ಇನ್ನು ಮುಂದೆ ವಿಮಾನಗಳಲ್ಲಿ ಫೇಸ್ ಮಾಸ್ಕ್ ಕಡ್ಡಾಯವಲ್ಲ: ವಿಮಾನಯಾನ ಸಚಿವಾಲಯ
ಇನ್ನು ಮುಂದೆ ವಿಮಾನ ಪ್ರಯಾಣದ ಸಮಯದಲ್ಲಿ ಫೇಸ್ ಮಾಸ್ಕ್ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಹೇಳಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಬೆನ್ನಲ್ಲೆ ಈ ಆದೇಶ ಹೊರಡಿಸಲಾಗಿದೆ. ಈವರೆಗೆ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಫೇಸ್ ಮಾಸ್ಕ್ ಕಡ್ಡಾಯವಾಗಿತ್ತು. ಆದರೀಗ ಈ ಆದೇಶವನ್ನು ಹಿಂಪಡೆಯಲಾಗಿದೆ. ಕೊರೊನಾವೈರಸ್ ಗಮನದಲ್ಲಿಟ್ಟುಕೊಂಡು ಪ್ರಯಾಣಿಕರು ಅವುಗಳನ್ನು ಬಳಸಬಹುದು ಎಂದು ಸಚಿವಾಲಯ ತಿಳಿಸಿದೆ.
"ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಅಥವಾ ಫೇಸ್ ಕವರ್‌ಗಳನ್ನು ಕಡ್ಡಾಯವಾಗಿ ಬಳಸುವ ಅವಶ್ಯಕತೆಯ ಕುರಿತು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಪರಿಶೀಲಿಸಲಾಗಿದೆ" ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಎಲ್ಲಾ ನಿಗದಿತ ವಿಮಾನಯಾನ ಸಂಸ್ಥೆಗಳಿಗೆ ಸಚಿವಾಲಯ ಈ ಬಗ್ಗೆ ಸೂಚನೆ ನೀಡಿದೆ. ತನ್ನ ಆದೇಶದಲ್ಲಿ ಇನ್ನು ಮುಂದೆ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತಿಲ್ಲ. ಜೊತೆಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಹೇಳಿದೆ.











Click it and Unblock the Notifications