ಕೈಮುಗಿದು ಪ್ರಾರ್ಥಿಸಿ 17ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಖ್ಯಾತ ಬೇಕರಿ ಮಾಲೀಕ
ಮಹಾರಾಷ್ಟ್ರದ ಸೋಲಾಪುರ ನಗರದಲ್ಲಿ ಖ್ಯಾತ ಮಲ್ತಾನಿ ಬೇಕರಿ ಮಾಲೀಕ ಹಾಗೂ ಉದ್ಯಮಿ ಸುನಿಲ್ ಮೋತಿಲಾಲ್ ಸದಾರಂಗಾನಿ (59) ಅಪಾರ್ಟ್‌ಮೆಂಟ್ ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಜನರಲ್ಲಿ ಆಘಾತ ಮೂಡಿಸಿದೆ. ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ಪನಾಶ್ ಅಪಾರ್ಟ್‌ಮೆಂಟ್ ಕಟ್ಟಡದಿಂದ ಜಿಗಿದು ಪ್ರಾಣಬಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ, ಸದಾರಂಗಾನಿ ಅವರು ಕಟ್ಟಡದ ಮೇಲ್ಛಾವಣಿಯಲ್ಲಿ ಕೈಮುಗಿದು ಪ್ರಾರ್ಥನೆ ಮಾಡುತ್ತಿರುವ ದೃಶ್ಯಗಳು ಕಾಣಿಸಿಕೊಂಡಿವೆ. ಬಳಿಕ ಅವರು ಕಟ್ಟಡದಿಂದ ಕೆಳಗೆ ಜಿಗಿದಿದ್ದು, ಈ ದೃಶ್ಯಗಳು ಜನರನ್ನು ಆತಂಕಕ್ಕೀಡುಮಾಡಿದೆ.

ಪ್ರತ್ಯಕ್ಷದರ್ಶಿಗಳು ಹಾಗೂ ಪ್ರಾಥಮಿಕ ಪೊಲೀಸ್ ವರದಿಗಳ ಪ್ರಕಾರ, ಸದಾರಂಗಾನಿ ಅವರು ಪನಾಶ್ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ್ದರು. ಲಿಫ್ಟ್ ಬಳಸದೆ ಮೆಟ್ಟಿಲುಗಳ ಮೂಲಕ ನೇರವಾಗಿ 17ನೇ ಮಹಡಿಗೆ ತೆರಳಿದ್ದರು ಎನ್ನಲಾಗಿದೆ. ಮೇಲ್ಛಾವಣಿಯಲ್ಲಿ ಅವರು ತೀವ್ರ ಮಾನಸಿಕ ಒತ್ತಡದಲ್ಲಿದ್ದಂತೆ ಕಾಣಿಸಿಕೊಂಡಿದ್ದು, ಕೈಮುಗಿದು ನಿಂತಿರುವುದನ್ನು ಕಂಡ ನಿವಾಸಿಗಳು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.
ಸಮಾಧಾನಪಡಿಸಿದ್ದ ಸೆಕ್ಯುರಿಟಿ ಗಾರ್ಡ್
ತಕ್ಷಣ ಸ್ಥಳಕ್ಕೆ ಧಾವಿಸಿದ ಸೆಕ್ಯುರಿಟಿ ಗಾರ್ಡ್ ಸದಾರಂಗಾನಿಯನ್ನು ಸಮಾಧಾನಪಡಿಸಿ ಅಲ್ಲಿಂದ ಕೆಳಗೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಆದರೆ, ನಂತರ ಸದಾರಂಗಾನಿ ಅವರು "ಮೇಲೆ ನನ್ನ ಕೀ ಉಳಿದಿದೆ" ಎಂದು ಹೇಳಿ ಮತ್ತೆ 17ನೇ ಮಹಡಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ. ಕೆಳಗೆ ಬಿದ್ದ ಪರಿಣಾಮ ಸದಾರಂಗಾನಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ತಕ್ಷಣ ಸಮೀಪದ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿದೆಯೇ ಎಂಬುದೂ ತನಿಖೆಯ ಭಾಗವಾಗಿದೆ. ಸೋಲಾಪುರದಲ್ಲಿ ದಶಕಗಳ ಕಾಲ ಜನಪ್ರಿಯತೆ ಪಡೆದ ಮಲ್ತಾನಿ ಬೇಕರಿ ಮಾಲೀಕರಾದ ಸದಾರಂಗಾನಿ ಅವರ ಅಕಾಲಿಕ ಮರಣವು ವ್ಯಾಪಾರ ವಲಯ ಹಾಗೂ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ದುಃಖ ಮೂಡಿಸಿದೆ.
ಮೃತರಿಗೆ ಸಂಬಂಧಿಸಿದಂತೆ ಯಾವುದೇ ಡೆತ್‌ನೋಟ್ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಆತ್ಮಹತ್ಯೆ ನಿರ್ಧಾರಕ್ಕೆ ನಿರ್ದಿಷ್ಟ ಕಾರಣಗಳು ಸ್ಪಷ್ಟವಾಗಿಲ್ಲ. ಈ ದುರಂತದಲ್ಲಿ ವೈಯಕ್ತಿಕ, ಆರ್ಥಿಕ ಅಥವಾ ಆರೋಗ್ಯ ಸಮಸ್ಯೆಗಳು ಪಾತ್ರ ವಹಿಸಿರಬಹುದೇ ಎಂದು ಪತ್ತೆ ಹಚ್ಚಲು ಕುಟುಂಬ ಸದಸ್ಯರು ಮತ್ತು ಪರಿಚಯಸ್ಥರೊಂದಿಗೆ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ ಸಂಖ್ಯೆ 080 - 25497777.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected].
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications