ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ಸ್ಫೋಟ: ಒಬ್ಬ ಸಾವು, 5 ಗಾಯಾಳು
ಕೊಲ್ಕತ್ತ, ಆಗಸ್ಟ್ 23: ಪಶ್ಚಿಮ ಬಂಗಾಳ ರಾಜ್ಯದ ಮಕ್ರಂಪುರ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಂಭವಿಸಿದ ಸ್ಫೋಟದಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸತ್ತ ವ್ಯಕ್ತಿಯ ಗುರುತು ಸಹ ಪತ್ತೆಯಾಗಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಐವರು ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕಚೇರಿಯ ಎಲ್ಲ ಗೋಡೆಗಳು ಧರೆಗುರುಳಿವೆ.

ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.












Click it and Unblock the Notifications