• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ನಿಯಂತ್ರಣಕ್ಕೆ ಪಂಚಸೂತ್ರ; ಪ್ರಧಾನಿಗೆ ಮನಮೋಹನ್ ಸಿಂಗ್ ಪತ್ರ!

|

ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದಾರೆ.

ದೇಶಾದ್ಯಂತ ಏರಿಕೆಯಾಗುತ್ತಿರುವ ಕೊವಿಡ್-19 ಸೋಂಕಿನ ನಿಯಂತ್ರಣಕ್ಕೆ ಸಲಹೆಗಳನ್ನು ನೀಡಿದ್ದಾರೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಸಾಂಕ್ರಾಮಿಕ ಪಿಡುಗಿನ ನಿಯಂತ್ರಣದಲ್ಲಿ ಬಹುದೊಡ್ಡ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ.

ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ

ಒಟ್ಟು ಜನಸಂಖ್ಯೆ ಪ್ರಮಾಣದ ಮೇಲೆ ಕಾರ್ಯತಂತ್ರವನ್ನು ರೂಪಿಸುವ ಬದಲಿಗೆ ಕೊರೊನಾವೈರಸ್ ಲಸಿಕೆ ನೀಡಿದ ಶೇಕಡಾವಾರು ಪ್ರಮಾಣವನ್ನು ಲೆಕ್ಕ ಹಾಕಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದಾರೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಪಾರದರ್ಶಕತೆ

ಕೊರೊನಾ ಲಸಿಕೆ ವಿತರಣೆಯಲ್ಲಿ ಪಾರದರ್ಶಕತೆ

ಭಾರತದಲ್ಲಿ ಮುಂದಿನ ಆರು ತಿಂಗಳ ಅವಧಿಯಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಮೇಲೆ ಹೆಚ್ಚಿನ ನಿಗಾ ವಹಿಸಬೇಕಿದೆ. ಪಾರದರ್ಶಕ ವಿಧಾನದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮತ್ತು ಸರಬರಾಜು ಪ್ರಕ್ರಿಯೆಯನ್ನು ನೋಡಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡಲು ಸಲಹೆ

ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡಲು ಸಲಹೆ

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿದ್ದರೂ ಸಹ ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡಬೇಕು ಎಂದು ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದಾರೆ. ದೇಶದಲ್ಲಿ 91,27,451 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು57,07,322 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,12,29,062 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 55,08,179 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಕೊವಿಡ್-19 ಲಸಿಕೆ ಉತ್ಪಾದನೆ, ಕಂಪನಿಗಳಿಗೆ ಅನುದಾನ

ಕೊವಿಡ್-19 ಲಸಿಕೆ ಉತ್ಪಾದನೆ, ಕಂಪನಿಗಳಿಗೆ ಅನುದಾನ

ಕೊರೊನಾವೈರಸ್ ಲಸಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಂಪನಿಗಳಿಗೆ ಅನುದಾನವನ್ನು ನೀಡಬೇಕು. ಇದರ ಜೊತೆಗೆ ಲಸಿಕೆ ಉತ್ಪಾದಿಸುವ ಕಂಪನಿಗಳಿಗೆ ರಿಯಾಯಿತಿ ಹಾಗೂ ಪರವಾನಗಿ ಹಂಚಿಕೆ ಮಾಡುವಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಪತ್ರದ ಮೂಲಕ ಸಲಹೆ ನೀಡಿದ್ದಾರೆ.

ಪ್ರಧಾನಿ ಮೋದಿಗೆ ನೀಡಿರುವ ಐದನೇ ಸಲಹೆ

ಪ್ರಧಾನಿ ಮೋದಿಗೆ ನೀಡಿರುವ ಐದನೇ ಸಲಹೆ

ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ಮೊದಲ ಆದ್ಯತೆ ನೀಡಬೇಕು. ಅನ್ಯರಾಷ್ಟ್ರಗಳಲ್ಲಿ ವೈದ್ಯಕೀಯ ಪ್ರಾಧಿಕಾರಗಳಿಂದ ಅನುಮೋದನೆ ಪಡೆದ ಕೊವಿಡ್-19 ಲಸಿಕೆಗಳನ್ನು ಭಾರತದಲ್ಲೂ ಬಳಸುವುದಕ್ಕೆ ಅನುಮತಿ ನೀಡಬೇಕು. ಅತಿಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಲಸಿಕೆಯನ್ನು ಸಹ ಆಮದು ಮಾಡಿಕೊಳ್ಳಬೇಕು. ಆ ಮೂಲಕ ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಭಾರತ ತತ್ತರಿಸಿ ಹೋಗಿದೆ. ಕಳೆದ 24 ಗಂಟೆಗಳಲ್ಲಿ 2,61,500 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 1501 ಮಂದಿ ಪ್ರಾಣ ಬಿಟ್ಟಿದ್ದು, 1,38,423 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೂ 1,28,09,643 ಸೋಂಕಿತರು ಗುಣಮುಖರಾಗಿದ್ದು, ಸಾವಿನ ಸಂಖ್ಯೆ 1,77,150ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 18,01,316 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

English summary
Ex-Pm Manmohan Singh Writes A Letter To PM Modi On Coronavirus Crisis, Offers Five Suggestions To Face Situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X