ಅಯೋಧ್ಯೆ ರಾಮ ಮಂದಿರದ ಅರ್ಚಕರ ನಕಲಿ ಆಶ್ಲೀಲ ವೀಡಿಯೊ ವೈರಲ್!
ಅಹಮದಾಬಾದ್ ಡಿಸೆಂಬರ್ 12: ಸಾಮಾಜಿಕ ಜಾಲತಾಣದಲ್ಲಿ ರಾಮಮಂದಿರದ ಅರ್ಚಕರೆಂದು ಹೇಳುವ ನಕಲಿ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದು ಆಕ್ರೋಶಕ್ಕೆ ಗುರಿಯಾಗಿದೆ. ಅಶ್ಲೀಲ ಚಿತ್ರಗಳಲ್ಲಿ ಕಂಡುಬರುವ ವ್ಯಕ್ತಿ ಮೋಹಿತ್ ಪಾಂಡೆ ಎಂದು ಹೇಳಲಾಗುತ್ತಿದೆ. ಮೋಹಿತ್ ಪಾಂಡೆ ಇತ್ತೀಚೆಗೆ ಅಯೋಧ್ಯೆಯ ಶ್ರೀರಾಮ ಮಂದಿರದ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿದ್ದರು.
ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಮೋಹಿತ್ ಪಾಂಡೆ (Mohit Pandey) ಅವರ ಹೆಸರಿನಲ್ಲಿ ನಕಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿವೆ. ಕಾಂಗ್ರೆಸ್ ನಾಯಕ ಹಿತೇಂದ್ರ ಪಿತಾಡಿಯಾ (Hitendra Pithadiya) ಅವರು ಕೂಡ ಮೋಹಿತ್ ಪಾಂಡೆಯ ಎಂದು ಹೇಳುವ ಮೂಲಕ 'ಅಶ್ಲೀಲ' ಮತ್ತು 'ನಕಲಿ' ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಅರ್ಚಕ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹಿತೇಂದ್ರ ಪಿತಾಡಿಯಾ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

ಅರ್ಚಕರ ವ್ಯಕ್ತಿತ್ವಕ್ಕೆ ಧಕ್ಕೆ
ಅಶ್ಲೀಲ ಚಿತ್ರಗಳಲ್ಲಿರುವ ವ್ಯಕ್ತಿ ಮೋಹಿತ್ ಪಾಂಡೆಯಂತೆ ಕಾಣುವ ರೀತಿಯಲ್ಲಿ ಅವರ ಚಿತ್ರಗಳನ್ನು ಬಳಸಲಾಗುತ್ತಿದೆ. ರಾಮ ಮಂದಿರದ ಮುಖ್ಯ ಅರ್ಚಕರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಈ ರೀತಿ ಕಿಡಿಗೇಡಿಗಳು ಕಿಡಿ ಹೊತ್ತಿಸಿದ್ದಾರೆ.
फर्जी खबरें फैलाने और हिंदुओं की धार्मिक भावनाओं को ठेस पहुंचाने के लिए @Uppolice और @ayodha_police से पंकज पुनिया @PankajPuniaIND और हितेंद्र पिथड़िया @HitenPithadiya खिलाफ कड़ी कार्रवाई करने का अनुरोध🙏 pic.twitter.com/bGgONIxb2V
— 1990 kid (@sank80551) December 12, 2023
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಿತೇಂದ್ರ ಪಿತಾಡಿಯಾ ಹೆಸರೂ ಮುನ್ನೆಲೆಗೆ ಬರುತ್ತಿದೆ. ಅರ್ಚಕರ ಚಿತ್ರಗಳನ್ನು ಹಂಚಿಕೊಳ್ಳುವ ಅವರ ಖಾತೆಯ ಸ್ಕ್ರೀನ್‌ಶಾಟ್‌ನೊಂದಿಗೆ ಅವರ ಹೆಸರು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣ ಬಳಕೆದಾರರೂ ಕಾಂಗ್ರೆಸ್ ನಾಯಕನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಹಿತೇಂದ್ರ ಪಿತಾಡಿಯಾ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದು ಇದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.
ಆಕ್ಷೇಪಾರ್ಹ ಫೋಟೋ ವೈರಲ್
ಹಿತೇಂದ್ರ ಅವರು ಆಕ್ಷೇಪಾರ್ಹ ಫೋಟೋಗಳನ್ನು ಪೋಸ್ಟ್ ಮಾಡಿದ್ದು, "ಈತ ಅಯೋಧ್ಯೆ ರಾಮ ಮಂದಿರದ ಅರ್ಚಕನಾ?" ಎಂದು ಹಿತೇಂದ್ರ ಅವರು ಹಂಚಿಕೊಂಡಿದ್ದಾರೆ. ವೈರಲ್ ಫೋಟೋಗಳಲ್ಲಿ ಹಣೆಯ ಮೇಲೆ ತಿಲಕ ಹಚ್ಚಿರುವ ವ್ಯಕ್ತಿ ಶ್ರೀಗಂಧ ಅನ್ನು ಲೇಪಿಸಿದ್ದು ಆತ ಮಹಿಳೆಯೊಂದಿಗೆ ತುಂಬಾ ಆತ್ಮೀಯವಾಗಿರುವುದು ಕಾಣಬಹುದು. ಮತ್ತೊಂದು ಫೋಟೋದಲ್ಲಿ ಇಬ್ಬರೂ ಪರಸ್ಪರ ಚುಂಬಿಸುತ್ತಿರುವುದು ಕಂಡು ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳನ್ನು ಎದುರಿಸಿದ ನಂತರ ಕಾಂಗ್ರೆಸ್ ನಾಯಕರು ಪೋಸ್ಟ್ ಅನ್ನು ಅಳಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಆರಂಭಿಸಲಾಗಿದೆ.
1418
— D-Intent Data (@dintentdata) December 11, 2023
ANALYSIS: Misleading
FACT: An obscene Image of a couple has been shared claiming to be of Mohit Pandey, who was recently selected as a priest in Ram Mandir Ayodhya. Upon research, we found that video on various porn website that features the same couple. (1/3) pic.twitter.com/qEOv41TmAz
ವರದಿಗಳ ಪ್ರಕಾರ, ಪೋರ್ನ್ ವೆಬ್‌ಸೈಟ್‌ನಲ್ಲಿ ಒಂದೇ ಜೋಡಿಯನ್ನು ಒಳಗೊಂಡ ಅನೇಕ ವೀಡಿಯೊಗಳು ಕಂಡುಬರುತ್ತವೆ. ವೀಡಿಯೋ ತೆಲುಗು ಅರ್ಚಕರದ್ದು. ಮೋಹಿತ್ ಪಾಂಡೆಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಮೋಹಿತ್ ಪಾಂಡೆ ಅಲ್ಲ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಮುಖಂಡ ಬಂಧನ
ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಹಿತೇಂದ್ರ ಪಿತಾಡಿಯಾ ಅವರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ ಮತ್ತು ಐಪಿಸಿ 469, 509, ಐಪಿಸಿ 295 ಎ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಮೋಹಿತ್ ಪಾಂಡೆ ಯಾರು?
ದೂಧೇಶ್ವರನಾಥ ವೇದ ವಿದ್ಯಾಪೀಠದ ವಿದ್ಯಾರ್ಥಿ ಮೋಹಿತ್ ಪಾಂಡೆ ಅಯೋಧ್ಯೆಯ ಶ್ರೀರಾಮ ಮಂದಿರದ ಮುಖ್ಯ ಅರ್ಚಕರಾಗಿ ಆಯ್ಕೆಯಾಗಿದ್ದಾರೆ. ಪುರೋಹಿತರಾಗಿ ಆಯ್ಕೆ ಮಾಡಲು ಸರಿಸುಮಾರು 3000 ಸಂದರ್ಶನಗಳಲ್ಲಿ 20 ಆಯ್ಕೆ ಮಾಡಲಾಗಿತ್ತು. ಅವರಲ್ಲಿ ಮೋಹಿತ್ ಒಬ್ಬರಾಗಿದ್ದಾರೆ. ಆಯ್ಕೆಯಾದ ಎಲ್ಲಾ ಅರ್ಚಕರು ತಮ್ಮ ನೇಮಕಾತಿಗೂ ಮೊದಲು ಆರು ತಿಂಗಳ ತರಬೇತಿಯನ್ನು ಪಡೆಯುತ್ತಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications