ಮಾಜಿ ಸಿಬಿಐ ಮುಖ್ಯಸ್ಥ ಅಶ್ವನಿ ಕುಮಾರ್ ದೇಹದ ಬಳಿ ಡೆತ್ ನೋಟ್ ಪತ್ತೆ
ಶಿಮ್ಲಾ, ಅಕ್ಟೋಬರ್ 8: ಸಿಬಿಐನ ನಿವೃತ್ತ ಮುಖ್ಯಸ್ಥ ಹಾಗೂ ನಾಗಾಲ್ಯಾಂಡ್‌ನ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗುಜರಾತ್‌ನಲ್ಲಿ ನಡೆದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಅವರನ್ನು ಸಿಬಿಐ ಬಂಧಿಸಿದ ಸಂದರ್ಭದಲ್ಲಿ ತನಿಖಾ ಸಂಸ್ಥೆಯ ಮುಖ್ಯಸ್ಥರಾಗಿದ್ದ ಅಶ್ವನಿ ಕುಮಾರ್ ಅವರ ಸಾವಿನ ಬಗ್ಗೆ ಅನೇಕ ಸಂದೇಹಗಳು ವ್ಯಕ್ತವಾಗಿವೆ. ಆದರೆ ಅಶ್ವನಿ ಕುಮಾರ್ ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಅನೇಕ ವಿವರಗಳನ್ನು ಹಂಚಿಕೊಂಡಿದ್ದಾರೆ.
ಶಿಮ್ಲಾದ ಬ್ರಖ್ತಸ್ಟ್‌ನಲ್ಲಿನ ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ 70 ವರ್ಷದ ಅಶ್ವನಿ ಕುಮಾರ್ ಪತ್ತೆಯಾಗಿದ್ದರು. ಅವರು ಸಾಯುವ ಮೊದಲು ಬರೆದಿಟ್ಟ ಪತ್ರದಲ್ಲಿ ಬುದಕಿನ ಹೊಸ ಪಯಣದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಮ್ಮ ವೃತ್ತಿಜೀವನ ಹಾಗೂ ನಿವೃತ್ತಿಯ ಬಳಿಕವೂ ಉನ್ನತ ಸ್ಥಾನಗಳನ್ನು ಪಡೆದುಕೊಂಡಿದ್ದ ಅವರು 'ಜೀವನದ ಮೇಲೆ ಜಿಗುಪ್ಸೆ' ಬಂದಿದ್ದಾಗಿ ಹೇಳಿಕೊಂಡಿದ್ದಾರೆ.
ಅಶ್ವನಿ ಕುಮಾರ್ ಅವರು ತಮ್ಮನ್ನು ಕಾಡುತ್ತಿದ್ದ ಅನಾರೋಗ್ಯದ ಬಗ್ಗೆ ತುಂಬಾ ಚಿಂತೆಗೀಡಾಗಿದ್ದರು ಎಂಬ ಸುಳಿವನ್ನು ಈ ಡೆತ್ ನೋಟ್ ನೀಡುತ್ತದೆ ಎಂದು ಪೊಲೀಸರು ಹೇಳಿದ್ದಾರೆ. 'ನನಗೆ ಜೀವನದ ಮೇಲೆ ಜಿಗುಪ್ಸೆ ಬಂದಿದೆ. ನನ್ನ ಮುಂದಿನ ಪಯಣಕ್ಕೆ ತೆರಳಲಿದ್ದೇನೆ' ಎಂದು ಅಶ್ವನಿ ಕುಮಾರ್ ಬರೆದಿದ್ದಾರೆ. ಮುಂದೆ ಓದಿ.
ಜೀವ ತೆಗೆದುಕೊಳ್ಳುವ ಈ ಕೆಲಸಕ್ಕೆ ಮುಂದಾಗುವ ಮುನ್ನ ಬುಧವಾರ ಸಂಜೆ ಅಶ್ವನಿ ಕುಮಾರ್ ವಾಯುವಿಹಾರಕ್ಕೆ ತೆರಳಿದ್ದರು. ಅವರ ಮನೆಯ ಪ್ರಾರ್ಥನಾ ಕೊಠಡಿ ಬಳಿ ಮೃತದೇಹ ಪತ್ತೆಯಾಗಿದೆ. ಅವರ ಪತ್ನಿ, ಮಗ ಮತ್ತು ಮಗಳು ಮನೆಯ ಕೆಳಮಹಡಿಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮುಂದೆ ಓದಿ.

ಖಿನ್ನತೆಯಿಂದ ಬಳಲುತ್ತಿದ್ದರೇ?
ಈ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಆತ್ಮಹತ್ಯೆ ಎಂಬ ಬಗ್ಗೆ ಅಂತಿಮ ಅಭಿಪ್ರಾಯಕ್ಕೆ ಬರಬಹುದು ಎಂದು ಶಿಮ್ಲಾದ ಎಸ್‌ಪಿ ಮೋಹಿತ್ ಚಾವ್ಲಾ ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಅಂತಹ ವರದಿಗಳನ್ನು ಅವರ ಕುಟುಂಬದವರು ಖಚಿತಪಡಿಸಿಲ್ಲ ಎಂದು ಹಿಮಾಚಲ ಡಿಜಿಪಿ ಸಂಜಯ್ ಕುಂದ್ರು ತಿಳಿಸಿದ್ದಾರೆ. ಹೀಗಾಗಿ ಪೊಲೀಸರು ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.

ಮಹಡಿಗೆ ತೆರಳಿದ್ದರು
'ಅಶ್ವನಿ ಕುಮಾರ್ ಎಂದಿನಂತೆ ಸಂಜೆ ವಾಯು ವಿಹಾರಕ್ಕೆ ತೆರಳಿದ್ದರು. ಬಳಿಕ ಮನೆಗೆ ಮರಳಿ, ದೈನಂದಿನ ಪ್ರಾರ್ಥನೆ ಸಲ್ಲಿಸಲು ಮೇಲಿನ ಮಹಡಿಗೆ ತೆರಳಿದ್ದರು. ತುಂಬಾ ಸಮಯ ಕಳೆದರೂ ಅವರು ವಾಪಸ್ ಬಾರದೆ ಇರುವುದನ್ನು ಕಂಡು ಕುಟುಂಬದವರು ಮಹಡಿಗೆ ಹೋಗಿ ನೋಡಿದಾಗ ಅವರು ನೇಣು ಹಾಕಿಕೊಂಡಿರುವುದು ಗೊತ್ತಾಯಿತು' ಎಂದು ಡಿಜಿಪಿ ತಿಳಿಸಿದರು.

ಗಾಂಧಿ ಕುಟುಂಬಕ್ಕೆ ಹತ್ತಿರವಿದ್ದರು
ಅಶ್ವನಿ ಕುಮಾರ್ 1973ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಅವರು ಹಿಮಾಚಲ ಪ್ರದೇಶ ಪೊಲೀಸ್ ಇಲಾಖೆಯ ವಿವಿಧ ಅತ್ಯುನ್ನತ ಶ್ರೇಣಿಯ ಹುದ್ದೆಗಳನ್ನು ನಿಭಾಯಿಸಿದ್ದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಭದ್ರತೆಗಾಗಿ ಹೊಸದಾಗಿ ಸೃಷ್ಟಿಸಲಾಗಿದ್ದ ಎಸ್‌ಪಿಜಿಯಲ್ಲಿ 1985-1990ರ ಅವಧಿಯಲ್ಲಿ ಸಹಾಯಕ ನಿರ್ದೇಶಕ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. 2008ರ ಆಗಸ್ಟ್‌ನಿಂದ 2010ರ ನವೆಂಬರ್ ಅವಧಿಯಲ್ಲಿ ಅವರು ಸಿಬಿಐ ನಿರ್ದೇಶಕರಾಗಿದ್ದರು. ಈ ಸಂದರ್ಭಗಳಲ್ಲಿ ಅವರು ಗಾಂಧಿ ಕುಟುಂಬದೊಂದಿಗೆ ಹತ್ತಿರದ ಸಂಪರ್ಕ ಹೊಂದಿದ್ದರು.

ಬಿಜೆಪಿ ಸರ್ಕಾರದ ವಿರೋಧ
ಮನಮೋಹನ್ ಸಿಂಗ್ ಸರ್ಕಾರವು ಅವರನ್ನು 2013ರ ಮಾರ್ಚ್‌ನಲ್ಲಿ ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಿಸಿತ್ತು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅದೇ ವರ್ಷ ಕೆಲವು ತಿಂಗಳು ಮಣಿಪುರದ ರಾಜ್ಯಪಾಲರಾಗಿ ಸಹ ಕೆಲಸ ಮಾಡಿದ್ದರು. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದರು. ಶಿಮ್ಲಾದ ಖಾಸಗಿ ವಿಶ್ವವಿದ್ಯಾಲಯದ ಉಪ ಕುಲಪತಿ ಮತ್ತು ಹಿಮಾಚಲ ಪ್ರದೇಶದ ಡಿಜಿಪಿಯಾಗಿ ಸಹ ಅವರು ಕರ್ತವ್ಯ ನಿರ್ವಹಿಸಿದ್ದರು.

ಅಮಿತ್ ಶಾ ಬಂಧನ
ಸಿಬಿಐ ನಿರ್ದೇಶಕರಾಗಿದ್ದ ಅವಧಿಯಲ್ಲಿ ದೇಶದಾದ್ಯಂತ ಚರ್ಚೆಯಾಗಿದ್ದ ಆರುಷಿ-ಹೇಮರಾಜ್ ಕೊಲೆ ಪ್ರಕರಣವನ್ನು ನಿಭಾಯಿಸಿದ್ದರು. ಗುಜರಾತ್‌ನಲ್ಲಿ ನಡೆದಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರನ್ನು 2010ರ ಜುಲೈನಲ್ಲಿ ಬಂಧಿಸಿದಾಗ ಕೂಡ ಅವರು ಸಿಬಿಐ ಮುಖ್ಯಸ್ಥರಾಗಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications