Fact Check: ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ 4,000 ವಿದ್ಯಾರ್ಥಿ ವೇತನ!
ನವದೆಹಲಿ, ಮೇ.02: ಕೊರೊನಾ ವೈರಸ್ ಸೋಂಕು ಹರಡುವಿಕೆ ಹಾಗೂ ಭಾರತ ಲಾಕ್ ಡೌನ್ ನಡುವೆ ಸಾಕಷ್ಟು ಸುಳ್ಳುಸುದ್ದಿ ಮತ್ತು ವದಂತಿಗಳು ಹರಿದಾಡುತ್ತಿವೆ. ರಾಜ್ಯ ಸರ್ಕಾರದ ವತಿಯಿಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ 4,000 ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ.
ಸಾಮಾಜಿಕ ಜಾಲತಾಣದ ಸಹಾಯದಿಂದ ವಿದ್ಯಾರ್ಥಿಗಳು ಪಾಠವನ್ನು ಕೇಳುವುದಕ್ಕಾಗಿ ಸರ್ಕಾರವೇ ಆಂಗ್ಲ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 4,000 ರೂಪಾಯಿ ಸ್ಕಾಲರ್ ಶಿಪ್ ನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಕೆಳಗಿನ ಲಿಂಕ್ ನ್ನು ಕ್ಲಿಕ್ ಮಾಡಿ ಎಂದ ಸಂದೇಶವು ಮೊಬೈಲ್ ಗಳಲ್ಲಿ ಹರಿದಾಡುತ್ತಿದೆ.
ಭಾರತದಲ್ಲಿ ಆತಂಕ ಹೆಚ್ಚಿಸುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ
5ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳವರೆಗೂ ಎಲ್ಲ ವರ್ಗ ಮತ್ತು ಧರ್ಮದ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಮೇ.25 ಕೊನೆಯ ದಿನಾಂದ ಎಂಬ ಸುದ್ದಿಯನ್ನು ಹರಿ ಬಿಡಲಾಗುತ್ತಿದೆ.
ಸ್ಕಾಲರ್ ಶಿಪ್ ನೀಡುವ ಸುದ್ದಿಯೇ ಸುಳ್ಳು:
ಸರ್ಕಾರದಿಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾತ್ರ 4,000 ರೂಪಾಯಿ ಸ್ಕಾಲರ್ ಶಿಪ್ ನೀಡುವಂತಾ ಯಾವುದೇ ಯೋಜನೆಯನ್ನು ಸರ್ಕಾರವು ಜಾರಿಗೊಳಿಸಿಲ್ಲ. ಇದೊಂದು ಸುಳ್ಳುಸುದ್ದಿಯಾಗಿದ್ದು, ಯಾವುದೇ ಕಾರಣಕ್ಕೂ ಆ ಲಿಂಕ್ ನ್ನು ಕ್ಲಿಕ್ ಮಾಡಬೇಡಿ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
ಶುಕ್ರವಾರ ಮಹತ್ವದ ಸಭೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಚರ್ಚೆ ನಡೆಸಿದ್ದರು. ಶಿಕ್ಷಣ ವಲಯದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಆನ್ ಲೈನ್ ಕ್ಲಾಸ್ ತೆಗೆದುಕೊಳ್ಳುವುದು, ತರಗತಿವಾರು ಬೋಧಿಸುವುದು, ಶಿಕ್ಷಣಕ್ಕೆ ಸಂಬಂಧಿಸಿದ ಪೋರ್ಟಲ್ ಗಳನ್ನು ಮಾಡುವುದು, ಶೈಕ್ಷಣಿಕ ಚಾಲೆನ್ ಗಳನ್ನು ಬಳಸುವಂತೆ ಸಲಹೆ ನೀಡಿದ್ದರು.