ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fake:ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಹಣ ನುಂಗಿದ ಕೊರೊನಾ

|
Google Oneindia Kannada News

ನವದೆಹಲಿ, ಏಪ್ರಿಲ್ 10: ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಧನ ಸಹಾಯವನ್ನು ದೇಶದ ಎಲ್ಲೆಡೆಯಿಂದ ಪಡೆಯಲಾಗುತ್ತಿದೆ. ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಆದರೆ, ಸರ್ಕಾರದ ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕೂಡಾ ಇದೇ ಪ್ರಮಾಣದಲ್ಲಿ ಪಡೆಯಲಾಗುತ್ತದೆ ಎಂಬ ಆದೇಶವೊಂದು ಬಂದಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು.

ಕೇಂದ್ರ ಸರ್ಕಾರಿ ನೌಕರರ ಪಿಂಚಣಿಯನ್ನು ಶೇ 30 ರಷ್ಟು ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಲಾಕ್ ಡೌನ್ ಶುರುವಾದಾಗಿನಿಂದಲೂ ಈ ರೀತಿ ಸುಳ್ಳು ಸುದ್ದಿಯೊಂದನ್ನು ಹಬ್ಬಿಸಲಾಗಿದೆ. 21 ದಿನಗಳ ಲಾಕ್ ಡೌನ್ ಏಪ್ರಿಲ್ 14ರಂದು ಮುಕ್ತಾಯವಾಗಲಿದೆ.

ಕೇಂದ್ರ ಸರ್ಕಾರಿ ನೌಕರರ ಸಂಬಳದಲ್ಲಿ ಕೂಡಾ ಕಡಿತ ಮಾಡಲಾಗುತ್ತದೆ ಎಂಬ ಸುದ್ದಿಯೂ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ರೀತಿ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ, ಸರ್ಕಾರಿ ನೌಕರರ ಸಂಬಳ ಹಾಗೂ ಪಿಂಚಣಿ ಮೊತ್ತ ಎಂದಿನಂತೆ ಸಿಗಲಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

Fake: Government is not reducing pension of Central Government employees

ಕೊರೊನಾವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಲ್ಲಾ ಸಿಬ್ಬಂದಿಗೂ ಸೂಚಿಸಲಾಗಿದೆ. ಗ್ರೂಪ್ ಬಿ ಹಾಗೂ ಸಿ ನೌಕರರ ಪೈಕಿ ಶೇ 50ರಷ್ಟು ಮಂದಿ ಕಚೇರಿಯಿಂದ ಕಾರ್ಯ ನಿರ್ವಹಿಸುತ್ತಿದ್ದರೆ, ಮಿಕ್ಕವರು ವರ್ಕ್ ಫ್ರಂ ಹೋಂ ವಿಧಾನ ಅನುಸರಿಸಿದ್ದಾರೆ. ಸರ್ಕಾರಿ ಕಚೇರಿಯ ಕೆಲಸದ ಅವಧಿ 9 ರಿಂದ 5.30 ಹಾಗೂ 9.30 ರಿಂದ 6 ಮತ್ತು 10 ರಿಂದ 6.30 ಎಂದು ಮೂರು ಮಾದರಿಯಲ್ಲಿ ಅನುಸರಿಸಲಾಗುತ್ತಿದೆ.

English summary
The Members of Parliament have taken a 30 per cent cut in their salaries in the fight against the coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X