ವರ್ಷದ ಬಳಿಕ ಜೈಲಿನಿಂದ ಬಿಡುಗಡೆಯಾದ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್
ಮುಂಬೈ, ಡಿ. 28: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಒಂದು ವರ್ಷದ ನಂತರ ಬುಧವಾರ ಜೈಲಿನಿಂದ ಬಿಡುಗಡೆಯಾದರು.
ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಒಂದು ವರ್ಷದ ಬಳಿಕ ಬುಧವಾರ ಬಿಡುಗಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಬೆಂಬಲಿಗರು ಸ್ವಾಗತ ಕೋರಿದರು.
72 ವರ್ಷದ ಅನಿಲ್ ದೇಶಮುಖ್ ಕೇಂದ್ರೀಯ ತನಿಖಾ ದಳ ದಾಖಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಅಕ್ಟೋಬರ್ 26 ರಂದು ಜಾಮೀನಿಗಾಗಿ ಬಾಂಬೆ ಹೈಕೋರ್ಟ್‌ಗೆ ತೆರಳಿದ ಅನಿಲ್ ದೇಶಮುಖ್ ಅವರ ಜಾಮೀನು ಅರ್ಜಿಯನ್ನು ಸಿಬಿಐ ವಿರೋಧಿಸಿತ್ತು.

ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ನವೆಂಬರ್ 2021 ರಲ್ಲಿ ಬಂಧಿಸಿತ್ತು.
ಕಳೆದ ವರ್ಷ, ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್, ಆಗಿನ ಗೃಹ ಸಚಿವರಾಗಿದ್ದ ಅನಿಲ್ ದೇಶಮುಖ್ ಅವರು ಮುಂಬೈನಲ್ಲಿ ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸಲು ಪೊಲೀಸ್ ಅಧಿಕಾರಿಗಳಿಗೆ ಟಾರ್ಗೆಟ್ ನೀಡಿದ್ದರು ಎಂದು ಆರೋಪಿಸಿದ್ದರು.
ಅನಿಲ್ ದೇಶ್‌ಮುಖ್ ರಾಜ್ಯ ಗೃಹ ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಕೆಲವು ಪೊಲೀಸ್ ಅಧಿಕಾರಿಗಳ ಮೂಲಕ ಮುಂಬೈನ ವಿವಿಧ ಬಾರ್‌ಗಳಿಂದ 4.70 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿಕೊಂಡಿದೆ.












Click it and Unblock the Notifications