ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರ್ಖಾನೆಯಲ್ಲಿ ಸ್ಫೋಟ, 6 ಕಾರ್ಮಿಕರು ಸಾವು, 12 ಮಂದಿಗೆ ಗಾಯ

|
Google Oneindia Kannada News

ಶಿಮ್ಲಾ ಫೆಬ್ರವರಿ 22: ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟಕ್ಕೆ 6 ಮಂದಿ ಸಾವನ್ನಪ್ಪಿದ್ದು ಸುಮಾರು 12 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಉನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.

ಮಾಹಿತಿಯ ಪ್ರಕಾರ, ಉನಾದ ಬತು ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಇದರಲ್ಲಿ 6 ಜನರು ಸಜೀವ ದಹನವಾಗಿದ್ದಾರೆ. 12 ಜನರು ಸ್ಪೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ವರದಿಯಾಗಿದೆ. ಅಪಘಾತದ ಸುದ್ದಿ ತಿಳಿದ ನಂತರ ಅಗ್ನಿಶಾಮಕ ದಳ ಮತ್ತು ಇತರ ಕೆಲವು ಆಡಳಿತಾಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ರಕ್ಷಣಾ ಕಾರ್ಯಚರಣೆಯನ್ನು ನಡೆಸಿದ್ದಾರೆ. ಸ್ಫೋಟ ಸಂಭವಿಸಿದ ಕಾರ್ಖಾನೆಯನ್ನು ಪಟಾಕಿ ಕಾರ್ಖಾನೆ ಎಂದು ಹೇಳಲಾಗಿದೆ.

ಈ ನೋವಿನ ಘಟನೆಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ''ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರವರಿಗೆ ನನ್ನ ತೀವ್ರ ಸಂತಾಪಗಳು. ಇದರೊಂದಿಗೆ ನಾನು ಗಾಯಗೊಂಡ ಎಲ್ಲರಿಗೂ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುತ್ತೇನೆ" ಎಂದು ಬರೆದಿದ್ದಾರೆ.

ಇನ್ನು ಹಿಮಾಚಲ ಪ್ರದೇಶದ ಕಾರ್ಖಾನೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50,000 ರೂ.ಗಳನ್ನು ನೀಡುವುದಾಗಿ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.

ಹಿಮಾಚಲದ ನೆರೆಯ ಉತ್ತರಾಖಂಡ ರಾಜ್ಯದಲ್ಲೂ ಇಂದು ದೊಡ್ಡ ಅಪಘಾತವೊಂದು ಮುನ್ನೆಲೆಗೆ ಬಂದಿದೆ. ಚಂಪಾವತ್‌ನಲ್ಲಿ ಕಾರೊಂದು ಕಂದರಕ್ಕೆ ಬಿದ್ದಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ, ವಾಹನದಲ್ಲಿ ಒಟ್ಟು 16 ಜನರಿದ್ದರು, ಅವರು ಮದುವೆಯಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು. ಸುಖಿದಂಗ್ ರೀತಾ ಸಾಹಿಬ್ ರಸ್ತೆ ಬಳಿಯ ಹಳ್ಳದಲ್ಲಿ ಕಾರು ಬಿದ್ದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 2 ಮಂದಿ ಗಾಯಗೊಂಡಿದ್ದಾರೆ.

Explosion in Factory in Himachal Pradesh’s Una, 6 Workers Killed, 12 Scorched
ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

English summary
6 people have died in a major blast in Una district of Himachal Pradesh. At the same time, about 12 people got burnt in this blast, who have been admitted to a hospital in Una for treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X