ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Fake: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ ಇಳಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 27: ಕೇಂದ್ರ ಸರ್ಕಾರಿ ನೌಕರರ ಸಂಬಳ, ಪಿಂಚಣಿ ಕುರಿತಂತೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ಹರಡಿದ ಬೆನ್ನಲ್ಲೇ ನಿವೃತ್ತಿ ವಯೋಮಿತಿ ಇಳಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಕೆಲ ಮಾಧ್ಯಮಗಳಲ್ಲಿ ಈ ಕುರಿತಂತೆ ತಪ್ಪು ಮಾಹಿತಿ ಪ್ರಸಾರವಾಗಿದೆ. ನಿವೃತ್ತಿ ವಯೋಮಿತಿ ಇಳಿಸುವ ಬಗ್ಗೆ ಯಾವುದೇ ಚರ್ಚೆ ಅಥವಾ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವರು ಹೇಳಿದರು.

ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿ 60 ವರ್ಷವಾಗಿದೆ. ಕಳೆದ ಕೆಲ ವರ್ಷಗಳಿಂದ ವಯೋಮಿತಿ ವಿನಾಯಿತಿ, ಹೆಚ್ಚಳ, ಇಳಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಈ ಬಗ್ಗೆ ಸರ್ಕಾರ ಯಾವುದೇ ಶಿಫಾರಸ್ಸನ್ನು ಅಂಗೀಕರಿಸಿಲ್ಲ. ಈ ಹಬ್ಬಿರುವ ಸುಳ್ಳು ಸುದ್ದಿಯಂತೆ ನಿವೃತ್ತಿ ವಯಸ್ಸು 50 ವರ್ಷಕ್ಕೆ ತಗ್ಗಿಸಲಾಗುತ್ತದೆ ಎಂದಿದೆ. ಆದರೆ, ಈ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಯಾವುದೇ ಶಿಫಾರಸು ಮಾಡಿಲ್ಲ, ಸರ್ಕಾರವು ಚರ್ಚಿಸಿಲ್ಲ ಎಂದು ಜಿತೇಂದ್ರ ಸಿಂಗ್ ತಿಳಿಸಿದರು.

Fake news: No move to reduce retirement age of central govt employees

ಲಾಕ್ಡೌನ್ ಆರಂಭವಾದಾಗಿನಿಂದಲೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶೇ 50ರಷ್ಟು ಮಾತ್ರ ಸರ್ಕಾರಿ ಸಿಬ್ಬಂದಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಗತ್ಯ ಸೇವೆಗೆ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದರು.

English summary
There is no move to bring down the retirement age of central government employees, Minister of State for Personnel Jitendra Singh said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X