• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅತ್ಯಾಚಾರ ಆರೋಪದ ಮೇಲೆ ದೇವಮಾನವ ಬಂಧನ

By Mahesh
|

ಜೈಪುರ, ಸೆ. 24 : ಅತ್ಯಾಚಾರ ಆರೋಪದ ಮೇಲೆ ರಾಜಸ್ಥಾನದ ಸ್ವಯಂಘೋಷಿತ ದೇವಮಾನವ ಸ್ವಾಮಿ ಕುಶಲೇಂದ್ರ ಪ್ರಪನ್ನಾಚಾರಿ ಫಲಾಹಾರಿ ಮಹಾರಾಜ್ (70) ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಚತ್ತೀಸ್ ಗಢದ ಬಿಲಾಸ್ ಪುರ ಜಿಲ್ಲೆಯ 21 ವರ್ಷದ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಹೊತ್ತುಕೊಂಡಿದ್ದಾರೆ. ಈ ಕುರಿತಂತೆ ಸೆಪ್ಟೆಂಬರ್ 11ರಂದು ಫಲಹಾರಿ ಮಹಾರಾಜ್‌ ವಿರುದ್ಧ ದೂರು ನೀಡಲಾಗಿತ್ತು.

ಅಲ್ವಾರ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಅನಾರೋಗ್ಯದ ನೆಪ ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ, ಫಲಾಹಾರಿ ಮಹಾರಾಜ್ ಅವರನ್ನು ಆಸ್ಪತ್ರೆಯಲ್ಲಿ ಶನಿವಾರದದು ಬಂಧಿಸಲಾಗಿದೆ. ನಂತರ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ವಿಚಾರಾಣೆಗೆ ಕರೆದೊಯ್ಯಲಾಗಿದೆ ಎಂದು ಅರಾವಲಿ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಹೇಮರಾಜ್ ಮೀನಾ ಹೇಳಿದ್ದಾರೆ.

ಫಲಾಹಾರಿ ಮಹಾರಾಜ್ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಹಾಗೂ 506 (ಅಪರಾಧ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

English summary
Jaipur Police arrested a 70-year-old self-styled godman, accused of raping a law student, from a private hospital in Alwar in Rajasthan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X