ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಕ್ಕಳ ಮೇಲೆ ಕೊವ್ಯಾಕ್ಸಿನ್ ಲಸಿಕೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ

|
Google Oneindia Kannada News

ನವದೆಹಲಿ, ಮೇ 12: ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವರ್ಷದವರಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಎರಡು ಮತ್ತು ಮೂರನೇ ಹಂತದ ವೈದ್ಯಕೀಯ ಪ್ರಯೋಗ ನಡೆಸಲು ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.

ದೆಹಲಿಯ ಏಮ್ಸ್, ಪಾಟ್ನಾದ ಏಮ್ಸ್ ಹಾಗೂ ನಾಗ್ಪುರದ ಮೆಡಿಟ್ರಿನಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 525 ಮಾದರಿ ಪ್ರಯೋಗಗಳನ್ನು ನಡೆಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಭಾರತದ 13 ರಾಜ್ಯದಲ್ಲಿ ಸಕ್ರಿಯ ಪ್ರಕರಣ 1 ಲಕ್ಷಕ್ಕೂ ಅಧಿಕ ಭಾರತದ 13 ರಾಜ್ಯದಲ್ಲಿ ಸಕ್ರಿಯ ಪ್ರಕರಣ 1 ಲಕ್ಷಕ್ಕೂ ಅಧಿಕ

ಮಂಗಳವಾರ ವಿಷಯ ತಜ್ಞರ ಸಮಿತಿಯು ಕೇಂದ್ರ ಔಷಧೀಯ ಪ್ರಮಾಣಿತ ನಿಯಂತ್ರಣ ಸಂಸ್ಥೆಗೆ ಕೊವ್ಯಾಕ್ಸಿನ್ ಲಸಿಕೆಯ ಪ್ರಯೋಗಕ್ಕೆ ಅನುಮೋದನೆ ನೀಡುವಂತೆ ಅರ್ಜಿ ಸಲ್ಲಿಸಿತ್ತು. 2 ವರ್ಷದಿಂದ 18 ವರ್ಷದವರಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯು ಹೇಗೆ ಕೆಲಸ ಮಾಡುತ್ತದೆ, ಎಷ್ಟು ಪರಿಣಾಮಕಾರಿಯಾಗಿದೆ ಎನ್ನುವುದರ ಮೇಲೆ ವೈದ್ಯಕೀಯ ಪ್ರಯೋಗ ನಡೆಸಲು ಅನುಮತಿ ಕೋರಿತ್ತು.

Expert Panel Recommended Bharat Biotechs Covaxin For Phase 2nd And 3rd Medical Trials

2ನೇ ಪ್ರಯೋಗದ ಬಗ್ಗೆ ದತ್ತಾಂಶ ಸಲ್ಲಿಸುವ ಷರತ್ತು:

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ 2-18 ವರ್ಷದವರಿಗೆ ಸುರಕ್ಷಿತವೇ ಎಂಬ ಬಗ್ಗೆ ವಿಸ್ತೃತ ಚರ್ಚೆಯ ಬಳಿಕ ವೈದ್ಯಕೀಯ ಪ್ರಯೋಗಕ್ಕೆ ಷರತ್ತುಬದ್ಧ ಅನುಮೋದನೆ ನೀಡಲಾಗಿದೆ. 2ನೇ ಹಂತದ ವೈದ್ಯಕೀಯ ಪ್ರಯೋಗ ಹಾಗೂ ಅದರ ಫಲಿಶಾಂತಕ್ಕೆ ಸಬಂಧಿಸಿದ ದತ್ತಾಂಶವನ್ನು ಸಲ್ಲಿಸಿದ ನಂತರ ಡಿಎಸ್ಎಂಬಿ ಶಿಫಾರಸ್ಸಿನ ಮೇಲೆ 3ನೇ ಹಂತದ ಪ್ರಯೋಗಕ್ಕೆ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದೆ.

ಕಳೆದ ಫೆಬ್ರವರಿ 24ರಂದು ವಿಷಯ ತಜ್ಞರ ಸಮಿತಿಯು ಈ ಬಗ್ಗೆ ಮೊದಲೇ ಚರ್ಚೆ ನಡೆಸಿದ್ದು, ಪರಿಷ್ಕೃತ ವೈದ್ಯಕೀಯ ಪ್ರಯೋಗದ ಶಿಷ್ಟಾಚಾರಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚಿಸಲಾಗಿತ್ತು. ಸದ್ಯ ದೇಶದಲ್ಲಿ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡಲು ಐಸಿಎಂಆರ್ ಅನುಮೋದನೆ ನೀಡಿದೆ.

English summary
Expert Panel Recommended Bharat Biotech's Covaxin For Phase 2nd And 3rd Medical Trials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X