeguards, Electronic Voting Machines are not tamperable and the integrity of the electoral process is preserved," the ECI was quoted by news agencies.
Please Wait while comments are loading...