ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಕ್ಷಣ ರೈಲು ಸೇವೆ ಆರಂಭ; ಕೇಂದ್ರ ಸರ್ಕಾರ ಹೇಳುವುದೇನು?

|
Google Oneindia Kannada News

ಬೆಂಗಳೂರು, ಏಪ್ರಿಲ್ 27 : ಕೊರೊನಾ ಹರಡದಂತೆ ತಡೆಯಲು ಜಾರಿಗೊಳಿಸಿರುವ ಲಾಕ್ ಡೌನ್ ಮೇ 3ರಂದು ಅಂತ್ಯಗೊಳ್ಳಲಿದೆ. ತಕ್ಷಣ ರೈಲು ಸೇವೆ ಆರಂಭವಾಗಲಿದೆ ಎಂಬ ಸಂದೇಶಗಳು ಹರಿದಾಡುತ್ತಿವೆ. ಇದರಿಂದ ಜನರು ಸಹ ಗೊಂದಲಕ್ಕೆ ಸಿಲುಕಿದ್ದಾರೆ.

ಕೇಂದ್ರ ಸರ್ಕಾರ ಪ್ರಯಾಣಿಕ ರೈಲು ಸೇವೆಯನ್ನು ಆರಂಭಿಸುವ ಕುರಿತು ಯಾವುದೇ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಮೇ 3ರ ತನಕ ರೈಲುಗಳು ಸಂಚಾರ ನಡೆಸುವುದಿಲ್ಲ. ಇದು ವಿಮಾನ ಸೇವೆಗೂ ಅನ್ವಯವಾಲಿದೆ.

Fake: ಭಾರತೀಯ ರೈಲ್ವೆ ಸಿಬ್ಬಂದಿ ಸಂಬಳ ಕಡಿತವಾಗಲ್ಲ Fake: ಭಾರತೀಯ ರೈಲ್ವೆ ಸಿಬ್ಬಂದಿ ಸಂಬಳ ಕಡಿತವಾಗಲ್ಲ

ರೈಲು ಮತ್ತು ವಿಮಾನ ಸೇವೆ ಆರಂಭಿಸುವ ಕುರಿತು ಸರಿಯಾದ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹಲವು ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ. ರೈಲು ಸೇವೆ ಆರಂಭಿಸಿದರೆ ಕೊರೊನಾ ಹರಡಲು ಅವಕಾಶ ನೀಡಿದಂತಾಗುತ್ತದೆ.

ವಿಶೇಷ ರೈಲು; ಬೆಂಗಳೂರಿಂದ ಹೊರಟ 950 ಯೋಧರು ವಿಶೇಷ ರೈಲು; ಬೆಂಗಳೂರಿಂದ ಹೊರಟ 950 ಯೋಧರು

Fake Message : Trains Service Will Resume Soon

ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸೋಮವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದರು. ಸಭೆಯಲ್ಲಿಯೂ ಸಹ ಅಂತರರಾಜ್ಯ ರೈಲು ಸಂಚಾರ ಆರಂಭಿಸುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಉದ್ಯೋಗಿಗಳ ಓಡಾಟಕ್ಕೆ ವಿಶೇಷ ರೈಲು ಓಡಿಸುತ್ತಿದೆ ನೈರೈತ್ಯ ರೈಲ್ವೆ ಉದ್ಯೋಗಿಗಳ ಓಡಾಟಕ್ಕೆ ವಿಶೇಷ ರೈಲು ಓಡಿಸುತ್ತಿದೆ ನೈರೈತ್ಯ ರೈಲ್ವೆ

ರಾಜ್ಯಗಳ ಮುಖ್ಯಮಂತ್ರಿಗಳು ಆರ್ಥಕತೆಯತ್ತ ಗಮನ ಹರಿಸಬೇಕು ಎಂದು ಸಭೆಯಲ್ಲಿ ಪ್ರಧಾನಿಗಳಿಗೆ ಮನವಿ ಮಾಡಿವೆ. ಅಂತರರಾಜ್ಯ ಸಂಚಾರ ಆರಂಭಿಸುವ ಕುರಿತು ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಲಾಕ್ ಡೌನ್ ಘೋಷಣೆಯಾದ ಬಳಿಕ ಎಲ್ಲಾ ಪ್ರಯಾಣಿಕ ರೈಲುಗಳ ಸಂಚಾರವನ್ನು ಭಾರತೀಯ ರೈಲ್ವೆ ಸ್ಥಗಿತಗೊಳಿಸಿದೆ. ಅಗತ್ಯ ವಸ್ತುಗಳ ಸರಬರಾಜಿಗೆ ಅನುಕೂಲವಾಗಲು ಗೂಡ್ಸ್ ರೈಲುಗಳು ಸಂಚಾರ ನಡೆಸುತ್ತಿವೆ.

English summary
All passenger trains will resume services soon. The message has been circulated several times. The government has not taken any decision on resuming train services. The same applies to the flight services as well. ಕೊರೊನಾ ಹರಡದಂತೆ ತಡೆಯಲು ಜಾರಿಗೊಳಿಸಿರುವ ಲಾಕ್ ಡೌನ್ ಮೇ 3ರಂದು ಅಂತ್ಯಗೊಳ್ಳಲಿದೆ. ತಕ್ಷಣ ರೈಲು ಸೇವೆ ಆರಂಭವಾಗಲಿದೆ ಎಂಬ ಸಂದೇಶಗಳು ಹರಿದಾಡುತ್ತಿವೆ. ಇದರಿಂದ ಜನರು ಸಹ ಗೊಂದಲಕ್ಕೆ ಸಿಲುಕಿದ್ದಾರೆ.All passenger trains will resume services soon. The message has been circulated several times. The government has not taken any decision on resuming train services. The same applies to the flight services as well.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X