ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶೇಷ ವರದಿ: ಭಾರತದಲ್ಲಿ ಮಕ್ಕಳಿಗೆ ಯಾವಾಗ ಸಿಗುತ್ತೆ ಕೊರೊನಾವೈರಸ್ ಲಸಿಕೆ?

|
Google Oneindia Kannada News

ನವದೆಹಲಿ, ಜುಲೈ 27: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಇನ್ನೂ ಮರೆಯಾಗಿಲ್ಲ. ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕೊವಿಡ್-19 ಸೋಂಕು ಅಂಟಿಕೊಳ್ಳುವ ಅಪಾಯವಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಶಾಲೆಗಳನ್ನು ಶುರು ಮಾಡಿದ್ದು, ಮಕ್ಕಳಿಗೆ ಲಸಿಕೆ ಯಾವಾಗ ನೀಡುತ್ತಾರೋ ಏನೋ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ಮುಂದಿನ ತಿಂಗಳಿನಿಂದ ನೀಡುವುದಕ್ಕೆ ಆರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಸಂಸತ್ತಿನಲ್ಲಿ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಮಕ್ಕಳಿಗೆ ಲಸಿಕೆ ನೀಡುವುದರ ಕುರಿತು ವಿಷಯ ಚರ್ಚೆಗೆ ಬಂದಿದೆ. ಈ ವೇಳೆ ಆಗಸ್ಟ್ ತಿಂಗಳಿನಿಂದ ಮಕ್ಕಳಿಗೂ ಲಸಿಕೆ ನೀಡುವ ಕಾರ್ಯ ಆರಂಭಿಸಲಾಗುವುದು ಎಂದು ಬಿಜೆಪಿ ಸಂಸದರಿಗೆ ಆರೋಗ್ಯ ಸಚಿವರು ತಿಳಿಸಿದ್ದಾರೆ ಎನ್ನಲಾಗಿದೆ.

 ಈ ಎರಡು ಲಸಿಕೆ ಪ್ರತಿಕಾಯ ಮಟ್ಟ 2-3 ತಿಂಗಳ ಬಳಿಕ ಇಳಿಕೆ ಸಾಧ್ಯತೆ ಈ ಎರಡು ಲಸಿಕೆ ಪ್ರತಿಕಾಯ ಮಟ್ಟ 2-3 ತಿಂಗಳ ಬಳಿಕ ಇಳಿಕೆ ಸಾಧ್ಯತೆ

ಕೊವಿಡ್-19 ಸೋಂಕಿನ ಮೂರನೇ ಅಲೆಯ ಎಚ್ಚರಿಕೆ ನಡುವೆಯೂ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಪುನಾರಂಭಿಸಲಾಗಿದೆ. ಈ ಹಂತದಲ್ಲಿ ಸೋಂಕು ಹರಡುವಿಕೆಯ ಕೊಂಡಿಯನ್ನು ಕತ್ತರಿಸಲು ಲಸಿಕೆ ನೀಡುವುದು ಅತ್ಯಗತ್ಯವಾಗಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮಕ್ಕಳಿಗೆ ಲಸಿಕೆ ನೀಡುವಂತಾ ಅನಿವಾರ್ಯ ಸ್ಥಿತಿಗೆ ಬಂದು ತಲುಪಿದ್ದೀವಾ?, ಹಾಗಿದ್ದಲ್ಲಿ ಲಸಿಕೆ ವಿತರಣೆ ಆರಂಭಿಸುವ ಬಗ್ಗೆ ತಜ್ಞರ ಅಭಿಪ್ರಾಯವೇನು?, ದೇಶದಲ್ಲಿ ಈಗಲೇ ಲಸಿಕೆ ವಿತರಣೆಗೆ ಕೊರತೆ ಸೃಷ್ಟಿಯಾಗಿದೆಯಾ?, ಈವರೆಗೂ ಎಷ್ಟು ಪ್ರಮಾಣದ ಲಸಿಕೆಯು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಆಗಿದೆ?, ದೇಶದಲ್ಲಿ ಎಷ್ಟು ಜನರಿಗೆ ಲಸಿಕೆ ವಿತರಿಸಲಾಗಿದೆ?, ಕೊರೊನಾವೈರಸ್ ಪ್ರಕರಣಗಳ ಇಳಿಕೆ ಹಾಗೂ ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂಬುದರ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ ಓದಿ.

ಮುಂದಿನ ತಿಂಗಳಿನಿಂದ ಮಕ್ಕಳಿಗೂ ಕೊರೊನಾ ಲಸಿಕೆ

ಮುಂದಿನ ತಿಂಗಳಿನಿಂದ ಮಕ್ಕಳಿಗೂ ಕೊರೊನಾ ಲಸಿಕೆ

ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಜುಲೈ ತಿಂಗಳ ಆಂರಭದಲ್ಲಿ ರಾಷ್ಟ್ರೀಯ ಲಸಿಕೆ ತಜ್ಞರೊಂದಿರೆಗ ಡಾ. ಎನ್ ಕೆ ಅರೋರಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿತ್ತು. ಅಂದಿನ ಸಭೆಯಲ್ಲಿ ಸಪ್ಟೆಂಬರ್ ತಿಂಗಳಿನಿಂದ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊವಿಡ್-19 ಲಸಿಕೆ ವಿತರಿಸುವ ಬಗ್ಗೆ ಚರ್ಚಿಸಲಾಗಿತ್ತು. 12 ರಿಂದ 18 ವರ್ಷದ ಮಕ್ಕಳಿಗೆ ಜೈಡಸ್ ಲಸಿಕೆಯನ್ನು ನೀಡಲು ನಿರ್ಧರಿಸಲಾಗಿತ್ತು.

ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಹಾಗೂ ಜೈಡಸ್ ಲಸಿಕೆಯು ಮಕ್ಕಳ ಮೇಲೆ ನಡೆಸಿರುವ ವೈದ್ಯಕೀಯ ಪರೀಕ್ಷೆಯ ವರದಿಯು ಸಪ್ಟೆಂಬರ್ ತಿಂಗಳ ಹೊತ್ತಿಗೆ ಬರಲಿದೆ ಎಂದು ಏಮ್ಸ್ ಮುಖ್ಯಸ್ಥ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ. ಅಲ್ಲದೇ ಸಪ್ಟೆಂಬರ್ ತಿಂಗಳಿನಿಂದಲೇ ಮಕ್ಕಳಿಗೆ ಲಸಿಕೆ ನೀಡುವುದನ್ನು ಆರಂಭಿಸಲಾಗುವುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಕ್ಕಳಿಗಾಗಿ ಮೂರು ಕೊರೊನಾವೈರಸ್ ಲಸಿಕೆ

ಮಕ್ಕಳಿಗಾಗಿ ಮೂರು ಕೊರೊನಾವೈರಸ್ ಲಸಿಕೆ

"ನನ್ನ ಪ್ರಕಾರ ಜೈಡಸ್ ಕಂಪನಿಯು ಈಗಾಗಲೇ ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಅಧಿಕೃತ ಅನುಮೋದನೆಗಾಗಿ ಎದುರು ನೋಡುತ್ತಿದೆ. ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನಡೆಸುತ್ತಿರುವ ವೈದ್ಯಕೀಯ ಪ್ರಯೋಗಗಳ ಅಂತಿಮ ವರದಿಯ ಆಗಸ್ಟ್ ಅಥವಾ ಸಪ್ಟೆಂಬರ್ ವೇಳೆಗೆ ಹೊರ ಬರಲಿದೆ. ಆ ವೇಳೆಗೆ ನಾವು ಅನುಮೋದನೆಯನ್ನು ಪಡೆದುಕೊಳ್ಳುತ್ತೇವೆ. ಇನ್ನು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಫೈಜರ್ ಕಂಪನಿಯು ಈಗಾಗಲೇ ಎಫ್ ಡಿಎ ಮೂಲಕ ಅನುಮೋದನೆ ಪಡೆದುಕೊಂಡಿದೆ. ಬಹುಶಃ ನಾವು ಸಪ್ಟೆಂಬರ್ ತಿಂಗಳಿನಿಂದ ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡುವ ಕಾರ್ಯವನ್ನು ಶುರು ಮಾಡುತ್ತೇವೆ. ಆ ಮೂಲಕ ಸೋಂಕು ಹರಡುವಿಕೆಯ ಕೊಂಡಿಯನ್ನು ಕತ್ತರಿಸಲು ಸಾಧ್ಯವಾಗುತ್ತದೆ," ಎಂದು ಏಮ್ಸ್ ಮುಖ್ಯಸ್ಥ ರಂದೀಪ್ ಗುಲೇರಿಯಾ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಲಸಿಕೆ ಹೆಚ್ಚು ಕಾಲ ರಕ್ಷಣೆ ನೀಡುತ್ತದೆಯೇ? ಅಧ್ಯಯನ ಹೇಳುವುದಿದು...ಕೊರೊನಾ ಲಸಿಕೆ ಹೆಚ್ಚು ಕಾಲ ರಕ್ಷಣೆ ನೀಡುತ್ತದೆಯೇ? ಅಧ್ಯಯನ ಹೇಳುವುದಿದು...

ಕೊರೊನಾವೈರಸ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ

ಕೊರೊನಾವೈರಸ್ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ

ಭಾರತದಲ್ಲಿ ಕೊರೊನಾವೈರಸ್ ರೂಪಾಂತರಗಳ ಅಲೆಯ ಭೀತಿ ಹೆಚ್ಚಾಗಿದೆ. ಹೊಸ ರೂಪಾಂತರ ರೋಗಾಣುವಿನಿಂದ ಮಕ್ಕಳಿಗೆ ಹೆಚ್ಚು ಅಪಾಯವಿದೆ ಎಂದು ಸಾಂಕ್ರಾಮಿಕ ಶಾಸ್ತ್ರರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಕೊವಿಡ್-19 ಸೋಂಕಿನ ಮೂರನೇ ಅಲೆಯಲ್ಲಿ ಮಹಾಮಾರಿಯಿಂದ ಮಕ್ಕಳನ್ನು ರಕ್ಷಿಸುವುದಕ್ಕೆ ಲಸಿಕೆ ವಿತರಣೆಯು ಬಹುಮುಖ್ಯವಾಗುತ್ತದೆ. ದೇಶದಲ್ಲಿ ಈಗಾಗಲೇ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಗೆ ಲಸಿಕೆ ವಿತರಣೆಯೇ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ದೇಶದ ಪ್ರತಿಯೊಬ್ಬ ವಯಸ್ಕರಿಗೂ ಲಸಿಕೆ ವಿತರಿಸುವ ಗುರಿಯನ್ನು ಹೊಂದಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

ಕೇಂದ್ರ ಸರ್ಕಾರದಿಂದ ಈವರೆಗೂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಷ್ಟು ಡೋಸ್ ಲಸಿಕೆ ಪೂರೈಕೆ ಆಗಿದೆ. ಎಷ್ಟು ಡೋಸ್ ಕೊವಿಡ್-19 ಲಸಿಕೆ ಬಾಕಿ ಉಳಿದಿದೆ. ಎಷ್ಟು ಡೋಸ್ ಲಸಿಕೆ ವ್ಯರ್ಥವಾಗಿದೆ. ದೇಶದಲ್ಲಿ ಅನುಮೋದನೆ ಪಡೆದಿರುವ ಲಸಿಕೆಗಳು ಯಾವುವು ಎಂಬುದರ ಕುರಿತು ಮುಂದೆ ಓದಿ. 2021ರ ಜುಲೈ 27ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 45,37,70,580 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 45,73,30,110

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 24,11,000

* ಬಳಕೆ ಆಗಿರುವ ಲಸಿಕೆ ಪ್ರಮಾಣ - 43,80,46,844

* ಕೊವಿಡ್-19 ಲಸಿಕೆಯ ಲಭ್ಯತೆ - 2,28,27,959

4 ಹಂತಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ ಅಭಿಯಾನ

4 ಹಂತಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

192 ದಿನಗಳಿಂದ ನಡೆಯುತ್ತಿರುವ ಅಭಿಯಾನ

192 ದಿನಗಳಿಂದ ನಡೆಯುತ್ತಿರುವ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 192 ದಿನಗಳು ಕಳೆದಿವೆ. ಈ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ದೇಶಾದ್ಯಂತ 44 ಕೋಟಿಗೂ ಅಧಿಕ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಕಳೆದ ಶನಿವಾರ ರಾತ್ರಿ 7 ಗಂಟೆ ವೇಳೆಗೆ 57,48,692 ಜನರಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಒಟ್ಟು 44,19,12,395 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ 1 ಕೋಟಿ ಜನರಿಗೆ ಲಸಿಕೆ

ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ 1 ಕೋಟಿ ಜನರಿಗೆ ಲಸಿಕೆ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಸೋಂಕು ತಪಾಸಣೆ ವೇಗ?

ದೇಶದಲ್ಲಿ ಕೊವಿಡ್-19 ಸೋಂಕು ತಪಾಸಣೆ ವೇಗ?

ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,20,110 ದೇಶದಲ್ಲಿ ಈವರೆಗೂ 45,91,64,121 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಇಳಿಕೆ

ದೇಶದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಇಳಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಕಳೆದ ಒಂದು ದಿನದಲ್ಲಿ 29,689 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಮಹಾಮಾರಿಗೆ 415 ಮಂದಿ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 42,363 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 3,06,21,469ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ ಕೊವಿಡ್-19 ಸೋಂಕಿನಿಂದ 4,21,382 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Experts Views and opinion on India's Covid-19 Vaccination, vaccination for children, Schools & Colleges Reopening amid Covid-19 3rd Wave. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X