ತಮಿಳುನಾಡಲ್ಲಿ ಪಟಾಕಿ ಗೋದಾಮು ಸ್ಟೋಟ: ಬೆಂಕಿಯಲ್ಲಿ ಬೆಂದ 10 ಜೀವಗಳು
ನವದೆಹಲಿ, ಅಕ್ಟೋಬರ್ 09: ಇತ್ತೀಚಿನ ದಿನಗಳಲ್ಲಿ ಪಟಾಕಿ ಗೋದಾಮಿಗೆ ಇಲ್ಲವೇ ಮಳಿಗೆಗಳಲ್ಲಿ ಅಗ್ನಿ ದುರಂತದ ಘಟನೆಗಳು ಸಾಮಾನ್ಯ ಎನ್ನುವಷ್ಟರ ಮಟ್ಟಿಗೆ ಮರುಕಳಿಸುತ್ತಿವೆ. ಎರಡು ದಿನದ ಹಿಂದಷ್ಟೇ ಬೆಂಗಳೂರಿನಲ್ಲಿ ನಡೆದ ಅವಘಡ ಬೆನ್ನಲ್ಲೆ ಇದೀಗ ತಮಿಳುನಾಡಿನಲ್ಲೂ ಸೋಮವಾರ ಪಟಾಕಿ ಗೋದಾಮು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಹೌದು, ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ವೀರಗಳೂರಿನಲ್ಲಿ ಪಟಾಕಿ ಗೋಡೌನ್ ನಲ್ಲಿ ಸೋಮವಾದ ಮಧ್ಯಾಹ್ನ ಅಗ್ನಿ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇದು ಪಟಾಕಿ ತಯಾರಿಕಾ ಘಟಕ ಎಂದು ತಿಳಿದು ಬಂದಿದೆ. ಇದರಲ್ಲಿ ಇಂದು ಬೆಳಗ್ಗೆ 9.30ರ ಆಸು ಪಾಸಿಗೆ ಕಾರ್ಮಿರಕು ಕೆಲಸ ಮಾಡುತ್ತಿದ್ದರು. ಈ ವೇಳೆ ಸ್ಪೋಟ ಸಂಭವಿಸಿದೆ. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಇಬ್ಬರ ಮೃತ ದೇಹ ಪತ್ತೆ: ತನಿಖೆ ಆರಂಭ
ಸದ್ಯ ಘಟನೆಯಲ್ಲಿ ಇಬ್ಬರ ಮೃತ ದೇಹ ಪತ್ತೆಯಾಗಿದ್ದು, ಹತ್ತು ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ತಿರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಪಟಾಕಿಗಳನ್ನು ಸಂಗ್ರಹಿಸಿ ಇಟ್ಟಿದ್ದ ಗೋದಾಮು ಇದಾಗಿತ್ತು. ಕೆಲವು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ದಿಢೀರನೇ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಕಾರಣವೇನು? ಗಾಯಾಳುಗಳ ಸಂಖ್ಯೆ ಸೇರಿದಂತೆ ಇನ್ನಿತರ ಮಾಹಿತಿಗಳು ತಿಳಿಯಬೇಕಿದೆ.
ಕಳೆದ ಶನಿವಾರ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಮಳಿಗೆಯನ್ನು ಹೊಂದಿದ್ದ ಗೋದಾಮಿನಲ್ಲಿ ಪಟಾಕಿ ಇಳಿಸುವಾಗ ಬೆಂಕಿ ಹೊತ್ತಿ ದೊಡ್ಡ ದುರಂತವೇ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಪ್ರಕರಣ ಸಂಬಂಧ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ತಿಂಗಳು ಹಾವೇರಿ ಜಿಲ್ಲೆಯಲ್ಲಿ ಪಟಾಕಿ ಮಳಿಗೆಯಲ್ಲಿ ದುರಂತ ನಡೆದಿದೆ. ಬೆಂಗಳೂರು ಘಟನೆಯ ಬೆನ್ನಲ್ಲೆ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ಅವಘಡ ನಡೆದಿದೆ.












Click it and Unblock the Notifications