'ಫೇಸ್‌ಬುಕ್‌' ಸ್ನೇಹಿತನಿಂದ ಯುವತಿ ಮೇಲೆ ಅತ್ಯಾಚಾರ

ಜೈಪುರ, ಮೇ 1: ಫೇಸ್‌ಬುಕ್‌ನಲ್ಲಿ ಗೆಳೆತನ ಬೆಳೆಸಿಕೊಂಡಿದ್ದ ವ್ಯಕ್ತಿಯೊಬ್ಬ 16 ವರ್ಷದ ಯುವತಿಯೊಬ್ಬಳನ್ನು ಅಪಹರಿಸಿ ನಾಲ್ಕು ದಿನ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಜೈಪುರದ ಕೋಟಾದಲ್ಲಿ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸೋಮವಾರ ತ್ವರಿತ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗಳನ್ನು ಮೇ 15ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತರನ್ನು ನಗರದ ರಂಗ್ಬಾಡಿ ಪ್ರದೇಶದ ಪಂಕಜ್ ಧೋಬಿ ಮತ್ತು ದಿನೇಶ್ ಲೋಧಾ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಪಂಕಜ್, ಬಿಎ ವಿದ್ಯಾರ್ಥಿಯಾಗಿದ್ದಾನೆ. ಆತ 11ನೇ ತರಗತಿ ಓದುತ್ತಿರುವ ಯುವತಿಯೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದ. ಆಕೆಯೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Facebook friend kidnapped and raped a school girl

ಏಪ್ರಿಲ್ 24ರಂದು ಯುವತಿ ಶಾಲೆಗೆ ತೆರಳುತ್ತಿದ್ದಾಗ ಆಕೆಯನ್ನು ಭೇಟಿ ಮಾಡಿದ ಪಂಕಜ್, ತನ್ನ ಜೊತೆ ಸ್ಕೂಟರ್‌ನಲ್ಲಿ ಕರೆದುಕೊಂಡು ಸುತ್ತಾಡಿಸಲು ಕರೆದೊಯ್ದಿದ್ದ. ನಗರದಲ್ಲಿ ಕೆಲ ಹೊತ್ತು ಸುತ್ತಾಡಿದ ಬಳಿಕ ಆಕೆಯನ್ನು ತನ್ನ ಸ್ನೇಹಿತ ದಿನೇಶ್ ಸಿದ್ಧಪಡಿಸಿದ್ದ ಕೋಣೆಗೆ ಕರೆದುಕೊಂಡು ಹೋಗಿದ್ದ. ಬಳಿಕ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ನಾಲ್ಕು ದಿನ ಅತ್ಯಾಚಾರ ಎಸಗಿದ್ದ.

ಶನಿವಾರ ರಾತ್ರಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಯುವತಿ, ಮನೆಗೆ ತಲುಪಿ ಪೋಷಕರಿಗೆ ವಿಷಯ ತಿಳಿಸಿದ್ದಳು. ಪೋಷಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ಆಕೆ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಯಿತು. ಆಕೆ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸುವವರೆಗೂ ಆಶ್ರಯ ಸಂಸ್ಥೆಯ ವಶದಲ್ಲಿ ಇರುವಂತೆ ಸಮಿತಿ ಸೂಚಿಸಿದೆ.

ಘಟನೆಯಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+